AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಸಾವಿಗೆ ಸೇಡು ತೀರಿಸಿಕೊಳ್ಳಲು ಅಣ್ಣನ ಮಗನನ್ನೇ ಕೊಂದ ಚಿಕ್ಕಪ್ಪ

ಮಗನ ಸಾವಿಗೆ ಸೇಡು ತೀರಿಸಿಕೊಳ್ಳಲು ಚಿಕ್ಕಪ್ಪ ತನ್ನ ಅಣ್ಣನ ಮಗನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ನಡೆದಿದೆ. ಭಾನುವಾರ ಸಂಜೆ ದುದ್ಧಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗವಾನ್ ಗ್ರಾಮದಲ್ಲಿ ನಡೆದಿದೆ. ಆರು ತಿಂಗಳ ಹಿಂದೆ ಆತನ ಮಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ, ಅಂದು ಬೈಕ್ ಚಲಾಯಿಸುತ್ತಿದ್ದುದು ಜೀತ್ ಸಿಂಗ್ ಸಿಂಗ್ ಆಗಿದ್ದ. ಆತನ ಮೇಲೆ ಸೇಡು ತೀರಿಸಿಕೊಳ್ಳಲು ಆತನ ಚಿಕ್ಕಪ್ಪ ಸಾಕಷ್ಟು ದಿನಗಳಿಂದ ಹೊಂಚು ಹಾಕಿದ್ದ ಎನ್ನಲಾಗಿದೆ.

ಮಗನ ಸಾವಿಗೆ ಸೇಡು ತೀರಿಸಿಕೊಳ್ಳಲು ಅಣ್ಣನ ಮಗನನ್ನೇ ಕೊಂದ ಚಿಕ್ಕಪ್ಪ
ಸಾವು
ನಯನಾ ರಾಜೀವ್
|

Updated on:Oct 21, 2025 | 9:33 AM

Share

ಸೋನಭದ್ರಾ, ಅಕ್ಟೋಬರ್ 21: ಮಗನ ಸಾವಿಗೆ ಸೇಡು ತೀರಿಸಿಕೊಳ್ಳಲು ಚಿಕ್ಕಪ್ಪ ತನ್ನ ಅಣ್ಣನ ಮಗನನ್ನೇ ಕತ್ತಿಯಿಂದ ಕಡಿದು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ನಡೆದಿದೆ. ಭಾನುವಾರ ಸಂಜೆ ದುದ್ಧಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗವಾನ್ ಗ್ರಾಮದಲ್ಲಿ ನಡೆದಿದೆ. ಆರು ತಿಂಗಳ ಹಿಂದೆ ಆತನ ಮಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ, ಅಂದು ಬೈಕ್ ಚಲಾಯಿಸುತ್ತಿದ್ದುದು ಜೀತ್ ಸಿಂಗ್ ಸಿಂಗ್ ಆಗಿದ್ದ. ಆತನ ಮೇಲೆ ಸೇಡು ತೀರಿಸಿಕೊಳ್ಳಲು ಆತನ ಚಿಕ್ಕಪ್ಪ ಸಾಕಷ್ಟು ದಿನಗಳಿಂದ ಹೊಂಚು ಹಾಕಿದ್ದ ಎನ್ನಲಾಗಿದೆ.

ಮೃತನನ್ನು 19 ವರ್ಷದ ಜೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಅವರ ಚಿಕ್ಕಪ್ಪ ಛತ್ತು ಸಿಂಗ್ ಎಂದು ಗುರುತಿಸಲಾಗಿದೆ. ಎಸ್‌ಎಚ್‌ಒ ಪ್ರಕಾರ, ಭಾನುವಾರ ಸಂಜೆ ಜೀತ್ ಸಿಂಗ್ ತನ್ನ ಮನೆಯ ಬಾಗಿಲಲ್ಲಿ ಕುಳಿತಿದ್ದಾಗ ಆರೋಪಿ ಛತ್ತು ಸಿಂಗ್ ಜೀತ್ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಸ್ಥಳದಲ್ಲೇ ಕೊಲೆ ಮಾಡಿದ್ದಾನೆ.

ಪೊಲೀಸರ ಪ್ರಕಾರ, ಈ ಕೊಲೆಗೆ ಎರಡು ಪ್ರಮುಖ ಕಾರಣಗಳಿರಬಹುದು. ಮೊದಲನೆಯದಾಗಿ, ಆರು ತಿಂಗಳ ಹಿಂದೆ, ಆರೋಪಿಯ ಮಗ ಛತ್ತು ಸಿಂಗ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಆ ಸಮಯದಲ್ಲಿ ಜೀತ್ ಸಿಂಗ್ ಬೈಕ್ ಚಲಾಯಿಸುತ್ತಿದ್ದ. ಅಂದಿನಿಂದ ಆರೋಪಿಯು ತನ್ನ ಮಗನ ಸಾವಿಗೆ ತನ್ನ ಅಣ್ಣನ ಮಗ ಜೀತ್ ಸಿಂಗ್ ಕಾರಣ ಎಂದು ಹೇಳುತ್ತಿದ್ದ.

ಮತ್ತಷ್ಟು ಓದಿ: ಪತ್ನಿ ಮೇಲೆ ಸಂಶಯ: ಲೇಡಿ ಕಂಡಕ್ಟರ್​​ಗೆ ಮೂರು ಬಾರಿ ಇರಿದು ಕೊಲೆ ಮಾಡಿದ ಪೊಲೀಸಪ್ಪ

ಇನ್ನೊಂದು ಕಾರಣವೆಂದರೆ, ಎರಡೂ ಕುಟುಂಬಗಳ ನಡುವೆ ಆಸ್ತಿಯ ಬಗ್ಗೆ ದೀರ್ಘಕಾಲದ ವಿವಾದವಿತ್ತು. ಆರೋಪಿ ಛತ್ತು ಸಿಂಗ್ ಇದರಿಂದ ಅಸಮಾಧಾನಗೊಂಡಿದ್ದ ಮತ್ತು ಜೀತ್ ಸಿಂಗ್ ಅವರನ್ನು ಕೊಲ್ಲುವುದಾಗಿ ಪದೇ ಪದೇ ಬೆದರಿಕೆ ಹಾಕಿದ್ದ ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ. ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ಸ್ವತಂತ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಕೊಲೆಯಾದ ನಂತರ ಆರೋಪಿ ಛತ್ತು ಸಿಂಗ್ ತಲೆಮರೆಸಿಕೊಂಡಿದ್ದು, ಆತನ ಹುಡುಕಾಟಕ್ಕೆ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ಹೇಳಿಕೊಂಡಿದ್ದಾರೆ. ಈ ಘಟನೆಯ ನಂತರ, ನಾಗವಾನ್ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:32 am, Tue, 21 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ