AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಎರಡು ಬಸ್​ಗಳ ಮಧ್ಯೆ ಸಿಲುಕಿದ 4 ದ್ವಿಚಕ್ರ ವಾಹನಗಳು, ಇಬ್ಬರು ಸಾವು, ಹಲವರಿಗೆ ಗಾಯ

ನಾಲ್ಕು ದ್ವಿಚಕ್ರ ವಾಹನಗಳು ಎರಡು ಬಸ್​ಗಳ ನಡುವೆ ಸಿಲುಕಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಹಲವರು ಗಾಯಗೊಡಿದ್ದಾರೆ. ಈ ಘಟನೆ ಗುಜರಾತ್​ನ ಸೂರತ್​ನಲ್ಲಿ ಶನಿವಾರ ನಡೆದಿದೆ. ಅಪಘಾತ ಸಂಭವಿಸಿದ ರಸ್ತೆಯುದ್ದಕ್ಕೂ ವಾಹನ ದಟ್ಟಣೆ ಉಂಟಾಗಿತ್ತು. ರಸ್ತೆಯಲ್ಲಿ ಎರಡು ಬಿಆರ್‌ಟಿಎಸ್ ಬಸ್‌ಗಳು ಸಂಚರಿಸುತ್ತಿದ್ದು, ಅವುಗಳ ನಡುವೆ ನಾಲ್ಕು ದ್ವಿಚಕ್ರ ವಾಹನಗಳು ಸಿಲುಕಿಕೊಂಡಿದ್ದವು.

ಗುಜರಾತ್: ಎರಡು ಬಸ್​ಗಳ ಮಧ್ಯೆ ಸಿಲುಕಿದ 4 ದ್ವಿಚಕ್ರ ವಾಹನಗಳು, ಇಬ್ಬರು ಸಾವು, ಹಲವರಿಗೆ ಗಾಯ
ಬಸ್Image Credit source: India Today
ನಯನಾ ರಾಜೀವ್
|

Updated on: Dec 24, 2023 | 9:05 AM

Share

ನಾಲ್ಕು ದ್ವಿಚಕ್ರ ವಾಹನಗಳು ಎರಡು ಬಸ್​ಗಳ ನಡುವೆ ಸಿಲುಕಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಹಲವರು ಗಾಯಗೊಡಿದ್ದಾರೆ. ಈ ಘಟನೆ ಗುಜರಾತ್​ನ ಸೂರತ್​ನಲ್ಲಿ ಶನಿವಾರ ನಡೆದಿದೆ. ಅಪಘಾತ ಸಂಭವಿಸಿದ ರಸ್ತೆಯುದ್ದಕ್ಕೂ ವಾಹನ ದಟ್ಟಣೆ ಉಂಟಾಗಿತ್ತು. ರಸ್ತೆಯಲ್ಲಿ ಎರಡು ಬಿಆರ್‌ಟಿಎಸ್ ಬಸ್‌ಗಳು ಸಂಚರಿಸುತ್ತಿದ್ದು, ಅವುಗಳ ನಡುವೆ ನಾಲ್ಕು ದ್ವಿಚಕ್ರ ವಾಹನಗಳು ಸಿಲುಕಿಕೊಂಡಿದ್ದವು.

ಮುಂದೆ ಬಸ್ ಬ್ರೇಕ್ ಹಾಕಿದ್ದು, ಎರಡನೇ ಬಸ್ ಡಿಕ್ಕಿ ಹೊಡೆದಿದ್ದು, ದ್ವಿಚಕ್ರ ವಾಹನಗಳು ಮತ್ತು ಎಂಟು ಮಂದಿ ನಜ್ಜುಗುಜ್ಜಾಗಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ ಪಿನಾಕಿನ್ ಪರ್ಮಾರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಎರಡನೇ ಬಸ್‌ಗೆ ಹಿಂದಿನಿಂದ ಆಟೋರಿಕ್ಷಾ ಡಿಕ್ಕಿ ಹೊಡೆದಿದೆ. ಚಾಲಕನನ್ನು (ಎರಡನೇ ಬಸ್ಸಿನ) ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಗಾಯಾಳುಗಳನ್ನು ಹತ್ತಿರದ ಎರಡು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಇಬ್ಬರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಬಸ್ಸುಗಳನ್ನು ರಸ್ತೆಯಿಂದ ತೆಗೆದುಹಾಕಲಾಗಿದೆ ಮತ್ತು ಸಂಚಾರ ಸಾಮಾನ್ಯ ಸ್ಥಿತಿಗೆ ಮರಳಿದೆ ಎಂದು ಡಿಸಿಪಿ ಹೇಳಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳ ಮಾಹಿತಿ ಪ್ರಕಾರ ಮೃತರನ್ನು ಬಿಖಾ ಸೋನಾವಾಲಾ ಎಂದು ಗುರುತಿಸಲಾಗಿದೆ, ಇನ್ನೊಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ