
ದೆಹಲಿ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಬ್ರಿಟನ್ನಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್ಡೌನ್ ಬೆನ್ನಲ್ಲೇ ಬ್ರಿಟನ್ ಪ್ರಧಾನಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.
ಬೋರಿಸ್ ಜಾನ್ಸನ್ ಅವರನ್ನು ಗಣರಾಜ್ಯೋತ್ಸ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಇದೀಗ ಕೊರೊನಾ ಕಾರಣದಿಂದ ಪ್ರವಾಸ ರದ್ದಾಗಿದ್ದು, ಈ ಬಾರಿಯ ಗಣರಾಜ್ಯೋತ್ಸವ ಪರೇಡ್ಗೆ ಮುಖ್ಯ ಅತಿಥಿಯಾಗಿ ಭಾರತ ಸರ್ಕಾರ ಯಾರಿಗೆ ಆಹ್ವಾನ ನೀಡಲಿದೆ ಎಂಬ ಕುತೂಹಲ ಮೂಡಿದೆ.
ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ
ಇನ್ನು, ಬ್ರಿಟನ್ ಪ್ರಧಾನಿ ಬೋರಿಸ್ ತಮ್ಮ ಪ್ರವಾಸ ರದ್ದುಪಡಿಸಿದ್ದ ಬಗ್ಗೆ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ತಿಂಗಳ ನಿಗದಿತ ಭಾರತ ಪ್ರವಾಸ ರದ್ದಾಗಿದ್ದಕ್ಕೆ ವಿಷಾದಿಸುವೆ. ಬ್ರಿಟನ್ನಲ್ಲಿ ರೂಪಾಂತರಿ ವೈರಸ್ ವ್ಯಾಪಕವಾಗಿರುವ ಹಿನ್ನೆಲೆ ಬ್ರಿಟನ್ನಲ್ಲಿ ಲಾಕ್ಡೌನ್ ಘೋಷಣೆ ಮಾಡಿದ್ದೇವೆ ಎಂದು ತಮ್ಮ ಕರೆಯಲ್ಲಿ ಬೋರಿಸ್ ಜಾನ್ಸನ್ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.
ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್ಡೌನ್ ಇದ್ದರೂ ಬ್ರಿಟನ್ ಪ್ರಧಾನಿ ಭಾರತಕ್ಕೆ ಬರುವುದು ಖಚಿತ
ಲಾಕ್ಡೌನ್ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್ ಜಾನ್ಸನ್
Published On - 5:36 pm, Tue, 5 January 21