ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ನಂತರ ಮತ್ತೆ ಸರ್ಕಾರ ಪುನರ್ರಚಿಸಲು ಸಾಧ್ಯವಿಲ್ಲ, ರಾಜ್ಯಪಾಲರ ಕ್ರಮದ ಬಗ್ಗೆ ಸುಪ್ರೀಂ ಗರಂ

ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಅವರನ್ನು ಮತ್ತೆ ಮಹಾರಾಷ್ಟ್ರ ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಉರುಳಿಸಿದ ಫ್ಲೋರ್ ಟೆಸ್ಟ್ (ಬಹುಮತ ಸಾಬೀತು) ಕೂಡ ಕಾನೂನುಬದ್ಧವಾಗಿಲ್ಲ.

ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ನಂತರ ಮತ್ತೆ ಸರ್ಕಾರ ಪುನರ್ರಚಿಸಲು ಸಾಧ್ಯವಿಲ್ಲ, ರಾಜ್ಯಪಾಲರ ಕ್ರಮದ ಬಗ್ಗೆ ಸುಪ್ರೀಂ ಗರಂ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:May 11, 2023 | 2:21 PM

ದೆಹಲಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕಳೆದ ವರ್ಷ ರಾಜ್ಯದಲ್ಲಿ ರಾಜ್ಯಪಾಲರು ಬದಲಾವಣೆಗೆ ಕಾರಣವಾದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಉದ್ಧವ್ ಠಾಕ್ರೆ ಮತ್ತು ಮುಖ್ಯಮಂತ್ರಿ ಎಂ ಏಕನಾಥ್ ಶಿಂಧೆ ಬಣಗಳು ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಮೇ 11) ತನ್ನ ತೀರ್ಪನ್ನು ಪ್ರಕಟಿಸಿದೆ. ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಅವರನ್ನು ಮತ್ತೆ ಮಹಾರಾಷ್ಟ್ರ ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಉರುಳಿಸಿದ ಫ್ಲೋರ್ ಟೆಸ್ಟ್ (ಬಹುಮತ ಸಾಬೀತು) ಕೂಡ ಕಾನೂನುಬದ್ಧವಾಗಿಲ್ಲ. ಉದ್ಧವ್ ಅವರು ಸದನದಲ್ಲಿ ಬಹುಮತವನ್ನು ಕಳೆದುಕೊಂಡಿದ್ದಾರೆ ಎಂಬ ತೀರ್ಮಾನಕ್ಕೆ ಬಂದ ರಾಜ್ಯಪಾಲ ಬಿಎಸ್ ಕೋಶ್ಯಾರಿ ಅವರು ತಪ್ಪೆಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ತಿಳಿಸಿದೆ. ಅಂತರ್‌ ಅಥವಾ ಪಕ್ಷದೊಳಗಿನ ವಿವಾದಗಳನ್ನು ಬಗೆಹರಿಸಲು ಫ್ಲೋರ್ ಟೆಸ್ಟ್ ನ್ನು ಮಾಧ್ಯಮವಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ದೇವೇಂದ್ರ ಫಡ್ನವಿಸ್ ಮತ್ತು ಸ್ವತಂತ್ರ ಶಾಸಕರು ಅವಿಶ್ವಾಸ ನಿರ್ಣಯ ಮಂಡಿಸಲಿಲ್ಲ ಮತ್ತು ರಾಜ್ಯಪಾಲರ ವಿವೇಚನೆಯು ಕಾನೂನಿಗೆ ಅನುಗುಣವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ನಿಜವಾದ ಶಿವಸೇನೆ ಯಾರು ಎಂಬುದನ್ನು ಸ್ಪೀಕರ್ ಮತ್ತು ಚುನಾವಣಾ ಆಯೋಗ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅನರ್ಹತೆಯ ಪ್ರಶ್ನೆಯನ್ನು ಸಹ ಸ್ಪೀಕರ್ ನಿರ್ಧರಿಸುತ್ತಾರೆ.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು

2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯು ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳುವ ವಿಷಯದ ಬಗ್ಗೆ ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಸಂಬಂಧವನ್ನು ಕಡಿದುಕೊಂಡಿತು. ಠಾಕ್ರೆ, ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಿದರು.

ಇದನ್ನೂ ಓದಿ: Uddhav Thackeray: ಉದ್ಧವ್ ಠಾಕ್ರೆ ಬಣದ ಮನವಿ ತಿರಸ್ಕರಿಸಿದ ಸುಪ್ರೀಂ

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಜತೆಗೆ ನ್ಯಾಯಮೂರ್ತಿಗಳಾದ ಎಂಆರ್ ಶಾ, ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರ ಸಾಂವಿಧಾನಿಕ ಪೀಠವು 2022ರ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ವಿಷಯದ ಕುರಿತು ವ್ಯವಹರಿಸುತ್ತಿತ್ತು. ಮಾರ್ಚ್ 17 ರಂದು, 2022 ರ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ತೀರ್ಪುನ್ನು ಸುಪ್ರೀಂ ಕಾಯ್ದಿರಿಸಿತ್ತು .

ಏಕನಾಥ್ ಶಿಂಧೆ ಮತ್ತು ಇತರ 39 ಶಾಸಕರು ಶಿವಸೇನಾ ನಾಯಕತ್ವದ ವಿರುದ್ಧ ಬಂಡಾಯ ಎದ್ದ ನಂತರ ಎಂವಿಎ ಸರ್ಕಾರ ಕಳೆದ ವರ್ಷ ಪತನವಾಯಿತು. ಜೂನ್ 30 ರಂದು, ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾದರು ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರ ಉಪನಾಯಕರಾದರು.

Published On - 12:50 pm, Thu, 11 May 23