AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್​ನಲ್ಲಿ ಇಬ್ಬರು ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೇರಳದ ಕೊಲ್ಲಂ SAI ಹಾಸ್ಟೆಲ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೇಣು ಬಿಗಿದು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ, ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಚರ್ಮದ ಬಣ್ಣದ ಕಾರಣಕ್ಕೆ ಪ್ರಾಧ್ಯಾಪಕರಿಂದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಎರಡು ಘಟನೆಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ, ಶಿಕ್ಷಣ ಸಂಸ್ಥೆಗಳಲ್ಲಿನ ಸುರಕ್ಷತೆ ಹಾಗೂ ಕಿರುಕುಳದ ಗಂಭೀರ ಸಮಸ್ಯೆಗಳನ್ನು ಎತ್ತಿ ತೋರಿಸುತ್ತವೆ. ನ್ಯಾಯಕ್ಕಾಗಿ ತನಿಖೆ ನಡೆಯುತ್ತಿದೆ.

ಕೇರಳ: ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್​ನಲ್ಲಿ ಇಬ್ಬರು ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಹಾಸ್ಟೆಲ್
ನಯನಾ ರಾಜೀವ್
|

Updated on:Jan 15, 2026 | 11:46 AM

Share

ಕೊಲ್ಲಂ, ಜನವರಿ 15: ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಹಾಸ್ಟೆಲ್‌ನ ಕೋಣೆಯಲ್ಲಿ ಇಬ್ಬರು ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 17 ಮತ್ತು 15 ವರ್ಷ ವಯಸ್ಸಿನ ಇಬ್ಬರು ಹುಡುಗಿಯರು ಕೋಳಿಕ್ಕೋಡ್ ಮತ್ತು ತಿರುವನಂತಪುರಂ ನಿವಾಸಿಗಳಾಗಿದ್ದು, ಬೆಳಗಿನ ತರಬೇತಿ ಅವಧಿಗೆ ಬಂದಿರಲಿಲ್ಲ ಎಂದು ಇತರ ಹಾಸ್ಟೆಲ್‌ಗಳ ವಿದ್ಯಾರ್ಥಿಗಳು ಗಮನಿಸಿ ಬಾಗಿಲು ತೆರೆದಾಗ ಆತ್ಮಹತ್ಯೆ(Suicide)ಗೆ ಶರಣಾಗಿರುವುದು ತಿಳಿದುಬಂದಿದೆ.

ಪದೇ ಪದೇ ಬಾಗಿಲು ತಟ್ಟಿದಾಗ ಉತ್ತರಿಸದಿದ್ದಾಗ, ಹಾಸ್ಟೆಲ್ ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ ಇಬ್ಬರೂ ಹುಡುಗಿಯರು ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 15 ವರ್ಷದ ಬಾಲಕಿ ಬೇರೆ ಕೋಣೆಯಲ್ಲಿ ತಂಗಿದ್ದಳು ಆದರೆ ಬುಧವಾರ ರಾತ್ರಿ ಆ ಹುಡುಗಿಯ ಕೋಣೆಗೆ ಕಳೆದಿದ್ದಳು. ಅವರನ್ನು ಬೆಳಗಿನ ಜಾವ ಇತರ ಹಾಸ್ಟೆಲ್ ನಿವಾಸಿಗಳು ನೋಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

17 ವರ್ಷದ ಅಥ್ಲೆಟಿಕ್ಸ್ ತರಬೇತಿ ಪಡೆಯುತ್ತಿದ್ದಳು, ಮತ್ತೊಬ್ಬಳು ಕಬಡ್ಡಿ ಆಟಗಾರ್ತಿ ಮತ್ತು 10 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಕೊಠಡಿಯಿಂದ ಯಾವುದೇ ಡೆತ್​ ನೋಟ್ ಪತ್ತೆಯಾಗಿಲ್ಲ, ಸಾವಿಗೆ ನಿಖರವಾದ ಕಾರಣಗಳೂ ತಿಳಿದುಬಂದಿಲ್ಲ. ಅವರಿಬ್ಬರು ಮೊದಲೇ ಪರಿಚಿತರೇ, ಆತ್ಮಹತ್ಯೆ ಮಾಡಿಕೊಳ್ಳಲು ಅವರ ಮುಂದೆ ಎದುರಾಗಿದ್ದ ಸಮಸ್ಯೆಗಳೇನು ಎಂಬುದನ್ನು ಪೊಲೀಸರು ಪತ್ತೆ ಮಾಡುತ್ತಿದ್ದಾರೆ.

ಮತ್ತಷ್ಟು ಓದಿ: ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಸಕರು ಕೆಲಸದಿಂದ ವಜಾ

ಚರ್ಮ ಕಪ್ಪೆಂದು ನಿಂದನೆ, ವಿದ್ಯಾರ್ಥಿನಿ ಆತ್ಮಹತ್ಯೆ ಬೆಂಗಳೂರಿನ ಖಾಸಗಿ ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಚರ್ಮದ ಬಣ್ಣಕ್ಕೆ ಸಂಬಂಧಿಸಿದ ನಿರಂತರ ಕಿರುಕುಳ ಮತ್ತು ಅವಮಾನವನ್ನು ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪದ ಮೇರೆಗೆ ಪೊಲೀಸರು ಐವರು ಪ್ರಾಧ್ಯಾಪಕರು ಮತ್ತು ಪ್ರಾಂಶುಪಾಲರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಯಶಸ್ವಿನಿ ಕಳೆದ ವಾರ ಶವವಾಗಿ ಪತ್ತೆಯಾಗಿದ್ದಳು.

ಯಶಸ್ವಿನಿಯ ತಾಯಿ ಪರಿಮಳಾ ನೀಡಿದ ದೂರಿನ ಪ್ರಕಾರ, ಆಕೆಯ ಪ್ರಾಧ್ಯಾಪಕರು ಯಶಸ್ವಿನಿ ಅವರನ್ನು ಮಾನಸಿಕ ಕಿರುಕುಳ ಮತ್ತು ಅವಮಾನಕ್ಕೆ ಒಳಪಡಿಸಿದ್ದಾರೆ. ಪರಿಮಳಾ ಅವರು ತಮ್ಮ ಮಗಳ ಚರ್ಮದ ಬಣ್ಣದ ಬಗ್ಗೆ ಸಹಪಾಠಿಗಳ ಮುಂದೆ ಅಪಹಾಸ್ಯ ಮಾಡಿದ್ದಾರೆ, ಪ್ರಾಧ್ಯಾಪಕರು ನೀವು ಕಪ್ಪು ಚರ್ಮದವರು, ನೀವು ವೈದ್ಯನಾಗಲು ಅರ್ಹರೇ ಎಂದು ಟೀಕಿಸಿದ್ದಾಗಿ ಆರೋಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:46 am, Thu, 15 January 26

ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ