ನಾಲ್ಕು ದ್ವಿಚಕ್ರ ವಾಹನಗಳು ಎರಡು ಬಸ್ಗಳ ನಡುವೆ ಸಿಲುಕಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಹಲವರು ಗಾಯಗೊಡಿದ್ದಾರೆ. ಈ ಘಟನೆ ಗುಜರಾತ್ನ ಸೂರತ್ನಲ್ಲಿ ಶನಿವಾರ ನಡೆದಿದೆ. ಅಪಘಾತ ಸಂಭವಿಸಿದ ರಸ್ತೆಯುದ್ದಕ್ಕೂ ವಾಹನ ದಟ್ಟಣೆ ಉಂಟಾಗಿತ್ತು. ರಸ್ತೆಯಲ್ಲಿ ಎರಡು ಬಿಆರ್‌ಟಿಎಸ್ ಬಸ್‌ಗಳು ಸಂಚರಿಸುತ್ತಿದ್ದು, ಅವುಗಳ ನಡುವೆ ನಾಲ್ಕು ದ್ವಿಚಕ್ರ ವಾಹನಗಳು ಸಿಲುಕಿಕೊಂಡಿದ್ದವು.
ಮುಂದೆ ಬಸ್ ಬ್ರೇಕ್ ಹಾಕಿದ್ದು, ಎರಡನೇ ಬಸ್ ಡಿಕ್ಕಿ ಹೊಡೆದಿದ್ದು, ದ್ವಿಚಕ್ರ ವಾಹನಗಳು ಮತ್ತು ಎಂಟು ಮಂದಿ ನಜ್ಜುಗುಜ್ಜಾಗಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ ಪಿನಾಕಿನ್ ಪರ್ಮಾರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಎರಡನೇ ಬಸ್‌ಗೆ ಹಿಂದಿನಿಂದ ಆಟೋರಿಕ್ಷಾ ಡಿಕ್ಕಿ ಹೊಡೆದಿದೆ. ಚಾಲಕನನ್ನು (ಎರಡನೇ ಬಸ್ಸಿನ) ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಗಾಯಾಳುಗಳನ್ನು ಹತ್ತಿರದ ಎರಡು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಇಬ್ಬರು ಸಾವನ್ನಪ್ಪಿದ್ದಾರೆ.
ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು
ಬಸ್ಸುಗಳನ್ನು ರಸ್ತೆಯಿಂದ ತೆಗೆದುಹಾಕಲಾಗಿದೆ ಮತ್ತು ಸಂಚಾರ ಸಾಮಾನ್ಯ ಸ್ಥಿತಿಗೆ ಮರಳಿದೆ ಎಂದು ಡಿಸಿಪಿ ಹೇಳಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳ ಮಾಹಿತಿ ಪ್ರಕಾರ ಮೃತರನ್ನು ಬಿಖಾ ಸೋನಾವಾಲಾ ಎಂದು ಗುರುತಿಸಲಾಗಿದೆ, ಇನ್ನೊಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ