ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ರಸ್ತೆಯಲ್ಲಿ ಸಹಾಯಕ್ಕೆ ಅಂಗಲಾಚುವಂತೆ ಮಾಡಿದ್ದ ಆರೋಪಿಗಳ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ರಕ್ತಸಿಕ್ತ ಸ್ಥಿತಿಯಲ್ಲಿ ರಸ್ತೆ ರಸ್ತೆಗಳಲ್ಲಿ ಸಹಾಯಕ್ಕಾಗಿ ಅಂಗಲಾಚುವಂತೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಟೋವೊಂದರಲ್ಲಿ ರಕ್ತದ ಕಲೆ ಪತ್ತೆಯಾಗಿದ್ದು, ಆಟೋ ಚಾಲಕ ಸೇರಿದಂತೆ ಇತರೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ಸಂತ್ರಸ್ತೆ ಜೀವನ್ ಖೇರಿಯಲ್ಲಿ ಆಟೋ ಹತ್ತಿದ್ದಾಳೆ, ಅದರ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ ಎಂದು ಹೇಳಿದರು.

ಬಾಲಕಿ
Follow us
|

Updated on: Sep 28, 2023 | 10:42 AM

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ರಕ್ತಸಿಕ್ತ ಸ್ಥಿತಿಯಲ್ಲಿ ರಸ್ತೆ ರಸ್ತೆಗಳಲ್ಲಿ ಸಹಾಯಕ್ಕಾಗಿ ಅಂಗಲಾಚುವಂತೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಟೋವೊಂದರಲ್ಲಿ ರಕ್ತದ ಕಲೆ ಪತ್ತೆಯಾಗಿದ್ದು, ಆಟೋ ಚಾಲಕ ಸೇರಿದಂತೆ ಇತರೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ಸಂತ್ರಸ್ತೆ ಜೀವನ್ ಖೇರಿಯಲ್ಲಿ ಆಟೋ ಹತ್ತಿದ್ದಾಳೆ, ಅದರ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ ಎಂದು ಹೇಳಿದರು.

ಆಟೋ ಮೇಲೆ ರಕ್ತದ ಕಲೆಗಳು ಕಂಡು ಬಂದಿವೆ, ಆಟೋ ವಿಧಿವಿಜ್ಞಾನ ಪರೀಕ್ಷೆ ನಡೆಯುತ್ತಿದೆ. ಪ್ರಕರಣದಲ್ಲಿ ಬಂಧಿತರಾಗಿರುವ ಇತರ ಮೂವರಲ್ಲಿ ಒಬ್ಬರು ಆಟೋ ಚಾಲಕರಾಗಿದ್ದಾರೆ. ಅತ್ಯಾಚಾರವೆಸಗಿ ಆಕೆಯನ್ನು ಎಲ್ಲೋ ಎಸೆದು ಪರಾರಿಯಾಗಿದ್ದರು, ಬಾಲಕಿ ರಕ್ತಸಿಕ್ತ ಸ್ಥಿತಿಯಲ್ಲಿ ಸಹಾಯ ಬೇಡುತ್ತಾ 8 ಕಿ.ಮೀ ನಡೆದುಕೊಂಡು ಬಂದಿದ್ದಳು.

12 ವರ್ಷದ ಬಾಲಕಿಗೆ ವೈದ್ಯರ ತಂಡವು ಶಸ್ತ್ರಚಿಕಿತ್ಸೆ ಮಾಡಿದೆ ಮತ್ತು ಆಕೆಯ ಸ್ಥಿತಿ ಗಂಭೀರವಾಗಿದೆ, ಆದರೆ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಬಾಲಕಿ ಅನುಭವಿಸಿದ ಭಯಾನಕ ಸ್ಥಿತಿಯನ್ನು ಅರ್ಚಕರೊಬ್ಬರು ವಿವರಿಸಿದ್ದಾರೆ. ರಾಹುಲ್ ಶರ್ಮಾ ಉಜ್ಜಯಿನಿ ನಗರದಿಂದ ಸುಮಾರು 15 ಕಿಮೀ ದೂರದಲ್ಲಿರುವ ಬದ್‌ನಗರ ರಸ್ತೆಯಲ್ಲಿರುವ ಆಶ್ರಮದವರು.

ಮತ್ತಷ್ಟು ಓದಿ: ಮಧ್ಯಪ್ರದೇಶ: ನೆತ್ತರು ಸುರಿಸುತ್ತಾ ಜನರಲ್ಲಿ ಸಹಾಯ ಕೇಳಿದ ಅತ್ಯಾಚಾರ ಸಂತ್ರಸ್ತೆ; ದೂರ ಓಡಿಸಿದ ಜನ

ಸೋಮವಾರ ಬೆಳಗ್ಗೆ 9.30ರ ಸುಮಾರಿಗೆ ಯಾವುದೋ ಕೆಲಸದ ನಿಮಿತ್ತ ಆಶ್ರಮದಿಂದ ಹೊರ ಹೋಗುತ್ತಿದ್ದಾಗ ಗೇಟ್ ಬಳಿ ಅರೆಬೆತ್ತಲೆಯಾಗಿ ರಕ್ತಸ್ರಾವವಾಗುತ್ತಿದ್ದ ಬಾಲಕಿಯನ್ನು ಕಂಡಿದ್ದಾರೆ. ಆಕೆಗೆ ಬಟ್ಟೆ ಕೊಟ್ಟೆ, ಬಾಲಕಿ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ, ಕಣ್ಣುಗಳು ಊದಿಕೊಂಡಿದ್ದವು, ತಕ್ಷಣ ಪೊಲೀಸರಿಗೆ ಕರೆ ಮಾಡಿದೆ, ಪೊಲೀಸರು 20 ನಿಮಿಷಗಳ ಬಳಿಕ ಅಲ್ಲಿಗೆ ತಲುಪಿದ್ದಾರೆ ಎಂದಿದ್ದಾರೆ.

ಬಾಲಕಿ ರಕ್ತಸಿಕ್ತ ಸ್ಥಿತಿಯಲ್ಲಿ ಅರೆಬೆತ್ತಲಾಗಿ ಮನೆ ಮನೆಯ ಬಳಿ ಸಹಾಯಕ್ಕಾಗಿ ಅಂಗಲಾಚಿದರೂ ಯಾರೂ ಕೂಡ ಮಾನವೀಯತೆ ತೋರಲಿಲ್ಲ, ಸಹಾಯಕ್ಕೆ ಬರಲಿಲ್ಲ, ಇದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಾಲಕಿ ಯಾವುದೋ ಸ್ಥಳದ ಬಗ್ಗೆ ಮಾತನಾಡುತ್ತಿದ್ದಳು, ಆದರೆ ಆ ಸ್ಥಳವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಅರ್ಚಕರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ