ಬಸ್ ಚಾಲಕನನ್ನು ಗುಂಡಿಕ್ಕಿ ಕೊಂದ ಇಬ್ಬರು ಅಪರಿಚಿತ ವ್ಯಕ್ತಿಗಳು!
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಸಂಜೀವ್ ಕುಮಾರ್ ತನ್ನ ಪತ್ನಿ ಮತ್ತು ಎಂಟು ವರ್ಷದ ಮಗನೊಂದಿಗೆ ಫತೇಹ್ ಸಿಂಗ್ ಮಾರ್ಗ್‌ನಲ್ಲಿರುವ ಮಾರ್ಕೆಟ್‌ನಿಂದ ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವ ದೆಹಲಿ: ದೆಹಲಿಯ ಗೋವಿಂದಪುರಿಯಲ್ಲಿ 45 ವರ್ಷದ ವ್ಯಕ್ತಿಯೊಬ್ಬನನ್ನು ಆತನ ಕುಟುಂಬದ ಎದುರೇ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಸಂಜೀವ್ ಕುಮಾರ್, ಸ್ಥಳೀಯ ನಿವಾಸಿಯಾಗಿದ್ದು, ದೆಹಲಿ ಸಾರಿಗೆ ನಿಗಮದಲ್ಲಿ ಬಸ್ ಚಾಲಕರಾಗಿದ್ದರು ಎಂದು ಅವರು ಹೇಳಿದರು.
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಸಂಜೀವ್ ಕುಮಾರ್ ತನ್ನ ಪತ್ನಿ ಮತ್ತು ಎಂಟು ವರ್ಷದ ಮಗನೊಂದಿಗೆ ಫತೇಹ್ ಸಿಂಗ್ ಮಾರ್ಗ್‌ನಲ್ಲಿರುವ ಮಾರ್ಕೆಟ್‌ನಿಂದ ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಂಡು ಅವನ ಬೆನ್ನಿನ ಭುಜದ ಬಳಿ ತಂಗುಲಿದೆ.
ಇದನ್ನು ಓದಿ: ಮಿಜೊರಾಂನಲ್ಲಿ ಎನ್ಎಲ್ಎಫ್ಟಿ ನಾಯಕನ ಬಂಧನ
ಅವರನ್ನು ಮಜಿದಿಯಾ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅವರು ಇಂದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹತ್ಯೆಗೆ ಕಾರಣ ಇನ್ನೂ ಪತ್ತೆಯಾಗಿಲ್ಲ ಮತ್ತು ಎಲ್ಲಾ ಭಾಗಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಉಪ ಆಯುಕ್ತ (ಆಗ್ನೇಯ) ಇಶಾ ಪಾಂಡೆ ತಿಳಿಸಿದ್ದಾರೆ.
ಕುಮಾರ್ ಅವರ ಪತ್ನಿಯ ಹೇಳಿಕೆಯ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಆರೋಪಿಗಳನ್ನು ಗುರುತಿಸಲು ಮತ್ತು ನಡೆದ ಘಟನೆಗಳನ್ನು ತಿಳಿಯಲು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹ ಮಾಡಿದ್ದೇವೆ ಎಂದಿದ್ದಾರೆ.
Published On - 6:44 pm, Thu, 7 July 22