AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಉಧಮ್‌ಪುರದಲ್ಲಿ ಅಪಘಾತ: ಆಳವಾದ ಕಂದಕಕ್ಕೆ ಬಸ್ ಉರುಳಿ ಇಬ್ಬರು ಸಾವು, 15 ಮಂದಿಗೆ ಗಾಯ

ಜಮ್ಮು-ಕಾಶ್ಮೀರದ ಉಧಮ್‌ಪುರದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮಹಿಳೆ ಮತ್ತು ಆರು ವರ್ಷದ ಬಾಲಕಿ ಸೇರಿ ಇಬ್ಬರು ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ. ಪೆಚೌಂಡ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಈ ದುರ್ಘಟನೆಗೆ ರಸ್ತೆಯ ಕಿರಿದಾದ ತಿರುವು ಕಾರಣ ಎನ್ನಲಾಗಿದೆ.

ಜಮ್ಮು-ಕಾಶ್ಮೀರದ ಉಧಮ್‌ಪುರದಲ್ಲಿ ಅಪಘಾತ: ಆಳವಾದ ಕಂದಕಕ್ಕೆ ಬಸ್ ಉರುಳಿ ಇಬ್ಬರು ಸಾವು, 15 ಮಂದಿಗೆ ಗಾಯ
ಬಸ್
ನಯನಾ ರಾಜೀವ್
|

Updated on: Oct 21, 2026 | 1:34 PM

Share

ಉಧಮ್‌ಪುರ, ಅಕ್ಟೋಬರ್ 21: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಮತ್ತು ಆರು ವರ್ಷದ ಬಾಲಕಿ ಸಾವನ್ನಪ್ಪಿದ್ದು, 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಸುಮಾರು 8 ಗಂಟೆಗೆ ಪೆಚೌಂಡ್‌ನಿಂದ ರಾಮನಗರಕ್ಕೆ ಹೊರಟಿದ್ದ ಖಾಸಗಿ ಪ್ರಯಾಣಿಕರ ಬಸ್, ಗುಲ್ಲಿ ಗಾಲಾ ಎಂಬ ದುರ್ಗಮ ಬೆಟ್ಟದ ಹಾದಿಯಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಅಪಘಾತದ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದ ಸದ್ದು ಕೇಳುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ತಕ್ಷಣ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ಕಂದಕದಲ್ಲಿದ್ದ 17 ಮಂದಿಯನ್ನು ಮೇಲಕ್ಕೆತ್ತಿ ಬಸಂತ್‌ಗಢದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿದರು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ರಾಮನಗರ ಆಸ್ಪತ್ರೆಗೆ ಕಳುಹಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮಹಿಳೆ ಮತ್ತು ಆರು ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಉಳಿದ ಆರು ಜನರನ್ನು ಸುಧಾರಿತ ಚಿಕಿತ್ಸೆಗಾಗಿ ಉಧಮ್‌ಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಶಾಸಕರ ಭೇಟಿ: ಸ್ಥಳೀಯ ಬಿಜೆಪಿ ಶಾಸಕ ಸುನಿಲ್ ಭಾರದ್ವಾಜ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬೆಟ್ಟಗುಡ್ಡಗಳ ಈ ರಸ್ತೆಯು ಅತ್ಯಂತ ಕಿರಿದಾಗಿದ್ದು, ಅಪಾಯಕಾರಿಯಾಗಿದೆ. ಮುಂದಿನ ದಿನಗಳಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ತಕ್ಷಣ ರಸ್ತೆ ದುರಸ್ತಿಪಡಿಸಬೇಕು ಮತ್ತು ಗ್ರಾಮೀಣ ಭಾಗದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ಸೌಲಭ್ಯಗಳನ್ನು ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಗ್ವಾಲಿಯರ್‌ನಲ್ಲಿ ಭೀಕರ ಅಪಘಾತ: ಭಕ್ತರ ಮೇಲೆ ಹರಿದ ಟ್ರಕ್; 14 ಮಂದಿ ಸಾವು

ಕೇಂದ್ರ ಸಚಿವರ ನೆರವು: ಘಟನೆಯ ಮಾಹಿತಿ ತಿಳಿದ ಬೆನ್ನಲ್ಲೇ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಉಧಮ್‌ಪುರ ಜಿಲ್ಲಾಧಿಕಾರಿ ಅನಂತ್ ದ್ವಿವೇದಿ ಅವರೊಂದಿಗೆ ಮಾತನಾಡಿ, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ನೆರವು ನೀಡುವಂತೆ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ನೆರವು ಒದಗಿಸಲು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಬಂದ ಸಿಎಂ ಹೇಳಿದ್ದೇನು ನೋಡಿ
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಬಂದ ಸಿಎಂ ಹೇಳಿದ್ದೇನು ನೋಡಿ
ಮೈಸೂರು ದಸರಾ 2026: ಆನೆಗಳ ಮೈಮೇಲೆ ಮೂಡಿದ ಬಣ್ಣ ಬಣ್ಣದ ಚಿತ್ತಾರ
ಮೈಸೂರು ದಸರಾ 2026: ಆನೆಗಳ ಮೈಮೇಲೆ ಮೂಡಿದ ಬಣ್ಣ ಬಣ್ಣದ ಚಿತ್ತಾರ
ಮೈಸೂರು ದಸರಾ: ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಮೈಸೂರು ದಸರಾ: ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಮೈಸೂರು ದಸರಾ 2026: ಗೊಂದಲಗಳ ನಡುವೆ ವಜ್ರಮುಷ್ಟಿ ಕಾಳಗ ರದ್ದು!
ಮೈಸೂರು ದಸರಾ 2026: ಗೊಂದಲಗಳ ನಡುವೆ ವಜ್ರಮುಷ್ಟಿ ಕಾಳಗ ರದ್ದು!
ಮೈಸೂರು ದಸರಾ: ಅರಮನೆ ಪ್ರವೇಶಿಸಿದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ
ಮೈಸೂರು ದಸರಾ: ಅರಮನೆ ಪ್ರವೇಶಿಸಿದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ
ಎಮ್ಮೆಯ ಹೊಟ್ಟೆಯಲ್ಲಿ ಬಿಳಿ ಬಣ್ಣದ ಹೋರಿ ಕರು ಜನನ
ಎಮ್ಮೆಯ ಹೊಟ್ಟೆಯಲ್ಲಿ ಬಿಳಿ ಬಣ್ಣದ ಹೋರಿ ಕರು ಜನನ
ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರುವ ಪ್ರಶಾಂತ ಆನೆಗೆ ವಿಶೇಷ ಮಜ್ಜನ
ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರುವ ಪ್ರಶಾಂತ ಆನೆಗೆ ವಿಶೇಷ ಮಜ್ಜನ
ವಿಜಯದಶಮಿಯ ಐತಿಹಾಸಿಕ ಮತ್ತು ಪೌರಾಣಿಕ ಮಹತ್ವ: ಡಾ. ಶೆಲ್ವಪಿಳ್ಳೈ ಅಯ್ಯಂಗಾರ್
ವಿಜಯದಶಮಿಯ ಐತಿಹಾಸಿಕ ಮತ್ತು ಪೌರಾಣಿಕ ಮಹತ್ವ: ಡಾ. ಶೆಲ್ವಪಿಳ್ಳೈ ಅಯ್ಯಂಗಾರ್
ವಜ್ರ ಕದ್ದು ಕಾವಲುಗಾರರ ನೆಮ್ಮದಿ ಕೆಡಿಸಿದ ಆಸಿಯಾ: ವಿಡಿಯೋ
ವಜ್ರ ಕದ್ದು ಕಾವಲುಗಾರರ ನೆಮ್ಮದಿ ಕೆಡಿಸಿದ ಆಸಿಯಾ: ವಿಡಿಯೋ