AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಕಾಲದ ರಾಮ-ಸೀತೆಯ ವಿಗ್ರಹಗಳು ಮರಳಿ ಬಂದವು ಭಾರತಕ್ಕೆ!

ಸುಮಾರು 40 ವರ್ಷಗಳ ಹಿಂದೆ ಅಂದ್ರೆ 1978 ರಲ್ಲಿ ತಮಿಳುನಾಡಿನಿಂದ ಕದಿಯಲ್ಪಟ್ಟ ರಾಮ, ಲಕ್ಷ್ಮಣ ಮತ್ತು ಸೀತೆಯ ಪ್ರಾಚೀನ ವಿಗ್ರಹಗಳನ್ನು ಬ್ರಿಟಿಷ್ ಪೊಲೀಸರು ಮಂಗಳವಾರ ಭಾರತಕ್ಕೆ ಹಸ್ತಾಂತರಿಸಿದ್ದಾರೆ. ಭಾರತದ ಸಾಂಸ್ಕೃತಿಕ ಪರಂಪರೆಯ ಕಲಾಕೃತಿಗಳನ್ನು ವಿಶ್ವದಾದ್ಯಂತ ಹಿಂದಿರುಗಿಸುವ ಪ್ರಯತ್ನ ನಡೆದಿದೆ. ಅದರ ಭಾಗವಾಗಿ ಇಂಡಿಯಾ ಹೌಸ್‌ನಲ್ಲಿ ಹಸ್ತಾಂತರಿಸುವ ಸಮಾರಂಭದಲ್ಲಿ ಮೆಟ್ರೋಪಾಲಿಟನ್ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ನವದೆಹಲಿಯ ಅಧಿಕಾರಿಗಳು ಭಾಗವಹಿಸಿದ್ದರು. ಸದ್ಯ ವಿಗ್ರಹಗಳನ್ನು ತಮಿಳುನಾಡಿಗೆ ವಾಪಸ್ ಕಳುಹಿಸಲಾಗಿದೆ. […]

ವಿಜಯನಗರ ಕಾಲದ ರಾಮ-ಸೀತೆಯ ವಿಗ್ರಹಗಳು ಮರಳಿ ಬಂದವು ಭಾರತಕ್ಕೆ!
ಆಯೇಷಾ ಬಾನು
| Edited By: |

Updated on: Sep 16, 2020 | 2:58 PM

Share

ಸುಮಾರು 40 ವರ್ಷಗಳ ಹಿಂದೆ ಅಂದ್ರೆ 1978 ರಲ್ಲಿ ತಮಿಳುನಾಡಿನಿಂದ ಕದಿಯಲ್ಪಟ್ಟ ರಾಮ, ಲಕ್ಷ್ಮಣ ಮತ್ತು ಸೀತೆಯ ಪ್ರಾಚೀನ ವಿಗ್ರಹಗಳನ್ನು ಬ್ರಿಟಿಷ್ ಪೊಲೀಸರು ಮಂಗಳವಾರ ಭಾರತಕ್ಕೆ ಹಸ್ತಾಂತರಿಸಿದ್ದಾರೆ. ಭಾರತದ ಸಾಂಸ್ಕೃತಿಕ ಪರಂಪರೆಯ ಕಲಾಕೃತಿಗಳನ್ನು ವಿಶ್ವದಾದ್ಯಂತ ಹಿಂದಿರುಗಿಸುವ ಪ್ರಯತ್ನ ನಡೆದಿದೆ. ಅದರ ಭಾಗವಾಗಿ ಇಂಡಿಯಾ ಹೌಸ್‌ನಲ್ಲಿ ಹಸ್ತಾಂತರಿಸುವ ಸಮಾರಂಭದಲ್ಲಿ ಮೆಟ್ರೋಪಾಲಿಟನ್ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ನವದೆಹಲಿಯ ಅಧಿಕಾರಿಗಳು ಭಾಗವಹಿಸಿದ್ದರು. ಸದ್ಯ ವಿಗ್ರಹಗಳನ್ನು ತಮಿಳುನಾಡಿಗೆ ವಾಪಸ್ ಕಳುಹಿಸಲಾಗಿದೆ.

ನಾಗಪಟ್ಟಣಂ ಜಿಲ್ಲೆಯಲ್ಲಿ ವಿಜಯನಗರ ಕಾಲದಲ್ಲಿ ನಿರ್ಮಿಸಿದ್ದ ದೇವಾಲಯದಿಂದ ಈ ವಿಗ್ರಹಗಳನ್ನು ಕಳವು ಮಾಡಲಾಗಿತ್ತು. ಆಸ್ತಿ ಕಳ್ಳತನವಾಗಿದೆ ಎಂದು ಮಾಹಿತಿ ನೀಡಿದ ನಂತರ ಯುಕೆ ಮೂಲದ ಅಪರಿಚಿತ ಸಂಗ್ರಾಹಕನೊಬ್ಬ ಸ್ವಯಂಪ್ರೇರಣೆಯಿಂದ ಪೊಲೀಸರಿಗೆ ವಿಗ್ರಹಗಳನ್ನು ಒಪ್ಪಿಸಿದ್ದ. ಇಂಡಿಯಾ ಪ್ರೈಡ್ ಪ್ರಾಜೆಕ್ಟ್‌ನ ಎಸ್ ವಿಜಯ್ ಕುಮಾರ್ ಅವರ ಮಾಹಿತಿಯು ವಿಗ್ರಹಗಳನ್ನು ಪತ್ತೆಹಚ್ಚಲು ಮತ್ತು ಗುರುತಿಸಲು ಸಹಾಯ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು 1947 ಮತ್ತು 2014 ರ ನಡುವೆ ಕೇವಲ 13 ಪುರಾತನ ವಸ್ತುಗಳನ್ನು ಭಾರತಕ್ಕೆ ಹಿಂತಿರುಗಿಸಲಾಗಿದೆ ಎಂದು ಪ್ರಹ್ಲಾದ್ ಸಿಂಗ್ ಪಟೇಲ್ ತಿಳಿಸಿದ್ದಾರೆ. ಆದರೆ ಅದರ ನಂತರ, ಅಂತಹ 40 ಕ್ಕೂ ಹೆಚ್ಚು ಪ್ರಾಚೀನ ವಸ್ತುಗಳು ಮನೆಗೆ ಮರಳಿವೆ. ಬ್ರಿಟಿಷ್ ಮ್ಯೂಸಿಯಂನಿಂದ ಒಂದು ವಿಗ್ರಹವನ್ನು ಹಿಂದಿರುಗಿಸುವ ಪ್ರಯತ್ನ ಸಹ ನಡೆಯುತ್ತಿದೆ. ಒಟ್ಟಿನಲ್ಲಿ ಭಾರತದ ಪ್ರಾಚೀನತೆ ಹಾಗೂ ವಾಸ್ತುಶಿಲ್ಪ ತೋರಿಸುವ ಮೂರು ದೇವರ ವಿಗ್ರಹಗಳು ಭಾತರಕ್ಕೆ ವಾಪಸ್ ಆಗಿವೆ. ಇದು ಒಂದು ರೀತಿಯ ಹೆಮ್ಮೆಯ ವಿಷಯವಾಗಿದೆ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ