ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದ: ತಕ್ಕ ಉತ್ತರ ನೀಡಬೇಕು ಎಂದ ನರೇಂದ್ರ ಮೋದಿ
ಇಂಡಿಯಾ ಮತ್ತು ಭಾರತ ವಿವಾದದ ಬಗ್ಗೆ ಪ್ರತಿಕ್ರಿಯಿಸದಂತೆ ಸಚಿವರಿಗೆ ಸಲಹೆ ನೀಡಿರುವ ಮೋದಿ, ಅಧಿಕೃತ ವ್ಯಕ್ತಿ ಮಾತ್ರ ಈ ವಿಷಯದ ಬಗ್ಗೆ ಮಾತನಾಡಿದರೆ ಸಾಕು ಎಂದಿದ್ದಾರೆ. ಇತಿಹಾಸಕ್ಕೆ ಹೋಗಬೇಡಿ, ಆದರೆ ಸಂವಿಧಾನದ ಪ್ರಕಾರ ಸತ್ಯಗಳನ್ನು ಆಧರಿಸಿ ಹೇಳಿಕೆ ನೀಡಿ. ಅಲ್ಲದೆ, ಸಮಸ್ಯೆಯ ಸಮಕಾಲೀನ ಪರಿಸ್ಥಿತಿಯ ಬಗ್ಗೆ ಮಾತನಾಡಿ ಎಂದು ದೆಹಲಿಯಲ್ಲಿ ಜಿ 20 ಶೃಂಗಸಭೆಯ ಮೊದಲು ಮಂತ್ರಿ ಮಂಡಳಿಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಹೇಳಿದ್ದಾರೆ.
ದೆಹಲಿ ಸೆಪ್ಟೆಂಬರ್ 06: ತಮಿಳುನಾಡು ಸಚಿವ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರ ವಿವಾದಾತ್ಮಕ ‘ಸನಾತನ ಧರ್ಮ’ (Sanatana Dharma) ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ ಹೇಳಿದ್ದಾರೆ. ಇಂಡಿಯಾ ಮತ್ತು ಭಾರತ ವಿವಾದದ ಬಗ್ಗೆ ಪ್ರತಿಕ್ರಿಯಿಸದಂತೆ ಸಚಿವರಿಗೆ ಸಲಹೆ ನೀಡಿರುವ ಮೋದಿ, ಅಧಿಕೃತ ವ್ಯಕ್ತಿ ಮಾತ್ರ ಈ ವಿಷಯದ ಬಗ್ಗೆ ಮಾತನಾಡಿದರೆ ಸಾಕು ಎಂದಿದ್ದಾರೆ. ಇತಿಹಾಸಕ್ಕೆ ಹೋಗಬೇಡಿ, ಆದರೆ ಸಂವಿಧಾನದ ಪ್ರಕಾರ ಸತ್ಯಗಳನ್ನು ಆಧರಿಸಿ ಹೇಳಿಕೆ ನೀಡಿ. ಅಲ್ಲದೆ, ಸಮಸ್ಯೆಯ ಸಮಕಾಲೀನ ಪರಿಸ್ಥಿತಿಯ ಬಗ್ಗೆ ಮಾತನಾಡಿ ಎಂದು ದೆಹಲಿಯಲ್ಲಿ ಜಿ 20 ಶೃಂಗಸಭೆಯ ಮೊದಲು ಮಂತ್ರಿ ಮಂಡಳಿಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಹೇಳಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳೊಂದಿಗೆ ಹೋಲಿಸಿದ ನಂತರ ರಾಜಕೀಯ ವಲಯದಲ್ಲಿ ವಾಗ್ವಾದಗಳು ನಡೆದಿವೆ. ಚೆನ್ನೈನಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉದಯನಿಧಿ ಇಂತಹ ವಿಷಯಗಳನ್ನು ವಿರೋಧಿಸಬಾರದು. ಅವುಗಳನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.
ಉದಯನಿಧಿ ಅವರ ಹೇಳಿಕೆಯನ್ನು ಖಂಡಿಸಲು ಬಿಜೆಪಿ ಕಾಂಗ್ರೆಸ್‌ಗೆ ಒತ್ತಾಯಿಸಿದೆ. ಆದಾಗ್ಯೂ, ಸನಾತನ ಧರ್ಮದ ಅನುಯಾಯಿಗಳ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿಲ್ಲ ಎಂದು ಉದಯನಿಧಿ ನಂತರ ಹೇಳಿದ್ದಾರೆ.
ಬಿಜೆಪಿಯು ಈ ವಿಷಯದ ಬಗ್ಗೆ ವಿರೋಧ ಪಕ್ಷವಾದ ಇಂಡಿಯಾ ಮೈತ್ರಿಕೂಟವನ್ನು ಗುರಿಯಾಗಿಸಿದೆ, ಆದರೆ ಅದರ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಈ ಹೇಳಿಕೆಯು ಸನಾತನ ಧರ್ಮವನ್ನು ಅನುಸರಿಸುವ 80 ಪ್ರತಿಶತದಷ್ಟು ಜನಸಂಖ್ಯೆಯ “ಜನಾಂಗೀಯ ಹತ್ಯೆ”ಯ ಕರೆಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಸನಾತನ ಧರ್ಮ ವಿವಾದ; ಉದಯನಿಧಿ, ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಕೇಸ್ ದಾಖಲು
ತಮ್ಮ ಹೇಳಿಕೆಗಳ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಂಪುರದಲ್ಲಿ ಬುಧವಾರ ಎಫ್‌ಐಆರ್ ದಾಖಲಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ