ಗಡ್ಕರಿಗೆ ಆಫರ್​ ಕೊಟ್ಟ ಉದ್ಧವ್, ಅವಮಾನವಾಗುತ್ತಿದ್ದರೆ ಬಿಜೆಪಿ ಬಿಟ್ಟು ಬನ್ನಿ ಗೆಲುವು ಖಂಡಿತ ನಿಮ್ಮದೇ ಎಂದ ಠಾಕ್ರೆ

ನಿಮಗೆ ಬಿಜೆಪಿಯಲ್ಲಿ ಅವಮಾನವಾಗುತ್ತಿದ್ದರೆ ನಮ್ಮೊಂದಿಗೆ ಬನ್ನಿ ಎಂದು ಉದ್ಧವ್ ಠಾಕ್ರೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಆಹ್ವಾನಿಸಿದ್ದಾರೆ. ನೀವು ನಮ್ಮೊಂದಿಗಿದ್ದರೆ ನಿಮ್ಮ ಗೆಲುವು ಖಚಿತ, ನಾವು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ನಿಮ್ಮನ್ನು ಮಂತ್ರಿ ಮಾಡುತ್ತೇವೆ ಎಂದಿದ್ದಾರೆ.

ಗಡ್ಕರಿಗೆ ಆಫರ್​ ಕೊಟ್ಟ ಉದ್ಧವ್, ಅವಮಾನವಾಗುತ್ತಿದ್ದರೆ ಬಿಜೆಪಿ ಬಿಟ್ಟು ಬನ್ನಿ ಗೆಲುವು ಖಂಡಿತ ನಿಮ್ಮದೇ ಎಂದ ಠಾಕ್ರೆ
ನಿತಿನ್ ಗಡ್ಕರಿ, ಉದ್ಧವ್ ಠಾಕ್ರೆ
Follow us
ನಯನಾ ರಾಜೀವ್
|

Updated on: Mar 13, 2024 | 11:36 AM

ಅವಮಾನವಾಗುತ್ತಿದ್ದರೆ ಸಹಿಸಿಕೊಳ್ಳುವುದು ಬೇಡ ಬಿಜೆಪಿ ಬಿಟ್ಟು ಬನ್ನಿ ಖಂಡಿತವಾಗಿಯೂ ಚುನಾವಣೆಯಲ್ಲಿ ಗೆಲುವು ನಮ್ಮದೇ ಆಗಿರುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಉದ್ಧವ್​ ಠಾಕ್ರೆಗೆ ಆಫರ್​ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಕಾವು ಮೂಡಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ವಿರೋಧ ಪಕ್ಷದ ನಾಯಕರು ಪದೇ ಪದೇ ಆಫರ್​ಗಳನ್ನು ನೀಡುತ್ತಿದ್ದಾರೆ.

ಶಿವಸೇನೆ(ಯುಬಿಟಿ)ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತೊಮ್ಮೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬಿಜೆಪಿಯನ್ನು ತೊರೆಯುವಂತೆ ಕೇಳಿಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಗಡ್ಕರಿ ಅವರ ಬದಲು ಕೃಪಾಶಂಕರ್​ ಅವರ ಹೆಸರನ್ನು ಸೇರಿಸಲಾಗಿದೆ.

ನಾನು ಎರಡು ದಿನಗಳ ಹಿಂದೆಯೂ ಗಡ್ಕರಿಯವರಿಗೆ ಹೇಳಿದ್ದೆ ಈಗಲೂ ಹೇಳುತ್ತಿದ್ದೇನೆ. ನಿಮಗೆ ಅವಮಾನ ಎನಿಸಿದರೆ ಬಿಜೆಪಿ ತೊರೆದು ಮಹಾ ವಿಕಾಸ್ ಅಘಾಡಿಗೆ ಸೇರಿಕೊಳ್ಳಿ, ನಿಮ್ಮ ಗೆಲುವು ಖಚಿತ ಎಂದಿದ್ದಾರೆ. ಕಳೆದ ವಾರ, ವಿರೋಧ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಗಡ್ಕರಿ ಅವರಿಗೆ ಠಾಕ್ರೆ ನೀಡಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶಿವಸೇನಾ (ಯುಬಿಟಿ) ಮುಖ್ಯಸ್ಥರನ್ನು ಲೇವಡಿ ಮಾಡಿದ್ದರು.

ಮತ್ತಷ್ಟು ಓದಿ: ನಮ್ಮನ್ನು ಏಕೆ ಅನರ್ಹಗೊಳಿಸಿಲ್ಲ?: ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿದ ಉದ್ದವ್ ಠಾಕ್ರೆ

ಗಡ್ಕರಿ ಅವರು ಬಿಜೆಪಿಯ ಪ್ರಮುಖ ನಾಯಕರಾಗಿದ್ದರು, ಆದರೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ನಡುವಿನ ಸೀಟು ಹಂಚಿಕೆ ಚರ್ಚೆಗಳು ಪೂರ್ಣವಾಗಿಲ್ಲದ ಕಾರಣ ಮೊದಲ ಪಟ್ಟಿಯಲ್ಲಿ ಮಹಾರಾಷ್ಟ್ರದ ಹೆಸರುಗಳಿಲ್ಲ ಎಂದು ಫಡ್ನವಿಸ್ ಹೇಳಿದ್ದಾರೆ.

370 ನೇ ವಿಧಿಯನ್ನು ರದ್ದುಪಡಿಸಿ ನಾಲ್ಕು ವರ್ಷಗಳಿಗಿಂತ ಹೆಚ್ಚು ಕಳೆದಿದೆ, ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಚುನಾವಣೆಗಳು ನಡೆದಿಲ್ಲ ಮತ್ತು ಕಾಶ್ಮೀರಿ ಪಂಡಿತರು ಕಾಶ್ಮೀರದಲ್ಲಿ ಇನ್ನೂ ತಮ್ಮ ಮನೆಗಳಿಗೆ ಹಿಂತಿರುಗಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ಮೊದಲು ಕಾಶ್ಮೀರಿ ಪಂಡಿತರನ್ನು ಕಾಶ್ಮೀರಕ್ಕೆ ಕರೆತರಬೇಕು ಮತ್ತು ನಂತರ ಸಿಎಎ ಜಾರಿಗೊಳಿಸಬೇಕು ಎಂದು ಠಾಕ್ರೆ ಹೇಳಿದರು. ಪ್ರಕ್ಷುಬ್ಧ ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿ ಇನ್ನೂ ಸಮಯ ಸಿಕ್ಕಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್