Ujjain Accident: ಉಜ್ಜಯಿನಿಯಲ್ಲಿ ಟ್ರಕ್- ಜೀಪ್ ನಡುವೆ ಡಿಕ್ಕಿ; 4 ಶಾಲಾ ಮಕ್ಕಳು ಸಾವು, 11 ಮಂದಿಗೆ ಗಾಯ
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಇಂದು ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗಾಯಗೊಂಡ ಮಕ್ಕಳನ್ನು ಇಂದೋರ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿ (Ujjain) ಜಿಲ್ಲೆಯಲ್ಲಿ ಇಂದು ಟ್ರಕ್‌ಗೆ ಜೀಪ್ ಡಿಕ್ಕಿ (Accident) ಹೊಡೆದ ಪರಿಣಾಮ ನಾಲ್ವರು ಶಾಲಾ ಮಕ್ಕಳು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ನಗ್ಡಾದ ಫಾತಿಮಾ ಕಾನ್ವೆಂಟ್ ಶಾಲೆಗೆ ಮಕ್ಕಳು ಶಾಲೆಗೆ ಹೋಗುತ್ತಿದ್ದಾಗ ಉನ್ಹೆಲ್ ಪಟ್ಟಣದ ಝಿರ್ನಿಯಾ ಫಾಟಾ ಬಳಿ ಈ ಅಪಘಾತ ಸಂಭವಿಸಿದೆ ಎಂದು ಉಜ್ಜಯಿನಿಯ ಪೊಲೀಸ್ ವರಿಷ್ಠಾಧಿಕಾರಿ ಸತ್ಯೇಂದ್ರ ಶುಕ್ಲಾ ತಿಳಿಸಿದ್ದಾರೆ.
ಗಾಯಗೊಂಡ ಮಕ್ಕಳನ್ನು ಇಂದೋರ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಇಂದು ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗಾಯಗೊಂಡಿರುವ 11 ಮಕ್ಕಳ ಪೈಕಿ ಹಲವು ಮಕ್ಕಳ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಆಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
Four school children killed as their vehicle collides with truck in Madhya Pradesh’s Ujjain district: Police
— Press Trust of India (@PTI_News) August 22, 2022
ಉಜ್ಜಯಿನಿ ಜಿಲ್ಲೆಯ ನಗ್ಡಾ ತಹಸಿಲ್‌ನ ನಗ್ಡಾ ಅನ್ಹೆಲ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಒಟ್ಟು 15 ಮಕ್ಕಳು ಜೀಪ್ನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರಲ್ಲಿ ಹಲವು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಉಜ್ಜಯಿನಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಇದನ್ನೂ ಓದಿ: Crime News: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಬೆಂಗಳೂರಿನಲ್ಲೊಂದು ಭೀಕರ ರಸ್ತೆ ಅಪಘಾತ
ಈ ರಸ್ತೆ ಅಪಘಾತ ಎಷ್ಟು ಭೀಕರವಾಗಿತ್ತು, ಮಕ್ಕಳನ್ನು ಸಾಗಿಸುತ್ತಿದ್ದ ಜೀಪ್ಗೆ ಭಾರೀ ಹಾನಿಯಾಗಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಮತ್ತು ಎಸ್ಪಿ ಸತ್ಯೇಂದ್ರ ಕುಮಾರ್ ಶುಕ್ಲಾ ಹೆಚ್ಚುವರಿ ಎಸ್ಪಿ ಆಕಾಶ್ ಭೂರಿಯಾ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯ ನಂತರ, ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಗಾಯಾಳುಗಳನ್ನು ಬಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಾಳುಗಳಲ್ಲಿ ಮೂವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದ್ದು, ಉತ್ತಮ ಚಿಕಿತ್ಸೆಗಾಗಿ ಇಂದೋರ್‌ಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಒಳಗಾದ ಮಕ್ಕಳು 5ರಿಂದ 7ನೇ ತರಗತಿಯವರಾಗಿದ್ದು, ಅವರ ವಯಸ್ಸು 11ರಿಂದ 15 ವರ್ಷಗಳಾಗಿತ್ತು. ಅಪಘಾತದ ನಂತರ ಇಬ್ಬರೂ ಚಾಲಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.