ಮುಂದಿನ ವಾರ ಭಾರತಕ್ಕೆ ಇಂಗ್ಲೆಂಡ್ ಪ್ರಧಾನಿ ಭೇಟಿ; ವ್ಯಾಪಾರ, ಭದ್ರತೆ ಕುರಿತು ಮೋದಿ ಜೊತೆ ಚರ್ಚೆ
ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕೀರ್ ಸ್ಟಾರ್ಮರ್ ಅವರ ಮೊದಲ ಭಾರತ ಭೇಟಿ ಇದಾಗಿದೆ. ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅಕ್ಟೋಬರ್ 8 ಮತ್ತು 9ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚಿಸಲು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಲಿದ್ದಾರೆ.

ನವದೆಹಲಿ, ಅಕ್ಟೋಬರ್ 4: ಕಳೆದ ವರ್ಷ ಜುಲೈನಲ್ಲಿ ಇಂಗ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅವರು ಮುಂದಿನ ವಾರ ಭಾರತಕ್ಕೆ ಎರಡು ದಿನಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಅಕ್ಟೋಬರ್ 8 ಮತ್ತು 9ರಂದು ಸ್ಟಾರ್ಮರ್ ಭಾರತಕ್ಕೆ ಆಗಮಿಸಲಿದ್ದಾರೆ. ಈ ಭೇಟಿಯ ವೇಳೆ ಪ್ರಧಾನಿ ಮೋದಿ (PM Modi) ಜೊತೆ ಭಾರತ ಮತ್ತು ಯುಕೆಯ ನಡುವಿನ ವ್ಯಾಪಾರ ಒಪ್ಪಂದ ಮತ್ತು ಭದ್ರತೆಯ ಕುರಿತು ಚರ್ಚಿಸುವ ಸಾಧ್ಯತೆಯಿದೆ.
ಸ್ಟಾರ್ಮರ್ ಅಕ್ಟೋಬರ್ 9ರಂದು ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಮುಂದಿನ 10 ವರ್ಷಗಳ ಕಾರ್ಯಕ್ರಮಗಳು ಮತ್ತು ಉಪಕ್ರಮಗಳ ಮಾರ್ಗಸೂಚಿಯಾದ ‘ವಿಷನ್ 2035’ಗೆ ಅನುಗುಣವಾಗಿ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಬಗ್ಗೆ ಮೋದಿ ಮತ್ತು ಸ್ಟಾರ್ಮರ್ ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಮಹತ್ವದ ಒಪ್ಪಂದ; ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ ಸ್ಟಾರ್ಮರ್ ಬಣ್ಣನೆ
“ಭವಿಷ್ಯದ ಭಾರತ-ಯುಕೆ ಆರ್ಥಿಕ ಪಾಲುದಾರಿಕೆಯ ಕೇಂದ್ರ ಆಧಾರಸ್ತಂಭವಾಗಿ ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿಇಟಿಎ) ಪ್ರಸ್ತುತಪಡಿಸಿದ ಅವಕಾಶಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಲಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
At the invitation of Prime Minister Narendra Modi, the Prime Minister of the United Kingdom, Keir Starmer, will visit India on 8-9 October 2025. This will be Prime Minister Starmer’s first official visit to India
(file pic) pic.twitter.com/xTfiZPt1hY
— ANI (@ANI) October 4, 2025
ಜುಲೈನಲ್ಲಿ ಭಾರತದ ಪ್ರಧಾನಿ ಮೋದಿ ಲಂಡನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು ಯುಕೆ ನಡುವಿನ ಮಹತ್ವದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಈ ವ್ಯಾಪಾರ ಒಪ್ಪಂದವು ಮಾರುಕಟ್ಟೆ ಪ್ರವೇಶದಲ್ಲಿ ಹೆಚ್ಚಳ, ಬ್ರಿಟಿಷ್ ವಿಸ್ಕಿ ಮತ್ತು ಕಾರುಗಳ ಮೇಲಿನ ಇತರ ವಸ್ತುಗಳ ಮೇಲಿನ ಸುಂಕಗಳನ್ನು ಕಡಿತಗೊಳಿಸುವುದು ಮತ್ತು 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವುದನ್ನು ಒಳಗೊಂಡಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




