ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ […]

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ
Follow us
KUSHAL V
|

Updated on:Sep 21, 2020 | 7:26 PM

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ ಸಹ ಸೇವೆ ಸಲ್ಲಿಸಲಿದ್ದಾರೆ. ಈ ಹಿಂದೆ ಮಹಿಳಾ ಸಿಬ್ಬಂದಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ಇರಲಿಲ್ಲ. ಆದರೆ, ಈ ಇಬ್ಬರು ಮಹಿಳಾ ಸಿಬ್ಬಂದಿಗೆ ನೌಕಾಪಡೆಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ದೊರೆತಿದೆ.

ಇಬ್ಬರು ಮಹಿಳಾ ಆಫೀಸರ್​ಗಳು ಇತ್ತೀಚೆಗಷ್ಟೇ ಅಬ್​ಸರ್ವರ್​ ವಿಭಾಗದಲ್ಲಿ ತರಬೇತಿ ಪಡೆದು ತಮ್ಮ ಕ್ಲಾಸ್​ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಅವರ ಸಹಪಾಠಿಗಳಿಗೆ ಇಂದು ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ತೇರ್ಗಡೆ ಹೊಂದಿದ ಎಲ್ಲಾ ಆಫೀಸರ್​ಗಳಿಗೆ ರೆಕ್ಕೆ ಚಿಹ್ನೆಯನ್ನು (Wings) ಪ್ರದಾನ ಮಾಡಲಾಯಿತು.

Published On - 7:12 pm, Mon, 21 September 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ