CM ಕಚೇರಿಯಲ್ಲಿ ಸ್ಮಗ್ಲರ್‌ಗಳೇ ತುಂಬಿದ್ದಾರೆ ಎಂದು ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್

| Updated By: ಸಾಧು ಶ್ರೀನಾಥ್​

Updated on: Aug 24, 2020 | 5:45 PM

ತಿರುವನಂತಪುರ: ಕೇರಳದ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಅಂದರೆ ಎಡರಂಗ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ. ಈ ಸಂಬಂಧ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌, ಕೇರಳ ವಿಧಾನ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಮಂಡಿಸಿದೆ. ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಕಾಂಗ್ರೆಸ್‌ ನಾಯಕ ಸತೀಶನ್‌, ಮುಖ್ಯಮಂತ್ರಿ ಪಿನರಾಯಿ ವಿಜಯನ್‌ ಒಳ್ಳೆಯ ವ್ಯಕ್ತಿಯೇ ಆಗಿದ್ರೂ, ಮುಖ್ಯಮಂತ್ರಿ ಕಾರ್ಯಾಲಯದಲ್ಲಿ ಚಿನ್ನದ ಸ್ಮಗ್ಲರ್‌ಗಳೇ ತುಂಬಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ವಿಧಾನಸಭಾಧ್ಯಕ್ಷರ ವಿರುದ್ಧದ ಅವಿಶ್ವಾಸ ವ್ಯಕ್ತಪಡಿಸಿರುವ ಯು‌ಡಿಎಫ್‌ ಸ್ಪೀಕರ್‌ಗೂ […]

CM ಕಚೇರಿಯಲ್ಲಿ ಸ್ಮಗ್ಲರ್‌ಗಳೇ ತುಂಬಿದ್ದಾರೆ ಎಂದು ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್
Follow us on

ತಿರುವನಂತಪುರ: ಕೇರಳದ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಅಂದರೆ ಎಡರಂಗ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ.

ಈ ಸಂಬಂಧ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌, ಕೇರಳ ವಿಧಾನ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಮಂಡಿಸಿದೆ. ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಕಾಂಗ್ರೆಸ್‌ ನಾಯಕ ಸತೀಶನ್‌, ಮುಖ್ಯಮಂತ್ರಿ ಪಿನರಾಯಿ ವಿಜಯನ್‌ ಒಳ್ಳೆಯ ವ್ಯಕ್ತಿಯೇ ಆಗಿದ್ರೂ, ಮುಖ್ಯಮಂತ್ರಿ ಕಾರ್ಯಾಲಯದಲ್ಲಿ ಚಿನ್ನದ ಸ್ಮಗ್ಲರ್‌ಗಳೇ ತುಂಬಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಷ್ಟೇ ಅಲ್ಲ ವಿಧಾನಸಭಾಧ್ಯಕ್ಷರ ವಿರುದ್ಧದ ಅವಿಶ್ವಾಸ ವ್ಯಕ್ತಪಡಿಸಿರುವ ಯು‌ಡಿಎಫ್‌ ಸ್ಪೀಕರ್‌ಗೂ ಮತ್ತು ಚಿನ್ನದ ಸ್ಮಗ್ಲಿಂಗ್‌ನಲ್ಲಿ ಭಾಗಿಯಾದವರಿಗೂ ಅತಿಯಾದ ಆತ್ಮೀಯತೆ ಇದೆ. ಹೀಗಾಗಿ ಅವರು ಕೂಡಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ ಎಲ್‌ಡಿಎಫ್‌ 91 ಸದಸ್ಯರಿದ್ದು, ಯುಡಿಎಫ್‌‌ ಬಲ ಕೇವಲ 45 ರಷ್ಟಿದೆ. ಜೊತೆಗೆ ಕೇರಳ ವಿಧಾನ ಸಭೆಯಲ್ಲಿ 15 ವರ್ಷಗಳ ನಂತರ ಅವಿಶ್ವಾಸ ನಿರ್ಣಯ ಮಂಡಿಸಲಾಗಿದ್ದು, ಕೊನೆಯ ಬಾರಿ 2005ರಲ್ಲಿ ಓಮನ್‌ ಚಾಂಡಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡಿಸಲಾಗಿತ್ತು.