AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udaipur: ಐವತ್ತೈದನೇ ವಯಸ್ಸಿನಲ್ಲಿ 17ನೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಮಹಿಳೆಯೊಬ್ಬರು ತಮ್ಮ 55ನೇ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದ್ದಾರೆ. ರೇಖಾ ಗಲ್ಬೆಲಿಯಾ ಎಂಬ ಮಹಿಳೆ ಈ ಹಿಂದೆ 16 ಮಕ್ಕಳಿಗೆ ಜನ್ಮ ನೀಡಿದ್ದರು. ಅವರ ನಾಲ್ವರು ಗಂಡು ಮಕ್ಕಳು ಮತ್ತು ಒಂದು ಹೆಣ್ಣು ಮಗಳು ಹುಟ್ಟಿದ ಕೂಡಲೇ ಸಾವನ್ನಪ್ಪಿದ್ದವು. ಅವರ ಬದುಕುಳಿದ ಮಕ್ಕಳ ಪೈಕಿ ಐದು ಮಂದಿಗೆ ಮದುವೆಯಾಗಿದ್ದು, ಅವರು ತಮ್ಮದೇ ಆದ ಮಕ್ಕಳನ್ನು ಹೊಂದಿದ್ದಾರೆ.

Udaipur: ಐವತ್ತೈದನೇ ವಯಸ್ಸಿನಲ್ಲಿ 17ನೇ ಮಗುವಿಗೆ ಜನ್ಮ ನೀಡಿದ ಮಹಿಳೆ
ರೇಖಾImage Credit source: India Today
ನಯನಾ ರಾಜೀವ್
|

Updated on:Aug 28, 2025 | 7:49 AM

Share

ಉದಯಪುರ, ಆಗಸ್ಟ್​ 28: ಮಹಿಳೆಯೊಬ್ಬರು ತಮ್ಮ ಐವತ್ತೈದನೇ ವಯಸ್ಸಿನಲ್ಲಿ ತಮ್ಮ 17ನೇ ಮಗು(Baby)ವಿಗೆ ಜನ್ಮ ನೀಡಿರುವ ಘಟನೆ ಉದಯಪುರದಲ್ಲಿ ನಡೆದಿದೆ. ರೇಖಾ ಗಲ್ಬೆಲಿಯಾ ಎಂಬ ಮಹಿಳೆ ಈ ಹಿಂದೆ 16 ಮಕ್ಕಳಿಗೆ ಜನ್ಮ ನೀಡಿದ್ದರು. ಅವರ ನಾಲ್ವರು ಗಂಡು ಮಕ್ಕಳು ಮತ್ತು ಒಂದು ಹೆಣ್ಣು ಮಗಳು ಹುಟ್ಟಿದ ಕೂಡಲೇ ಸಾವನ್ನಪ್ಪಿದ್ದವು.

ಅವರ ಬದುಕುಳಿದ ಮಕ್ಕಳ ಪೈಕಿ ಐದು ಮಂದಿಗೆ ಮದುವೆಯಾಗಿದ್ದು, ಅವರು ತಮ್ಮದೇ ಆದ ಮಕ್ಕಳನ್ನು ಹೊಂದಿದ್ದಾರೆ.ರೇಖಾ ಅವರ ಪತಿ ಕಾವ್ರಾ ಕಲ್ಬೆಲಿಯಾ ಕುಟುಂಬದ ಆರ್ಥಿಕ ಸಂಕಷ್ಟಗಳನ್ನು ಎತ್ತಿ ತೋರಿಸಿದರು.ಅವರಿಗೆ ಸ್ವಂತ ಮನೆ ಇಲ್ಲ ಮತ್ತು ಜೀವನ ನಿರ್ವಹಣೆಗೆ ಕಷ್ಟಪಡುತ್ತಿದ್ದಾರೆ ಎಂದು ಅವರು ಹೇಳಿದರು. ನಮ್ಮ ಮಕ್ಕಳನ್ನು ಪೋಷಿಸಲು, ನಾನು ಬಡ್ಡಿಗೆ ಹಣವನ್ನು ಸಾಲ ಪಡೆಯಬೇಕಾಯಿತು. ನಾನು ಲಕ್ಷಾಂತರ ರೂಪಾಯಿಗಳನ್ನು ಮರುಪಾವತಿಸಿದ್ದೇನೆ, ಆದರೆ ಸಾಲದ ಬಡ್ಡಿಯನ್ನು ಇನ್ನೂ ಸಂಪೂರ್ಣವಾಗಿ ಪಾವತಿಸಲಾಗಿಲ್ಲ ಎಂದು ಅವರು ಹೇಳಿದರು.

ಬಾಟಲಿ,  ಚಿಂದಿ ಸಂಗ್ರಹಿಸುವ ಮೂಲಕ ಬದುಕು ಸಾಗಿಸುತ್ತಿರುವ ಈ ಕುಟುಂಬವು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ಸಹ ಸಾಧ್ಯವಾಗುತ್ತಿಲ್ಲ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮನೆ ಮಂಜೂರಾಗಿದ್ದರೂ, ಭೂಮಿ ನಮ್ಮ ಹೆಸರಿನಲ್ಲಿಲ್ಲದ ಕಾರಣ ನಾವು ನಿರಾಶ್ರಿತರಾಗಿಯೇ ಉಳಿದಿದ್ದೇವೆ. ಆಹಾರ, ಮದುವೆ ಅಥವಾ ಶಿಕ್ಷಣಕ್ಕೆ ನಮ್ಮಲ್ಲಿ ಸಾಕಷ್ಟು ಸಂಪನ್ಮೂಲಗಳಿಲ್ಲ. ಈ ಸಮಸ್ಯೆಗಳು ನಮ್ಮನ್ನು ಪ್ರತಿದಿನ ಕಾಡುತ್ತಿವೆ ಎಂದು ಕಾವ್ರಾ ಹೇಳಿದ್ದಾರೆ.

ಮತ್ತಷ್ಟು ಓದಿ:

ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವೇಳೆ ಮಗುವಿಗೆ ಜನ್ಮ ನೀಡಿದ ಅಂತಿಮ ವರ್ಷದ ವಿದ್ಯಾರ್ಥಿನಿ

ರೇಖಾ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ, ಇದು ಅವರ ನಾಲ್ಕನೇ ಮಗು ಎಂದು ಕುಟುಂಬ ಸದಸ್ಯರು ನಮಗೆ ತಿಳಿಸಿದರು. ನಂತರ, ಇದು ಅವರ 17 ನೇ ಮಗು ಎಂದು ತಿಳಿದುಬಂದಿದೆ ಎಂದು ಜಾಡೋಲ್ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞ ರೋಷನ್ ದರಂಗಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:47 am, Thu, 28 August 25

ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ