AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ, ಎಚ್ಆರ್ ಮುಖ್ಯಸ್ಥರಿಗೆ 10 ದಿನ ನ್ಯಾಯಾಂಗ ಬಂಧನ

ಕಳೆದ ವಾರ, ದೆಹಲಿ ಹೈಕೋರ್ಟ್ ವೆಬ್‌ಸೈಟ್ ಸಂಸ್ಥಾಪಕ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥರಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ್ದು, ಅವರ ವಿರುದ್ಧದ ಆರೋಪಗಳು ತಕ್ಷಣದ ಪರಿಹಾರವನ್ನು ನೀಡಬಹುದಾದಂತಹ ಸ್ವರೂಪದಲ್ಲಿರಲಿಲ್ಲ ಎಂದು ಹೇಳಿದರು. ಆರೋಪಗಳು ನಿಮಗೆ ತಕ್ಷಣದ ಪರಿಹಾರವನ್ನು ನೀಡುವಂತಹ ಸ್ವರೂಪವನ್ನು ತೋರುತ್ತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದರು.

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ, ಎಚ್ಆರ್ ಮುಖ್ಯಸ್ಥರಿಗೆ 10 ದಿನ ನ್ಯಾಯಾಂಗ ಬಂಧನ
ಪ್ರಬೀರ್ ಪುರಕಾಯಸ್ಥ
ರಶ್ಮಿ ಕಲ್ಲಕಟ್ಟ
|

Updated on: Oct 10, 2023 | 8:31 PM

Share

ದೆಹಲಿ ಅಕ್ಟೋಬರ್ 10: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ (NewsClick) ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ (Prabir Purkayastha) ಮತ್ತು ಪೋರ್ಟಲ್‌ನ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ (Amit Chakraborty) ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಚೀನಾ ಪರ ಪ್ರಚಾರಕ್ಕಾಗಿ ಪೋರ್ಟಲ್‌ಗೆ ಹಣ ಬಂದಿದೆ ಎಂಬ ಆರೋಪದ ಮೇಲೆ ಅಕ್ಟೋಬರ್ 3 ರಂದು ದೆಹಲಿ ಪೊಲೀಸ್ ವಿಶೇಷ ಘಟಕ ಇಬ್ಬರನ್ನು ಬಂಧಿಸಿತ್ತು.

ಕಳೆದ ವಾರ, ದೆಹಲಿ ಹೈಕೋರ್ಟ್ ವೆಬ್‌ಸೈಟ್ ಸಂಸ್ಥಾಪಕ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥರಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ್ದು, ಅವರ ವಿರುದ್ಧದ ಆರೋಪಗಳು ತಕ್ಷಣದ ಪರಿಹಾರವನ್ನು ನೀಡಬಹುದಾದಂತಹ ಸ್ವರೂಪದಲ್ಲಿರಲಿಲ್ಲ ಎಂದು ಹೇಳಿದರು. ಆರೋಪಗಳು ನಿಮಗೆ ತಕ್ಷಣದ ಪರಿಹಾರವನ್ನು ನೀಡುವಂತಹ ಸ್ವರೂಪವನ್ನು ತೋರುತ್ತಿಲ್ಲ. ನೀವು ಸರಿ ಅಥವಾ ತಪ್ಪಾಗಿರಬಹುದು, ಆದರೆ ನಾವು ಅವರಿಗೆ (ದೆಹಲಿ ಪೊಲೀಸರಿಗೆ) ವಿಚಾರಣೆಗಾಗಿ ನೀಡಬೇಕಾಗಿದೆ ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರು ಇಬ್ಬರು ಬಂಧಿತರನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ತಿಳಿಸಿದರು.

ಕಳೆದ ಮಂಗಳವಾರ ಕನಿಷ್ಠ 400 ದೆಹಲಿ ಪೊಲೀಸ್ ಅಧಿಕಾರಿಗಳು ದೆಹಲಿ-ಎನ್‌ಸಿಆರ್ ಮತ್ತು ಮುಂಬೈನ 30 ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಪತ್ರಕರ್ತರು,ಫ್ರೀಲ್ಯಾನ್ಸರ್​​ಗಳು, ಬರಹಗಾರರು ಮತ್ತು ವಿಡಂಬನಕಾರರು ಸೇರಿದಂತೆ 46 ಜನರನ್ನು ಪ್ರಶ್ನಿಸಿದ್ದಾರೆ. ದಿ ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಪ್ರಕಟವಾದ ತನಿಖೆಯ ನಂತರ ಈ ಪೋರ್ಟಲ್ ಜಾಗತಿಕ ನೆಟ್‌ವರ್ಕ್‌ನ ಭಾಗವಾಗಿದೆ ಮತ್ತು ಚೀನಾದಿಂದ ಹಣ ಪಡೆದಿದೆ ಎಂದು ಆರೋಪಿಸಿದ ನಂತರ ದಾಳಿ ನಡೆಸಲಾಗಿದೆ.

2009 ರಲ್ಲಿ ಸ್ಥಾಪಿಸಲಾದ ಪೋರ್ಟಲ್ 2021 ರಲ್ಲಿ ತೊಂದರೆಗೆ ಸಿಲುಕಿತು. 2020 ರಲ್ಲಿ ದೆಹಲಿ ಪೋಲೀಸ್‌ನ ಆರ್ಥಿಕ ಅಪರಾಧ ವಿಭಾಗವು ದಾಖಲಿಸಿದ ಎಫ್‌ಐಆರ್ ಆಧರಿಸಿ ಇಡಿ ಪ್ರಕರಣವನ್ನು ದಾಖಲಿಸಿತು. ಈ ಆರೋಪಗಳಲ್ಲಿ ಷೇರುಗಳ ಅತಿಯಾದ ಮೌಲ್ಯ, ಹಣವನ್ನು ಬೇರೆಡೆಗೆ ತಿರುಗಿಸುವುದು ಮತ್ತು ಎಫ್‌ಡಿಐ ನಿಯಮಗಳ ಉಲ್ಲಂಘನೆ ಸೇರಿದೆ.

ಇದನ್ನೂ ಓದಿ: ನ್ಯೂಸ್​​ಕ್ಲಿಕ್​​ನ ಮಾಜಿ ಸಿಬ್ಬಂದಿಯ ಕೇರಳದಲ್ಲಿರುವ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

ಒಂದು ವರ್ಷದ ನಂತರ, ಕೇಂದ್ರೀಯ ಸಂಸ್ಥೆಯು ವೆಬ್‌ಸೈಟ್‌ನ ಆವರಣ ಮತ್ತು ಅದರ ಸಂಸ್ಥಾಪಕ ಪುರಕಾಯಸ್ಥ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಿತು,ಕಂಪನಿಯು ಸೇವೆಗಳಿಗಾಗಿ ಕೋಟಿಗಟ್ಟಲೆ ಹಣವನ್ನು ಪಡೆದಿದೆ ಎಂದು ಆರೋಪಿಸಲಾಗಿದ್ದು, ಅದರಲ್ಲಿ ₹1.55 ಕೋಟಿಯನ್ನು ಎಲೆಕ್ಟ್ರಿಷಿಯನ್‌ಗೆ ನೀಡಲಾಗಿದ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಹಿಂದೂಸ್ತಾನ್ ಟೈಮ್ಸ್ ಗೆತಿಳಿಸಿದ್ದಾರೆ.

“ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳಾದ ಪುರಕಾಯಸ್ಥ ಮತ್ತು ಗೌತಮ್ ನವ್ಲಾಖಾ ಅವರು ಅಮೆರಿಕದ ರಕ್ಷಣಾ ಪೂರೈಕೆದಾರ ಕಂಪನಿಯೊಂದಿಗೆ ಕಂಪನಿಯನ್ನು ಸಂಯೋಜಿಸಿದ್ದಾರೆ. ಪುರಕಾಯಸ್ಥ ಮತ್ತು ನೆವಿಲ್ಲೆ ರಾಯ್ ಸಿಂಗಮ್ ನಡುವೆ ಭಾರತದ ಪ್ರತಿಷ್ಠೆಗೆ ಕಳಂಕ ತರುವ ಉದ್ದೇಶದಿಂದ ಕೆಲವು ಇ-ಮೇಲ್‌ಗಳನ್ನು ವಿನಿಮಯ ಮಾಡಿಕೊಂಡಿರುವುದನ್ನು ನಾವು ಕಂಡುಕೊಂಡಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ