ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ಮುರ್ಮು ಅವರನ್ನೇಕೆ ಆಹ್ವಾನಿಸಲಿಲ್ಲ: ಉದಯನಿಧಿ ಪ್ರಶ್ನೆ

|

Updated on: Sep 21, 2023 | 7:41 AM

ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟು ಹಾಕಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಇದೀಗ ನೂತನ ಸಂಸತ್​ ಭವನದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೇಕೆ ಆಹ್ವಾನ ನೀಡಲಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ‘ರಾಷ್ಟ್ರಪತಿ ಮುರ್ಮು ಬುಡಕಟ್ಟು ಸಮುದಾಯಕ್ಕೆ ಸೇರಿದವರು ಹಾಗೂ ವಿಧವೆಯಾಗಿರುವ ಕಾರಣ ಸಂಸತ್ ಭವನ ಉದ್ಘಾಟನೆಗೆ ಆಹ್ವಾನಿಸಲಾಗಿಲ್ಲ ಇದು ಸರಿಯೇ’ ಎಂದು ಕೇಳಿದ್ದಾರೆ.

ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ಮುರ್ಮು ಅವರನ್ನೇಕೆ ಆಹ್ವಾನಿಸಲಿಲ್ಲ: ಉದಯನಿಧಿ ಪ್ರಶ್ನೆ
ಉದಯನಿಧಿ ಸ್ಟಾಲಿನ್
Image Credit source: ABP Live
Follow us on

ಸನಾತನ ಧರ್ಮ(Sanatana Dharma)ದ ವಿರುದ್ಧ ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟು ಹಾಕಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್(Udhayanidhi Stalin) ಇದೀಗ ನೂತನ ಸಂಸತ್​ ಭವನದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಅವರಿಗೇಕೆ ಆಹ್ವಾನ ನೀಡಲಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ‘ರಾಷ್ಟ್ರಪತಿ ಮುರ್ಮು ಬುಡಕಟ್ಟು ಸಮುದಾಯಕ್ಕೆ ಸೇರಿದವರು ಹಾಗೂ ವಿಧವೆಯಾಗಿರುವ ಕಾರಣ ಸಂಸತ್ ಭವನ ಉದ್ಘಾಟನೆಗೆ ಆಹ್ವಾನಿಸಲಾಗಿಲ್ಲ ಇದು ಸರಿಯೇ’ ಎಂದು ಕೇಳಿದ್ದಾರೆ.

ಈ ಹಿಂದೆ ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು, ಹೇಗೆ ಈ ರೋಗಗಳ ವಿರುದ್ಧ ಹೋರಾಡಿದರೆ ಪ್ರಯೋಜನವಿಲ್ಲವೋ ಆ ರೋಗವನ್ನು ಬುಡಸಮೇತ ನಿರ್ಮೂಲನೆ ಮಾಡಬೇಕೋ ಹಾಗೆಯೇ ಸನಾತನ ಧರ್ಮದ ವಿರುದ್ಧವೂ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಾಶಗೊಳಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಮಧುರೈನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದ ಪ್ರಥಮ ಪ್ರಜೆ ಯಾರು? ರಾಷ್ಟ್ರಪತಿ ಅಂದರೆ ದ್ರೌಪದಿ ಮುರ್ಮು. ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿಲ್ಲ ಏಕೆಂದರೆ ಅವರು ಬುಡಕಟ್ಟು ಸಮುದಾಯಕ್ಕೆ ಸೇರಿದವರು ಹಾಗೂ ವಿಧವೆ ಎಂಬ ಕಾರಣಕ್ಕೆ, ಇದನ್ನೇ ಸನಾತನ ಧರ್ಮ ಎಂದು ಕರೆಯುತ್ತೇವೆಯೇ ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ಓದಿ: ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಎಂದು ಕರೆದ ಸ್ಟಾಲಿನ್ ಪುತ್ರ ಉದಯನಿಧಿ

ಸ್ಮಾರಕ ಯೋಜನೆಯಡಿ 800 ಕೋಟಿ ರೂಪಾಯಿ ವೆಚ್ಚ ಮಾಡಿ ನೂತನ ಸಂಸತ್ತನ್ನು ನಿರ್ಮಿಸಲಾಗಿದೆ. ತಮಿಳುನಾಡಿನಿಂದ ಅಧೀನಮ್ ಅವರನ್ನು ಕರೆಸಿದರು. ಆದರೆ ಅದರ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸಲಿಲ್ಲ. ಮಹಿಳಾ ಮೀಸಲಾತಿ ಮಸೂದೆ ಮಂಡನೆ ವೇಳೆ ಕೆಲ ಹಿಂದಿ ನಟಿಯರನ್ನು ಆಹ್ವಾನಿಸಿರುವ ವಿಚಾರವನ್ನೂ ಸ್ಟಾಲಿನ್ ಪ್ರಸ್ತಾಪಿಸಿದರು. ಇಷ್ಟು ಮಹತ್ವದ ವಿಧೇಯಕ ಮಂಡನೆ ವೇಳೆಯೂ ರಾಷ್ಟ್ರಪತಿಗೆ ಆಹ್ವಾನ ನೀಡಿಲ್ಲ. ಇವೆಲ್ಲವೂ ಸನಾತನ ಧರ್ಮದ ಪ್ರಭಾವದಿಂದ ಆಗಿವೆ ಎಂದರು.

ಈ ವರ್ಷದ ಮೇ 28 ರಂದು ಪ್ರಧಾನಿ ಮೋದಿ ಅವರು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಿದ್ದರು, ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅದಕ್ಕೆ ಆಹ್ವಾನಿಸಲಿಲ್ಲ. ಇದಕ್ಕೆ ಸಂಬಂಧಿಸಿದಂತೆ 21 ವಿರೋಧ ಪಕ್ಷಗಳು ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದವು. ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಪತಿ ಮುರ್ಮು ಉದ್ಘಾಟಿಸಬೇಕೇ ಹೊರತು ಪ್ರಧಾನಿ ಮೋದಿಯಲ್ಲ ಎಂಬುದು ಅವರ ವಾದವಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ