AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಬಾವ್ಲಾ-ಬಗೋದರ ಹೆದ್ದಾರಿಯಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ, 10 ಮಂದಿ ಸಾವು

ಗುಜರಾತ್​ನ ಬಾವ್ಲಾ-ಬಗೋದರ್ ಹೆದ್ದಾರಿಯಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಅಹಮದಾಬಾದ್​ ಗ್ರಾಮಾಂತರ ಎಸ್​ಪಿ ಮಾಹಿತಿ ನೀಡಿದ್ದಾರೆ.

ಗುಜರಾತ್: ಬಾವ್ಲಾ-ಬಗೋದರ ಹೆದ್ದಾರಿಯಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ, 10 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on:Aug 11, 2023 | 2:29 PM

Share

ಗುಜರಾತ್​ನ ಬಾವ್ಲಾ-ಬಗೋದರ್ ಹೆದ್ದಾರಿಯಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಅಹಮದಾಬಾದ್​ ಗ್ರಾಮಾಂತರ ಎಸ್​ಪಿ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಬಾಗೋದರ ಬಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಸಣ್ಣ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದಾರೆ. ಮಿನಿ ಟ್ರಕ್‌ನಲ್ಲಿದ್ದವರು ಚೋಟಿಲಾಗೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಮಿನಿ ಟ್ರಕ್ ಚೋಟಿಲಾಗೆ ಭೇಟಿ ನೀಡಿ ಅಹಮದಾಬಾದ್‌ಗೆ ಬರುತ್ತಿತ್ತು. ನಂತರ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಮುಂದೆ ಮೂರು ಜನ ಮತ್ತು ಹಿಂದೆ 10 ಜನ ಕುಳಿತಿದ್ದರು.

ಮತ್ತಷ್ಟು ಓದಿ:ಕಾರು ಹರಿದು ಶಾಲಾ ಮಕ್ಕಳಿಬ್ಬರು ಸಾವು: 5ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಈ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಸ್ಥಳೀಯರು ಸ್ಥಳಕ್ಕೆ ಆಗಮಿಸಿದರು. ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮೂವರು ಮಕ್ಕಳು ಸೇರಿದ್ದಾರೆ. ಬಾಗೋದ್ರ ಬಳಿ ಅಪಘಾತಕ್ಕೀಡಾದವರೆಲ್ಲರೂ ಕಪಾಡ್ವಂಜ್‌ನ ಸುನಾದ ಗ್ರಾಮದ ನಿವಾಸಿಗಳು ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:22 pm, Fri, 11 August 23

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ