
ಉದಯಪುರ, ಆಗಸ್ಟ್ 12: ವ್ಯಕ್ತಿಯೊಬ್ಬ ಹೊಲದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉದಯಪುರದಲ್ಲಿ ನಡೆದಿದೆ. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಗ್ರಾಮಸ್ಥರಿಂದ ಭಾರೀ ಪ್ರತಿಭಟನೆ ನಡೆಯಿತು.
ಭಾನುವಾರ ಸಂಜೆ 7.30ರ ಸುಮಾರಿಗೆ ಬಾಲಕಿ ಒಬ್ಬಂಟಿಯಾಗಿ ಹೊಲದ ಬಳಿ ಹೋಗಿದ್ದಳು, ಪೊಲೀಸ್ ಅಧಿಕಾರಿ ಹುಕಮ್ ಸಿಂಗ್ ಮಾಹಿತಿ ನೀಡಿ, ಆರೋಪಿಯು ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿದ್ದು, ಆಕೆಯ ಬಾಯಿಯನ್ನು ಮುಚ್ಚಿ, ಹತ್ತಿರದ ಪೊದೆಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾನೆ.
ಬಳಿಕ ಆರೋಪಿ ಪರಾರಿಯಾಗಿದ್ದಾನೆ, ಸಂಕಷ್ಟದಲ್ಲಿದ್ದ ಬಾಲಕಿ ಮನೆಗೆ ತಲುಪಿ ತನ್ನ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಅವರು ಆಕೆಯನ್ನು ಮಹಾರಾಣಾ ಭೂಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಬೆಳಗಾವಿ: 2023ರಲ್ಲೇ ಮಸೀದಿಯಲ್ಲಿ ಮೌಲ್ವಿಯಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಬಂಧನ
ಸೋಮವಾರ ಬೆಳಗ್ಗೆ ಗ್ರಾಮಸ್ಥರೆಲ್ಲರೂ ದಬೋಕ್ ಪೊಲೀಸ್ ಠಾಣೆಯಲ್ಲಿ ಜಮಾಯಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರು ಹೆದ್ದಾರಿಯ ಸರ್ವಿಸ್ ರಸ್ತೆಯನ್ನು ನಿರ್ಬಂಧಿಸುವ ಮೊದಲು ಎಸ್‌ಡಿಎಂ, ಪೊಲೀಸ್ ಮತ್ತು ಖಾಸಗಿ ವಾಹನಗಳು ಮತ್ತು ಬಸ್‌ಗಳನ್ನು ಧ್ವಂಸಗೊಳಿಸಿದರು. ಈ ದಿಗ್ಬಂಧನವು ಆ ಪ್ರದೇಶದಲ್ಲಿ ದೀರ್ಘ ಸಂಚಾರ ದಟ್ಟಣೆಗೆ ಕಾರಣವಾಯಿತು.
ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಲು ಮೂರು ಠಾಣೆಗಳ ಪೊಲೀಸರನ್ನು ನಿಯೋಜಿಸಲಾಗಿದ್ದು, ಜನಸಮೂಹವನ್ನು ಚದುರಿಸಲು ಹರಸಾಹಸ ಪಡಬೇಕಾಯಿತು. ಅಧಿಕಾರಿಗಳು ಇನ್ನೂ ಗ್ರಾಮಸ್ಥರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ.
ವಿಧಿವಿಜ್ಞಾನ ತಂಡಗಳು ಮತ್ತು ಶ್ವಾನ ದಳವು ಘಟನಾ ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಹತ್ತಿರದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
ಒಡಿಶಾ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ತಪ್ಪಿಸಿಕೊಂಡು ಬಂದು ಟ್ರಕ್ ಚಾಲಕನ ಕೈಗೆ ಸಿಕ್ಕಿ ನರಳಿದ ಬಾಲಕಿ
ಒಂದೇ ದಿನ ಅಪ್ರಾಪ್ತೆ ಮೇಲೆ ಬೇರೆ ಬೇರೆ ವ್ಯಕ್ತಿಗಳಿಂದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಬಾಲಕಿ ತನ್ನ ಸ್ನೇಹಿತ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಮೂವರು ಆಕೆಯನ್ನು ಅಪಹರಿಸಿ ಮಲ್ಕನ್‌ಗಿರಿ ಪಟ್ಟಣದಿಂದ 10-15 ಕಿ.ಮೀ ದೂರದಲ್ಲಿರುವ ಅರಣ್ಯ ಪ್ರದೇಶಕ್ಕೆ ಎಳೆದೊಯ್ದಿದ್ದರು.ಅಲ್ಲಿ ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರವೆಸಗಿದ್ದರು, ಪೊಲೀಸ್ ಮೂಲಗಳ ಪ್ರಕಾರ ಆಕೆಗೆ ಚಿತ್ರಹಿಂಸೆ ನೀಡಿ ಅತ್ಯಾಚಾರ ಮಾಡಲಾಗಿದೆ.
ಆಕೆ ಹೇಗೋ ಆ ಕಾಡಿನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಳು. ಅದೇ ರೀತಿ ಮತ್ತೊಂದು ಸಮಸ್ಯೆಗೆ ಸಿಲುಕಿದ್ದಳು. ಮಲ್ಕಂಗಿರಿ ಪಟ್ಟಣದ ಹೊರವಲಯದಲ್ಲಿ, ಮೊದಲ ದಾಳಿಕೋರರಿಂದ ತಪ್ಪಿಸಿಕೊಂಡ ನಂತರ ಟ್ರಕ್ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಸ್ಥಳೀಯರು ಚಾಲಕನ ಮೇಲೆ ಅನುಮಾನ ಪಟ್ಟು ಅವನೊಂದಿಗಿರುವ ಅಪ್ರಾಪ್ತ ಬಾಲಕಿಯನ್ನು ಗಮನಿಸಿ ಆಕೆಯನ್ನು ರಕ್ಷಿಸಿದ್ದಾರೆ. ಮಲ್ಕಂಗಿರಿ ಪೊಲೀಸರು ತನಿಖೆ ನಡೆಸಿ ಟ್ರಕ್ ಚಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೊದಲ ಅತ್ಯಾಚಾರ ಘಟನೆ ಮಲ್ಕನ್‌ಗಿರಿ ಪಟ್ಟಣದಿಂದ ಸುಮಾರು 10-15 ಕಿಲೋಮೀಟರ್ ದೂರದಲ್ಲಿರುವ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ. ಟ್ರಕ್ ಚಾಲಕ ಸೇರಿದಂತೆ ನಾಲ್ವರು ವ್ಯಕ್ತಿಗಳು ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ