ರಾಹುಲ್​​ ಗಾಂಧಿಯ ಭಾರತ್​​ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರ ಕೋವಿಡ್​​ ವೈರಸ್ ಬಿಡುಗಡೆ ಮಾಡಿದೆ: ಉದ್ಧವ್ ಠಾಕ್ರೆ ಬಣ

ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ಯಾತ್ರೆಯ 100 ದಿನಗಳನ್ನು ಪೂರ್ಣಗೊಳಿಸಿದ್ದು, ದೊಡ್ಡ ಪ್ರಮಾಣದಲ್ಲಿ ಜನ ಬೆಂಬಲವನ್ನು ಪಡೆಯುತ್ತಿದ್ದಾರೆ. ಸರ್ಕಾರಕ್ಕೆ ಅದನ್ನು ಕಾನೂನಿನಿಂದ ತಡೆಯಲು ಸಾಧ್ಯವಾಗಲಿಲ್ಲ.

ರಾಹುಲ್​​ ಗಾಂಧಿಯ ಭಾರತ್​​ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರ ಕೋವಿಡ್​​ ವೈರಸ್ ಬಿಡುಗಡೆ ಮಾಡಿದೆ: ಉದ್ಧವ್ ಠಾಕ್ರೆ ಬಣ
ಭಾರತ್ ಜೋಡೋ ಯಾತ್ರೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 22, 2022 | 6:42 PM

ಮುಂಬೈ: ಕೋವಿಡ್ ಪ್ರೋಟೋಕಾಲ್‌ಗಳನ್ನು (Covid Protocol)  ಅನುಸರಿಸಲು ಸಾಧ್ಯವಾಗದಿದ್ದರೆ ಭಾರತ್ ಜೋಡೋ ಯಾತ್ರೆಯನ್ನು(Bharat Jodo Yatra) ನಿಲ್ಲಿಸಿ ಅಥವಾ ಮುಂದೂಡಿ ಎಂದು ಒತ್ತಾಯಿಸಿ ರಾಹುಲ್ ಗಾಂಧಿ (Rahul Gandhi) ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಕಳುಹಿಸಿರುವ ಪತ್ರದ ಕುರಿತು ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದ ಶಿವಸೇನಾ ಬಣ ಇಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಪ್ರೋಟೋಕಾಲ್  ಅನುಸರಿಸಿ ಇಲ್ಲವೇ ಪಾದಯಾತ್ರೆಯನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ಯಾತ್ರೆಯ 100 ದಿನಗಳನ್ನು ಪೂರ್ಣಗೊಳಿಸಿದ್ದು, ದೊಡ್ಡ ಪ್ರಮಾಣದಲ್ಲಿ ಜನ ಬೆಂಬಲವನ್ನು ಪಡೆಯುತ್ತಿದ್ದಾರೆ. ಸರ್ಕಾರಕ್ಕೆ ಅದನ್ನು ಕಾನೂನಿನಿಂದ ತಡೆಯಲು ಸಾಧ್ಯವಾಗಲಿಲ್ಲ. ಹಾಗಾಗಿ ಪಿತೂರಿಯಿಂದ ಕೇಂದ್ರ ಸರ್ಕಾರವು ‘ಕೋವಿಡ್ -19’ ವೈರಸ್ ಅನ್ನು ಬಿಡುಗಡೆ ಮಾಡಿದೆ ಎಂದು ತೋರುತ್ತದೆ ಎಂದು ಠಾಕ್ರೆ ಬಣದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಜನ ಸೇರುವ ಕಾರಣ ಕೋವಿಡ್ ಹರಡುವ ಆತಂಕ ಇರುವುದು ಸಹಜ. ಆದರೆ ಮೂರು ವರ್ಷಗಳ ಹಿಂದೆ ಕೊರೊನಾ ಅಬ್ಬರಿಸಿ ನಷ್ಟವುಂಟು ಮಾಡಿದಾಗ ಆಗ ಅಮೆರಿಕದ ಅಧ್ಯಕ್ಷರಾಗಿದ್ದ ಡೊನಾಲ್ಡ್ ಟ್ರಂಪ್ ನ್ನು ಗುಜರಾತಿಗೆ ಕರೆದು ಜನರನ್ನು ಸೇರಿಸಿದವರು ನೀವೆ ಎಂದು ಠಾಕ್ರೆ ಬಣ ಟೀಕಿಸಿದೆ. ಮಂಗಳವಾರದಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದು, ಪಕ್ಷದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಕೇಳಿದ್ದಾರೆ.

ರಾಜಸ್ಥಾನದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ. ಮಾಸ್ಕ್-ಸ್ಯಾನಿಟೈಸರ್ ಬಳಕೆ ಮಾಡಬೇಕು. ಲಸಿಕೆ ಹಾಕಿದ ಜನರು ಮಾತ್ರ ಭಾಗವಹಿಸಬೇಕು ಎಂದು ಆರೋಗ್ಯ ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ಶಿಷ್ಟಾಚಾರವನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಪಾದಯಾತ್ರೆಯನ್ನು ಮುಂದೂಡುವಂತೆ ಮಾಂಡವಿಯಾ ಮನವಿ ಮಾಡಿದ್ದಾರೆ. ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಹಿತಾಸಕ್ತಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಬಹುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಪತ್ರವನ್ನು ಕಾಂಗ್ರೆಸ್ ಟೀಕಿಸಿದೆ. ಭಾರತ್ ಜೋಡೋ ಯಾತ್ರೆಗೆ  ಬಾರೀ ಬೆಂಬಲ ಸಿಗುತ್ತಿರುವುದನ್ನು ನೋಡಿ ಮೋದಿ ಸರ್ಕಾರವು ಗಾಬರಿಗೊಂಡ ಕಾರಣ ಪತ್ರ ಬರೆಯಲಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ಹೇಳಿದ್ದಾರೆ. ರಾಜಸ್ಥಾನದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಭಾರಿ ಜನಸ್ಪಂದನದಿಂದ ಬಿಜೆಪಿ ಮತ್ತು ಮೋದಿ ಸರ್ಕಾರವು ಎಷ್ಟು ಗಾಬರಿಗೊಂಡಿದೆಯೆಂದರೆ ಅವರು ರಾಜಸ್ಥಾನದಲ್ಲಿ ಕೋವಿಡ್ -19 ಪ್ರೋಟೋಕಾಲ್ ಅನ್ನು ಅನುಸರಿಸಲು ರಾಹುಲ್ ಗಾಂಧಿಗೆ ಪತ್ರಗಳನ್ನು ಬರೆಯುತ್ತಿದ್ದಾರೆ ಎಂದು ಗೆಹ್ಲೋಟ್ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಯಾತ್ರೆಗೆ ಅಡ್ಡಿಪಡಿಸುವುದೇ ಬಿಜೆಪಿಯ ಉದ್ದೇಶ ಎಂಬುದನ್ನು ಆರೋಗ್ಯ ಸಚಿವರ ನಡೆ ಸ್ಪಷ್ಟವಾಗಿ ತೋರಿಸುತ್ತದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಹೇಳಿದರು. ಭಾರತ್ ಜೋಡೋ ಯಾತ್ರೆಗೆ ಹೆಚ್ಚುತ್ತಿರುವ ಸಾರ್ವಜನಿಕ ಬೆಂಬಲದಿಂದ ಅಸಮಾಧಾನಗೊಂಡಿರುವ ಬಿಜೆಪಿ, ಯಾತ್ರೆಗೆ ಅಡ್ಡಿಪಡಿಸುವ ಉದ್ದೇಶ ಹೊಂದಿಗೆ. ಪತ್ರ ಬರೆದಿರುವುದು ಸಾರ್ವಜನಿಕರ ಹಿತಾಸಕ್ತಿಯಿಂದಲ್ಲ, ಆದರೆ ರಾಜಕೀಯ ಪ್ರೇರಿತವಾಗಿದೆ ಎಂದು ಗೆಹ್ಲೋಟ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಚೀನಾದಲ್ಲಿ ಆದಂತೆ ಭಾರತದಲ್ಲಿ ಕೋವಿಡ್ ಅಲೆ ಬರಲ್ಲ ಯಾಕೆ? ಇಲ್ಲಿದೆ ಮೂರು ಕಾರಣಗಳು

ಪ್ರಧಾನಿ ಮೋದಿ ಎರಡು ದಿನಗಳ ಹಿಂದೆ ತ್ರಿಪುರಾದಲ್ಲಿ ಯಾವುದೇ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸದೆ ರ್ಯಾಲಿಗಳನ್ನು ಮಾಡಿದರು. ಕೋವಿಡ್‌ನ ಎರಡನೇ ಅಲೆ ಸಂದರ್ಭದಲ್ಲಿಯೂ, ಪ್ರಧಾನಿಯವರು ಪಶ್ಚಿಮ ಬಂಗಾಳದಲ್ಲಿ ಸಾಮೂಹಿಕ ರ್ಯಾಲಿಗಳನ್ನು ನಡೆಸಿದರು. ಕೇಂದ್ರ ಆರೋಗ್ಯ ಸಚಿವರ ಉದ್ದೇಶವು ರಾಜಕೀಯವಲ್ಲದೇ ಇದ್ದರೆ ಅದನ್ನು ಒಪ್ಪಬಹುದಾಗಿತ್ತು. ಅವರ ಕಾಳಜಿ ಸಮರ್ಥನೀಯ ಆಗಿದ್ದರೆ ಅವರು ಮೊದಲು ಪ್ರಧಾನಿಗೆ ಪತ್ರ ಬರೆಯಬೇಕಿತ್ತು ಎಂದು ಗೆಹ್ಲೋಟ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:23 pm, Thu, 22 December 22

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ