ಪುಲ್ವಾಮಾ: ಪುಲ್ವಾಮಾದ ಮಿಟ್ರಿಗಾಮ್ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ(Pulwama encounter) ಮತ್ತೊಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ಪುಲ್ವಾಮಾದ ಮಿಟ್ರಿಗಾಮ್ (Mitrigam) ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ. ಈ ಹಿಂದೆ ನಡೆದ ಎನ್‌ಕೌಂಟರ್ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿತ್ತು.ಎನ್‌ಕೌಂಟರ್‌ನಲ್ಲಿ ಹತರಾದ ಇಬ್ಬರು ಉಗ್ರರು 2022 ರ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ಮೇಲೆ ಸರಣಿ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ (IGP Kashmir Vijay Kumar) ಹೇಳಿದ್ದಾರೆ. ಹತ್ಯೆಗೀಡಾದ ಉಗ್ರರನ್ನು ಐಜಾಜ್ ಹಫೀಜ್ ಮತ್ತು ಶಾಹಿದ್ ಅಯೂಬ್ ಎಂದು ಗುರುತಿಸಲಾಗಿದ್ದು, ಅಲ್ ಬದರ್ ಭಯೋತ್ಪಾದಕ ಸಂಘಟನೆಗೆ ಸೇರಿದವರು. ಇವರಿಬ್ಬರೂ ಸ್ಥಳೀಯ ಉಗ್ರರು ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ಎರಡು ಎಕೆ 47 ರೈಫಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಶ್ಮೀರದ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ವಿಜಯ್ ಕುಮಾರ್ ಪ್ರಕಾರ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಪಾಕಿಸ್ತಾನಿ ಭಯೋತ್ಪಾದಕ ಸೇರಿದಂತೆ ಇಬ್ಬರು-ಮೂರು ಭಯೋತ್ಪಾದಕರು ಕಾರ್ಡನ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ. ನಾಗರಿಕರ ಸ್ಥಳಾಂತರದಿಂದಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
#PulwamaEncounterUpdate | One more terrorist was neutralized during the ongoing encounter. Both killed terrorists identified local terrorist as Aijaz Hafiz & Shahid Ayub. 2 AK 47 rifles recovered. Both belong to Al Badre outfit: IGP Kashmir Vijay Kumar
(File pic) pic.twitter.com/wBZ0f10UwG
— ANI (@ANI) April 27, 2022
ಭಾನುವಾರವೂ ನಡೆದಿತ್ತು ಎನ್‌ಕೌಂಟರ್
ದಕ್ಷಿಣ ಕಾಶ್ಮೀರದ ಪುಲ್ವಾಮಾದ ಪಹೂ ಪ್ರದೇಶದಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಗುಂಪು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಯೊಂದಿಗೆ ಸಂಬಂಧ ಹೊಂದಿರುವ ಕನಿಷ್ಠ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಮಾಡಿದ್ದಾರೆ. ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಅಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು. ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮುಕಾಶ್ಮೀರಕ್ಕೆ ಭೇಟಿ ನೀಡಿದ ದಿನದಂದು ಎನ್‌ಕೌಂಟರ್ ಸಂಭವಿಸಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನ ಮಿರ್ಹಾಮಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಇದನ್ನೂ ಓದಿ:Gold Price Today: ಇಂದು ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಬೆಳ್ಳಿ ದರ ಮತ್ತೆ ಕುಸಿತ
Published On - 6:38 am, Thu, 28 April 22