AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UGC-NET 2026: ಪ್ರಶ್ನೆಪತ್ರಿಕೆಗಳಲ್ಲಿ ದೋಷ; ಮೂರು ವಿಷಯಗಳ ಮರುಪರೀಕ್ಷೆ ಘೋಷಿಸಿದ ಎನ್​ಟಿಎ

UGC-NET Re-exam 2026: ಯುಜಿಸಿ-ನೆಟ್ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಕಂಡುಬಂದ ದೋಷ ಹಿನ್ನೆಲೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮೂರು ವಿಷಯಗಳಿಗೆ ಮರು ಪರೀಕ್ಷೆ ನಡೆಸಲು ಮುಂದಾಗಿದ್ದು, ಇದೀಗ ಮರು ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

UGC-NET 2026: ಪ್ರಶ್ನೆಪತ್ರಿಕೆಗಳಲ್ಲಿ ದೋಷ; ಮೂರು ವಿಷಯಗಳ ಮರುಪರೀಕ್ಷೆ ಘೋಷಿಸಿದ ಎನ್​ಟಿಎ
ಯುಜಿಸಿ-ನೆಟ್ ಪರೀಕ್ಷೆImage Credit source: google
ಗಂಗಾಧರ​ ಬ. ಸಾಬೋಜಿ
|

Updated on:Aug 16, 2026 | 11:28 PM

Share

ನವದೆಹಲಿ, ಆಗಸ್ಟ್​​ 16: ದೇಶಾದ್ಯಂತ ನೀಟ್​ ಪ್ರಶ್ನೆ ಪತ್ರಿಕೆ ಲೀಕ್​​ ಕೋಲಾಹಲ ಬೆನ್ನಲ್ಲೇ ಇದೀಗ ಯುಜಿಸಿ-ನೆಟ್ 2026ರ ಪ್ರಶ್ನೆ ಪತ್ರಿಕೆಯಲ್ಲಿ ಹಲವು ತಪ್ಪುಗಳು ಪತ್ತೆಯಾಗಿದೆ. ಹೀಗಾಗಿ ಮೂರು ವಿಷಯಗಳ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮರು ಪರೀಕ್ಷೆಗೆ ದಿನಾಂಕವನ್ನು ಘೋಷಿಸಿದೆ.

ಮರು ಪರೀಕ್ಷೆಯ ವೇಳಾಪಟ್ಟಿ ಹೀಗಿದೆ

  • ಇಂಗ್ಲಿಷ್: ಸೆಪ್ಟೆಂಬರ್ 9 (ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆ, ಶಿಫ್ಟ್ 1)
  • ವಾಣಿಜ್ಯ (ಕಾಮರ್ಸ್): ಸೆಪ್ಟೆಂಬರ್ 9 (ಮಧ್ಯಾಹ್ನ 3 ರಿಂದ ಸಂಜೆ 6 ಗಂಟೆ, ಶಿಫ್ಟ್ 2)
  • ಸಮಾಜಶಾಸ್ತ್ರ (ಸೋಷಿಯಾಲಜಿ): ಸೆಪ್ಟೆಂಬರ್ 10 (ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆ)

ಎನ್​​ಟಿಎ ಟ್ವೀಟ್​

2026ರ ಜೂನ್‌ನಲ್ಲಿ ಯುಜಿಸಿ-ನೆಟ್ ಪರೀಕ್ಷೆಗಳು ನಡೆದಿದ್ದವು. ಬಳಿಕ ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ವಿಷಯಗಳ ಪ್ರಶ್ನೆಪತ್ರಿಕೆಗಳಲ್ಲಿದ್ದ ಲೋಪದೋಷಗಳ ಬಗ್ಗೆ ಅಭ್ಯರ್ಥಿಗಳಿಂದ ಸಾಲು ಸಾಲು ದೂರುಗಳು ಕೇಳಿಬಂದಿದ್ದವು. ಈ ಬಗ್ಗೆ ಪರಿಶೀಲಿಸಲು ಎನ್‌ಟಿಎ ನೇಮಿಸಿದ್ದ ತಜ್ಞರ ಸಮಿತಿಯು, ಪ್ರಶ್ನೆಪತ್ರಿಕೆಗಳಲ್ಲಿನ ಮುದ್ರಣ ಮತ್ತು ಅನುವಾದ ತಪ್ಪುಗಳು, ಪ್ರಮುಖ ವಿದ್ವಾಂಸರ ಹೆಸರು ಹಾಗೂ ಪುಸ್ತಕಗಳ ಶೀರ್ಷಿಕೆಗಳಲ್ಲಿನ ತಪ್ಪುಗಳು, ವ್ಯಾಕರಣ ದೋಷಗಳು ಮತ್ತು ಹಳೆಯ ಪ್ರಶ್ನೆಗಳ ಪುನರಾವರ್ತನೆಯಂತಹ ಹಲವು ಗಂಭೀರ ದೋಷಗಳನ್ನು ಪತ್ತೆ ಮಾಡಿದೆ. ಹೀಗಾಗಿ ಸಮಿತಿ ಮರು ಪರೀಕ್ಷೆಗೆ ಶಿಫಾರಸು ಮಾಡಿದೆ.

ಮರು ಪರೀಕ್ಷೆಗೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲ

ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಭವಿಷ್ಯಕ್ಕೆ ಯಾವುದೇ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ಎನ್‌ಟಿಎ ಈ ಮರು ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಅಭ್ಯರ್ಥಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕವನ್ನು ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: UGC NET 2026: ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಹತೆ, ಶುಲ್ಕ ಮತ್ತು ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ

ಇನ್ನು ಪರೀಕ್ಷಾ ಕೇಂದ್ರ, ನಗರ ಹಾಗೂ ಅಡ್ಮಿಟ್ ಕಾರ್ಡ್ ಕುರಿತ ವಿವರಗಳನ್ನು ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಉಳಿದ 84 ವಿಷಯಗಳ ಫಲಿತಾಂಶ ಪ್ರಕ್ರಿಯೆ ಹಾಗೂ ಜೆಆರ್‌ಎಫ್ ಹಂಚಿಕೆಗೆ ಈ ಮರು ಪರೀಕ್ಷೆಯಿಂದ ಯಾವುದೇ ವಿಳಂಬವಾಗುವುದಿಲ್ಲ ಎಂದು ಎನ್‌ಟಿಎ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:23 pm, Sun, 16 August 26

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ