ತೆಲಂಗಾಣ: 8 ವರ್ಷದ ಬಾಲಕಿ ಮೇಲೆ ಇಬ್ಬರಿಂದ ಲೈಂಗಿಕ ದೌರ್ಜನ್ಯ, ಆರೋಪಿ ಹಿಡಿದು ಥಳಿಸಿದ ಜನ
ಮನೆಯ ಎದುರು ಆಟವಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಂಗಾರೆಡ್ಡಿಯಲ್ಲಿ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಇಬ್ಬರು ಅಪ್ರಾಪ್ತ ಬಾಲಕಿಯನ್ನು ಪೊದೆಯ ಹಿಂದೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ರಕ್ತಸ್ರಾವವಾಗಲು ಆರಂಭಿಸಿದಾಗ ಆಕೆ ಜೋರಾಗಿ ಕೂಗಿಕೊಂಡಿದ್ದಾಳೆ, ಸ್ಥಳೀಯರು ಅಲ್ಲಿಗೆ ಓಡಿ ಬಂದು ಆಕೆಯನ್ನು ರಕ್ಷಿಸಿ ಆರೋಪಿಯನ್ನು ಹಿಡಿದು ಥಳಿಸಿದ್ದಾರೆ.

ತೆಲಂಗಾಣ, ಫೆಬ್ರವರಿ 21: ಮನೆಯ ಎದುರು ಆಟವಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಂಗಾರೆಡ್ಡಿಯಲ್ಲಿ ಘಟನೆ ವರದಿಯಾಗಿದ್ದು ಮದ್ಯದ ಅಮಲಿನಲ್ಲಿದ್ದ ಇಬ್ಬರು ಅಪ್ರಾಪ್ತ ಬಾಲಕಿಯನ್ನು ಪೊದೆಯ ಹಿಂದೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.
ರಕ್ತಸ್ರಾವವಾಗಲು ಆರಂಭಿಸಿದಾಗ ಆಕೆ ಜೋರಾಗಿ ಕೂಗಿಕೊಂಡಿದ್ದಾಳೆ, ಸ್ಥಳೀಯರು ಅಲ್ಲಿಗೆ ಓಡಿ ಬಂದು ಆಕೆಯನ್ನು ರಕ್ಷಿಸಿ ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಮತ್ತೊಬ್ಬ ಓಡಿ ಹೋಗಿದ್ದಾನೆ. ಗಾಯಗೊಂಡಿದ್ದ ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೇಡಕ್ನಲ್ಲಿ ಇದೇ ರೀತಿಯ ಘಟನೆ ಒಂದು ತಿಂಗಳ ಹಿಂದೆ ನಡೆದಿತ್ತು. ಮಾನಸಿಕ ಅಸ್ವಸ್ಥ ಮಹಿಳೆಯನ್ನು ಮೂವರು ಪುರುಷರು ಅಪಹರಿಸಿ ಅತ್ಯಾಚಾರ ನಡೆಸಿದ್ದರು. ಜನವರಿ 8 ರಂದು ಘಟನೆ ನಡೆದಿತ್ತು. ಮಹಿಳೆ ನಿಜಾಬಾದ್ ನಿವಾಸಿ ಎಂಬುದು ತಿಳಿದುಬಂದಿತ್ತು. ಆ ಮಹಿಳೆ ಹಲವು ದಿನಗಳಿಂದ ಅದೇ ಪ್ರದೇಶದಲ್ಲಿ ಓಡಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮತ್ತಷ್ಟು ಓದಿ:ಭೋಪಾಲ್: ಐವರು ಮಹಿಳೆಯರ ಜತೆ ಮದುವೆ, ಸ್ನೇಹಿತನ ತಂಗಿಯ ಮೇಲೂ ಕಣ್ಣು, ಒಪ್ಪದಿದ್ದಕ್ಕೆ ಗೆಳೆಯನ ಹತ್ಯೆ
2024ರ ಸೆಪ್ಟೆಂಬರ್ನಲ್ಲಿ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ 9 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಬಾಲಕಿಯ ಪೋಷಕರು ಆಕೆ ಗರ್ಭಿಣಿಯಾಗಿದ್ದಾಳೆಂದು ತಿಳಿದು ಆರೋಪಿಗಳ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣ ದಾಖಲಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




