ಮತ್ತೆ ಉದ್ಧಟತನ ಮೆರೆದ ಮಹಾರಾಷ್ಟ್ರ.. ಗಡಿ ವಿವಾದ ಕುರಿತು ಪುಸ್ತಕ ಬಿಡುಗಡೆ

|

Updated on: Jan 27, 2021 | 2:22 PM

ಕರ್ನಾಟಕ ಮತ್ತು ಮಹಾರಾಷ್ಟ್ರ ಜನರಲ್ಲಿ ಗಡಿ ವಿವಾದದ ಬಗ್ಗೆ ಹತ್ತಿ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರ ಮಾಡುತ್ತಿದೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ವಿವರಿಸುವ ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ ಸಂಘರ್ಷ ಅನಿ ಸಂಕಲ್ಪ ಹೆಸರಿನ ಮರಾಠಿ ಪುಸ್ತಕವನ್ನು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬಿಡುಗಡೆ ಮಾಡಿದ್ದಾರೆ.

ಮತ್ತೆ ಉದ್ಧಟತನ ಮೆರೆದ ಮಹಾರಾಷ್ಟ್ರ..  ಗಡಿ ವಿವಾದ ಕುರಿತು ಪುಸ್ತಕ ಬಿಡುಗಡೆ
ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ ಸಂಘರ್ಷ ಅನಿ ಸಂಕಲ್ಪ ಹೆಸರಿನ ಮರಾಠಿ ಪುಸ್ತಕ ಬಿಡುಗಡೆ ಮಾಡಿದ ಉದ್ಧವ್ ಠಾಕ್ರೆ
Follow us on

ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಇಂದು ನೆನ್ನೆಯದಲ್ಲ. ಅನೇಕ ವರ್ಷಗಳಿಂದಲ್ಲೂ ಈ ಬಗ್ಗೆ ವಾದ-ವಿವಾದಗಳು ಆಗುತ್ತಲೇ ಇವೆ. ಸರ್ಕಾರ ಕೂಡ ಸಭೆ ಮೇಲೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗದೆ ಸುಮ್ಮನಾಗಿದೆ. ಆದರೆ ಇಂತಹ ವಿವಾದದ ಬಗ್ಗೆ ಪುಸ್ತಕ ಬರೆಸಿ ಮಹಾರಾಷ್ಟ್ರ ರಾಜ್ಯ ಸರ್ಕಾರ ಇಂದು ಪುಸ್ತಕ ರಿಲೀಸ್ ಮಾಡಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ಜನರಲ್ಲಿ ಗಡಿ ವಿವಾದದ ಬಗ್ಗೆ ಹತ್ತಿ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರ ಮಾಡುತ್ತಿದೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ವಿವರಿಸುವ ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ ಸಂಘರ್ಷ ಅನಿ ಸಂಕಲ್ಪ ಹೆಸರಿನ ಮರಾಠಿ ಪುಸ್ತಕವನ್ನು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬಿಡುಗಡೆ ಮಾಡಿದ್ದಾರೆ. ಮುಂಬೈನ ಮಲಬಾರ್ ಹಿಲ್‌ನಲ್ಲಿರುವ ಸಹ್ಯಾದ್ರಿ ರಾಜ್ಯ ಅತಿಥಿ ಗೃಹದಲ್ಲಿ ಸಮಾರಂಭ ಏರ್ಪಡಿಸಿ ಡಾ.ದೀಪಕ್ ಪವಾರ್ ಸಂಪಾದಕತ್ವದಲ್ಲಿ ರಚಿಸಲಾಗಿದೆ ಈ ಪುಸ್ತಕವನ್ನು ರಿಲೀಸ್ ಮಾಡಿದೆ.

ಈ ಕಾರ್ಯಕ್ರಮದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಜೊತೆಗೆ ಬೆಳಗಾವಿಯ ಎಂಇಎಸ್ ಮುಖಂಡರಿಗೂ ಆಹ್ವಾನ ನೀಡಲಾಗಿತ್ತು. ಹೀಗಾಗಿ ಖಾನಾಪುರ ಕ್ಷೇತ್ರದ ಎಂಇಎಸ್ ಮಾಜಿ ಶಾಸಕ ಅರವಿಂದ ಪಾಟೀಲ್, ಎಂಇಎಸ್ ಮುಖಂಡ ದೀಪಕ್ ದಳವಿ, ದಿಗಂಬರ ಪಾಟೀಲ್, ಬೆಳಗಾವಿ ಶಿವಸೇನೆ ಘಟಕದ ಅಧ್ಯಕ್ಷ ಪ್ರಕಾಶ್ ಶಿರೋಡಕರ್ ಸೇರಿ ಹಲವರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ‘ರಹೆಂಗೇ ತೋ ಮಹಾರಾಷ್ಟ್ರ ಮೇ ನಹೀ ತೋ ಜೇಲ್ ಮೇ’ ಎಂದು ಘೋಷಣೆ ಕೂಗಿದ್ದಲ್ಲದೆ ಬೆಳಗಾವಿ, ಕಾರವಾರ, ನಿಪ್ಪಾಣಿ ಸಂಯುಕ್ತ ಮಹಾರಾಷ್ಟ್ರ ಎಂದು MES ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಪುಸ್ತಕದಲ್ಲಿ ಏನೇನಿದೆ?
1. ಈ ಪುಸ್ತಕದಲ್ಲಿ ಗಡಿವಿವಾದ ಬಗ್ಗೆ ಮಹಾರಾಷ್ಟ್ರದ ನಿಲುವಿನ ಬಗ್ಗೆ ಮಾಹಿತಿ ನೀಡಲಾಗಿದೆ.
2. 1956ರಿಂದ 2021ರವರೆಗೂ ನಡೆದ ಘಟನಾವಳಿಗಳ ವಿವರಣೆ
3. 530 ಪುಟಗಳ ಪುಸ್ತಕವನ್ನು ಬರೆಯಿಸಿರುವ ಮಹಾರಾಷ್ಟ್ರ ಸರ್ಕಾರ.
4. ಕರ್ನಾಟಕ ಮಹಾರಾಷ್ಟ್ರ ಗಡಿ ಸಂಘರ್ಷದ ಬಗ್ಗೆ ವಿವರಣೆ.
5. ಬೆಳಗಾವಿಯಲ್ಲಿ ಹುತಾತ್ಮ ದಿನ, ಕರಾಳ ದಿನ ಆಚರಣೆ ಬಗ್ಗೆ ಮಾಹಿತಿ.
6. ಕರ್ನಾಟಕ ಸರ್ಕಾರ ಮರಾಠಿಗರ ಮೇಲೆ ನಿರಂತರ ದೌರ್ಜನ್ಯವೆಸಗುತ್ತಿದೆ‌ ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.
7. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬೆಳಗಾವಿ ಭೇಟಿವೇಳೆ ನಡೆದ ಘಟನಾವಳಿಗಳ ವಿವರ
8. ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ರಚಿಸಿರುವ ವಿವಾದಿತ ವ್ಯಂಗ್ಯಚಿತ್ರಗಳು ಪುಸ್ತಕದಲ್ಲಿ ಬಳಸಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ..

ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರದಿಂದ ಪುಸ್ತಕ ಬಿಡುಗಡೆ.. ಫಡ್ನವೀಸ್ ಸಹ ಭಾಗಿ: ತಾರಕಕ್ಕೇರುತ್ತ ಅಸಮಾಧಾನ?

Published On - 2:20 pm, Wed, 27 January 21