AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

ಹವಾಮಾನ ಬದಲಾವಣೆಯನ್ನು ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡಲು ಹಸಿರು ಹವಾಮಾನ ನಿಧಿ(Green Climate Fund)ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಘೋಷಿಸಿದ್ದಾರೆ. COP15ನಲ್ಲಿ ಕೋಪನ್ ಹ್ಯಾಗನ್ ಒಪ್ಪಂದದ ನಂತರ 194 ದೇಶಗಳು ಸ್ಥಾಪಿಸಿದ ಗ್ರೀನ್ ಫಂಡ್ ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ತಿಳಿಸಿದ್ದಾರೆ. ಇಂದು ಭಾರತದ ಅಧ್ಯಕ್ಷತೆಯ ಜಿ20 ಶೃಂಗಸಭೆಯ ಎರಡನೇ ಮತ್ತು ಕೊನೆಯ ದಿನವಾಗಿದೆ. ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ದ್ವಪಕ್ಷೀಯ ಸಭೆ ನಡೆಸಲಿದ್ದಾರೆ.

ರಿಷಿ ಸುನಕ್Image Credit source: Mint
ನಯನಾ ರಾಜೀವ್
|

Updated on: Sep 10, 2023 | 11:33 AM

Share

ಹವಾಮಾನ ಬದಲಾವಣೆಯನ್ನು ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡಲು ಹಸಿರು ಹವಾಮಾನ ನಿಧಿ(Green Climate Fund)ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಘೋಷಿಸಿದ್ದಾರೆ. COP15ನಲ್ಲಿ ಕೋಪನ್ ಹ್ಯಾಗನ್ ಒಪ್ಪಂದದ ನಂತರ 194 ದೇಶಗಳು ಸ್ಥಾಪಿಸಿದ ಗ್ರೀನ್ ಫಂಡ್ ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ತಿಳಿಸಿದ್ದಾರೆ. ಇಂದು ಭಾರತದ ಅಧ್ಯಕ್ಷತೆಯ ಜಿ20 ಶೃಂಗಸಭೆಯ ಎರಡನೇ ಮತ್ತು ಕೊನೆಯ ದಿನವಾಗಿದೆ. ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ದ್ವಪಕ್ಷೀಯ ಸಭೆ ನಡೆಸಲಿದ್ದಾರೆ.

ಭಾರತ ಮಂಟಪದಲ್ಲಿ ಜಿ20 ಶೃಂಗಸಭೆಯ ಮೂರನೇ ಅಧಿವೇಶನ ನಡೆಯುತ್ತಿದೆ. ಒನ್ ಫ್ಯೂಚರ್ ವಿಚಾರವನ್ನು ಶೃಂಗಸಭೆಯಲ್ಲಿ ಚರ್ಚಿಸಲಾಗುತ್ತಿದೆ. ‘ಒನ್ ಫ್ಯೂಚರ್’ ಅಧಿವೇಶನದ ಕೊನೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಇದರೊಂದಿಗೆ ಮೂರನೇ ಅಧಿವೇಶನವೂ ಪೂರ್ಣಗೊಳ್ಳಲಿದೆ.

ಈ ದೇಶಗಳೆಂದರೆ- ಫ್ರಾನ್ಸ್, ಟರ್ಕಿ, ಯುಎಇ, ದಿ. ಕೊರಿಯಾ, ಬ್ರೆಜಿಲ್, ನೈಜೀರಿಯಾ, ಕೊಮೊರೊಸ್ ಮತ್ತು ಯುರೋಪಿಯನ್ ಕಮಿಷನ್. ಇದಾದ ನಂತರ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮಧ್ಯಾಹ್ನ 2.30 ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಈ ಪತ್ರಿಕಾಗೋಷ್ಠಿ ಅಂತರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿರುತ್ತದೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ ದಿನ 2: ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್ ತೆರಳಿದ ಜಿ20 ನಾಯಕರು, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ

ಜಿ 20 ಶೃಂಗಸಭೆಯ ಮೊದಲ ದಿನದ ಭೋಜನದ ಕುರಿತು ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ನಡುವೆ ಸಂಭಾಷಣೆ ನಡೆಯಿತು. ಉಭಯ ನಾಯಕರು ಪರಸ್ಪರ ಹಿತಾಸಕ್ತಿ ಮತ್ತು ಉಭಯ ದೇಶಗಳ ನಡುವಿನ ಸ್ನೇಹವನ್ನು ಮತ್ತಷ್ಟು ಹೆಚ್ಚಿಸುವ ವಿಷಯಗಳ ಬಗ್ಗೆ ಚರ್ಚಿಸಿದರು. ಈ ಮಾಹಿತಿಯನ್ನು ಹಣಕಾಸು ಸಚಿವಾಲಯ ನೀಡಿದೆ. ಜಿ20 ನಾಯಕರು ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ

ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ

ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್