Under Construction Bridge Collapse: ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ, ಒಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
ಬಿಹಾರದ ಸುಪೌಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಬಿಹಾರದ ಸುಪೌಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಸ್ಲ್ಯಾಬ್ ಕುಸಿದು 30 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ಹೊರತರುವ ಕಾರ್ಯ ನಡೆಯುತ್ತಿದೆ.
ಸದ್ಯ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಬಂದಿರುವ ಮಾಹಿತಿಯ ಪ್ರಕಾರ ಈ ಸೇತುವೆಯನ್ನು ಭಾರತಮಾಲಾ ಯೋಜನೆಯಡಿ ನಿರ್ಮಿಸಲಾಗುತ್ತಿದೆ . ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಸ್ಥಳೀಯರ ನೆರವು ಪಡೆಯಲಾಗುತ್ತಿದೆ.
#WATCH | Supaul, Bihar: A part of an under-construction bridge collapsed near Maricha between Bheja-Bakaur. pic.twitter.com/NNVR5aQ5IZ
— ANI (@ANI) March 22, 2024
ಕೋಸಿ ನದಿಗೆ ನಿರ್ಮಿಸಲಾಗುತ್ತಿದ್ದ ನಿರ್ಮಾಣ ಹಂತದ ಸೇತುವೆಯ ಸ್ಲ್ಯಾಬ್ ಕುಸಿದು ಈ ಘಟನೆ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕಳುಹಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:05 am, Fri, 22 March 24