ಗುಜರಾತ್ನ ಬಾವ್ಲಾ-ಬಗೋದರ್ ಹೆದ್ದಾರಿಯಲ್ಲಿ ಎರಡು ಟ್ರಕ್ಗಳ ನಡುವೆ ಡಿಕ್ಕಿ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಅಹಮದಾಬಾದ್ ಗ್ರಾಮಾಂತರ ಎಸ್ಪಿ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಬಾಗೋದರ ಬಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಸಣ್ಣ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದಾರೆ. ಮಿನಿ ಟ್ರಕ್‌ನಲ್ಲಿದ್ದವರು ಚೋಟಿಲಾಗೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಮಿನಿ ಟ್ರಕ್ ಚೋಟಿಲಾಗೆ ಭೇಟಿ ನೀಡಿ ಅಹಮದಾಬಾದ್‌ಗೆ ಬರುತ್ತಿತ್ತು. ನಂತರ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಮುಂದೆ ಮೂರು ಜನ ಮತ್ತು ಹಿಂದೆ 10 ಜನ ಕುಳಿತಿದ್ದರು.
ಮತ್ತಷ್ಟು ಓದಿ:ಕಾರು ಹರಿದು ಶಾಲಾ ಮಕ್ಕಳಿಬ್ಬರು ಸಾವು: 5ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಈ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಸ್ಥಳೀಯರು ಸ್ಥಳಕ್ಕೆ ಆಗಮಿಸಿದರು. ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮೂವರು ಮಕ್ಕಳು ಸೇರಿದ್ದಾರೆ. ಬಾಗೋದ್ರ ಬಳಿ ಅಪಘಾತಕ್ಕೀಡಾದವರೆಲ್ಲರೂ ಕಪಾಡ್ವಂಜ್‌ನ ಸುನಾದ ಗ್ರಾಮದ ನಿವಾಸಿಗಳು ಎಂದು ಹೇಳಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:22 pm, Fri, 11 August 23