AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Accident: ಆಂಧ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ; ಆರು ಪ್ರಯಾಣಿಕರು ದುರ್ಮರಣ

ವಿಜಯನಗರಂ ಜಿಲ್ಲೆಯ ಕೊತ್ತವಲಸ ಮಂಡಲಂನಲ್ಲಿ ಎರಡು ರೈಲುಗಳ ಮಧ್ಯೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Oct 29, 2023 | 10:13 PM

Share

ಆಂಧ್ರಪ್ರದೇಶ: ರಾಜ್ಯದ ವಿಜಯನಗರಂ(Vizianagaram) ಜಿಲ್ಲೆಯ ಕೊತ್ತವಲಸ ಮಂಡಲಂನಲ್ಲಿ ಇಂದು(ಅ.29) ಸಂಜೆ ಎರಡು ರೈಲುಗಳ (Trains) ಮಧ್ಯೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. 40 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಅಗ್ನಿಶಾಮಕ ದಳ, ರೈಲ್ವೆ ಸಿಬ್ಬಂದಿ ಹಾಗೂ ಪೊಲೀಸರಿಂದ ರಕ್ಷಣಾ ಕಾರ್ಯ ಮುಂದುವರೆದಿದೆ.

ಮೂಲಗಳ ಪ್ರಕಾರ, ರೈಲು ವಿಶಾಖಪಟ್ಟಣದಿಂದ ರಾಯಗಡಕ್ಕೆ ಹೋಗುವ ಪ್ಯಾಸೆಂಜರ್ ರೈಲು(08532)  ಹಿಂಬದಿಯಿಂದ ಪಲಾಸ ಪ್ಯಾಸೆಂಜರ್(08504) ರೈಲಿಗೆ ಡಿಕ್ಕಿ ಹೊಡೆದು ಎರಡು ಬೋಗಿಗಳು ಹಳಿತಪ್ಪಿದ್ದು, ಅಪಘಾತದ ನಂತರ, ಪಲಾಸ ಪ್ಯಾಸೆಂಜರ್‌ನ ಒಂದು ಕೋಚ್ ಮುಖ್ಯ ಮಾರ್ಗಕ್ಕೆ ಹಾರಿದ್ದು, ಅದೇ ಮಾರ್ಗದಲ್ಲಿ ಬರುತ್ತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.  ಯಾವುದೇ ಪ್ರಾಣಹಾನಿ ಮತ್ತು ಗಾಯಾಳುಗಳ ಬಗ್ಗೆ ಇನ್ನೂ ವರದಿಯಾಗಿಲ್ಲ.

ಇದನ್ನೂ ಓದಿ:ತಮಿಳುನಾಡು: ರೈಲ್ವೆ ಹಳಿ ದಾಟುವಾಗ ರೈಲು ಹರಿದು ಮೂವರು ಮಕ್ಕಳು ಸಾವು

ಇನ್ನು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಕ್ಷಣದ ಪರಿಹಾರ ಕ್ರಮಗಳಿಗೆ ಆದೇಶಿಸಿದ್ದು, ವಿಜಯನಗರಂ ಸಮೀಪ ಇರುವ ಜಿಲ್ಲೆಗಳಾದ ವಿಶಾಖಪಟ್ಟಣಂ ಮತ್ತು ಅನಕಾಪಲ್ಲಿಯಿಂದ ಹೆಚ್ಚಿನ ಸಂಖ್ಯೆಯ ಆಂಬ್ಯುಲೆನ್ಸ್‌ಗಳನ್ನು ರವಾನಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದರ ಜೊತೆಗೆ ಗಾಯಗೊಂಡ ವ್ಯಕ್ತಿಗಳಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಆರೈಕೆಯನ್ನು ನೀಡಲು ಹತ್ತಿರದ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೆಲ್ಪ್‌ಲೈನ್‌ ನಂಬರ್ ಬಿಡುಗಡೆ ಮಾಡಿದ ರೈಲ್ವೆ ಇಲಾಖೆ

ಹೆಲ್ಪ್‌ಲೈನ್‌ ಸಂಖ್ಯೆ-08912746330, 08912744619 ಹೆಲ್ಪ್‌ಲೈನ್‌ ಸಂಖ್ಯೆ-8106053051; 8106053052 ಹೆಲ್ಪ್‌ಲೈನ್‌ ಸಂಖ್ಯೆ-8500041670; 8500041671

ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದ ಹೆಲ್ಪಲೈನ್​​ ಸಂಖ್ಯೆ 83003; 83004; 83005; 83006

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Sun, 29 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ