ವಿಶಾಖಪಟ್ಟಣಂನಲ್ಲಿ ಮತ್ತೊಂದು ದುರಂತ: ಗ್ಯಾಸ್ ಸೋರಿಕೆಯಾಗಿ ಇಬ್ಬರ ಸಾವು
ಆಂಧ್ರಪ್ರದೇಶ: ವಿಶಾಖಪಟ್ಟಣಂನಲ್ಲಿ ಮತ್ತೊಂದು ಅನಿಲ ಸೋರಿಕೆ ಅಪಘಾತವಾಗಿದೆ. ವಿಶಾಖಪಟ್ಟಣಂನ ಪರವಾಡಾ ಫಾರ್ಮಾ ಸಿಟಿಯಲ್ಲಿರುವ ಸಾಯಿನಾರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಜಿಮಿಡಾಜೋಲ್ ಅನಿಲ ಸೋರಿಕೆಯಾಗಿದೆ. ಈ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ನಾಲ್ಕು ಉದ್ಯೋಗಿಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲರು ಗಜುವಾಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ನರೇಂದ್ರ ಮತ್ತು ಗೌರಿ ಶಂಕರ್ ಎಂದು ಗುರುತಿಸಲಾಗಿದೆ. ನರೇಂದ್ರ ಅವರು ಶಿಫ್ಟ್ ಇನ್‌ಚಾರ್ಜ್ ಆಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈಗ […]
ಆಂಧ್ರಪ್ರದೇಶ: ವಿಶಾಖಪಟ್ಟಣಂನಲ್ಲಿ ಮತ್ತೊಂದು ಅನಿಲ ಸೋರಿಕೆ ಅಪಘಾತವಾಗಿದೆ. ವಿಶಾಖಪಟ್ಟಣಂನ ಪರವಾಡಾ ಫಾರ್ಮಾ ಸಿಟಿಯಲ್ಲಿರುವ ಸಾಯಿನಾರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಜಿಮಿಡಾಜೋಲ್ ಅನಿಲ ಸೋರಿಕೆಯಾಗಿದೆ.
ಈ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ನಾಲ್ಕು ಉದ್ಯೋಗಿಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲರು ಗಜುವಾಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ನರೇಂದ್ರ ಮತ್ತು ಗೌರಿ ಶಂಕರ್ ಎಂದು ಗುರುತಿಸಲಾಗಿದೆ. ನರೇಂದ್ರ ಅವರು ಶಿಫ್ಟ್ ಇನ್‌ಚಾರ್ಜ್ ಆಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸಾವನ್ನಪ್ಪಿದ ಇಬ್ಬರು ಕಾರ್ಮಿಕರು ಸೋರಿಕೆ ಸ್ಥಳದಲ್ಲಿ ಹಾಜರಿದ್ದರು. ಅನಿಲ ಬೇರೆಲ್ಲಿಯೂ ಹರಡಿಲ್ಲ ಎಂದು ಪರ್ವಾಡಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಉದಯ್ ಕುಮಾರ್ ತಿಳಿಸಿದ್ದಾರೆ.