Umesh Pal Murder Case: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್​ ಪರ ವಕೀಲರ ಬಂಧನ

ಬಿಎಸ್‌ಪಿ ಮಾಜಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಪರ ವಕೀಲರನ್ನು ಉತ್ತರ ಪ್ರದೇಶ ಪೊಲೀಸರು ಇಂದು ಬಂಧಿಸಿದ್ದಾರೆ.

Umesh Pal Murder Case: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್​ ಪರ ವಕೀಲರ ಬಂಧನ
ಉಮೇಶ್​ ಪಾಲ್ ಹತ್ಯೆ

Updated on: Jul 30, 2023 | 9:50 AM

ಬಿಎಸ್‌ಪಿ ಮಾಜಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಪರ ವಕೀಲರನ್ನು ಉತ್ತರ ಪ್ರದೇಶ ಪೊಲೀಸರು ಇಂದು ಬಂಧಿಸಿದ್ದಾರೆ. ಉಮೇಶ್ ಪಾಲ್ ಇರುವ ಸ್ಥಳವನ್ನು ವಕೀಲ ವಿಜಯ್ ಮಿಶ್ರಾ ನೀಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶನಿವಾರ ತಡರಾತ್ರಿ ಲಕ್ನೋದ ಹೊಟೇಲ್ ಹಯಾತ್ ಲೆಗಸಿಯಿಂದ ಅವರನ್ನು ಬಂಧಿಸಲಾಗಿದೆ. ಹಾಡಹಗಲೇ ನಡೆದ ಉಮೇಶ್ ಪಾಲ್ ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಘಟನೆಯ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಮಾಫಿಯಾವನ್ನು ನಾಶಪಡಿಸುವುದಾಗಿ ರಾಜ್ಯ ವಿಧಾನಸಭೆಯಲ್ಲಿ ಪ್ರತಿಜ್ಞೆ ಮಾಡಿದರು.

ಮತ್ತಷ್ಟು ಓದಿ: Asad Kalia: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್​ ಗ್ಯಾಂಗ್​ನ ಸದಸ್ಯ ಅಸದ್ ಕಾಲಿಯಾ ಬಂಧನ

ಪ್ರಯಾಗರಾಜ್‌ನ ಶಾಹಗಂಜ್ ಪ್ರದೇಶದ ಆಸ್ಪತ್ರೆಯೊಂದರ ಹೊರಗೆ ಅತೀಕ್ ಮತ್ತು ಅವರ ಸಹೋದರ ಅಶ್ರಫ್ ನನ್ನು ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದರು. ಆ ಭಯಾನಕ ಹತ್ಯೆಯ ದೃಶ್ಯಾವಳಿಗಳು ಆಸ್ಪತ್ರೆಯ ಹೊರಗಡೆಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ದರೋಡೆಕೋರನ ದೇಹದಲ್ಲಿ ಒಂಬತ್ತು ಗುಂಡೇಟುಗಳು ಕಂಡುಬಂದಿವೆ. ಅವರ ಸಹೋದರ ಅಶ್ರಫ್ ಅಹ್ಮದ್ ಅವರ ದೇಹದಿಂದ ಐದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ