Bihar: ಗಂಗಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ 2ನೇ ಸಲ ಕುಸಿತ

ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿರುವಂತಹ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ. ಗಂಗಾನದಿಗೆ ಅಡ್ಡಲಾಗಿ ಆಗುವನಿ-ಸುಲ್ತಂಗಂಜ್ ನಡುವೆ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿದಿದೆ.   

Bihar: ಗಂಗಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ 2ನೇ ಸಲ ಕುಸಿತ
ನಿರ್ಮಾಣ ಹಂತದ ಸೇತುವೆ ಕುಸಿತ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 04, 2023 | 8:17 PM

ಬಿಹಾರ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿರುವಂತಹ ಘಟನೆ ಭಾನುವಾರ ಬಿಹಾರ (Bihar) ದ ಭಾಗಲ್ಪುರದಲ್ಲಿ ನಡೆದಿದೆ. ಗಂಗಾನದಿಗೆ ಅಡ್ಡಲಾಗಿ ಆಗುವನಿ-ಸುಲ್ತಂಗಂಜ್ ನಡುವೆ ನಿರ್ಮಾಣವಾಗುತ್ತಿದ್ದ ಸೂಪರ್ ಸ್ಟ್ರಕ್ಚರ್​ ಸೇತುವೆ 2ನೇ ಸಲ ಕುಸಿದಿದೆ. ಸೇತುವೆಯ 500 ಮೀಟರ್ ಭಾಗವು ಇದ್ದಕ್ಕಿದ್ದಂತೆ ನದಿಗೆ ಬಿದ್ದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಇತ್ತೀಚೆಗೆ ಚಂಡಮಾರುತದಿಂದಾಗಿ ಏಪ್ರಿಲ್​ನಲ್ಲಿ ಸೇತುವೆಗೆ ಸ್ವಲ್ಪ ಹಾನಿಯಾಗಿತ್ತು. ಎರಡು ವರ್ಷಗಳ ಹಿಂದೆಯೂ ಸೇತುವೆಯ ಒಂದು ಭಾಗ ಕುಸಿದಿತ್ತು ಎನ್ನಲಾಗಿದೆ.

ಸಿಎಂ ನಿತೀಶ್ ಕುಮಾರ್ ಅವರು 23 ಫೆಬ್ರವರಿ 2014 ರಂದು ಸೇತುವೆಯ ಶಂಕುಸ್ಥಾಪನೆ ಮಾಡಿದ್ದರು. ಬಿಹಾರ ಸರ್ಕಾರದ ಈ ಯೋಜನೆಯನ್ನು ಅತ್ಯಂತ ಮಹತ್ವಾಕಾಂಕ್ಷೆ ಯೋಜನೆ ಎಂದು ಪರಿಗಣಿಸಲಾಗಿತ್ತು. ಈ ಯೋಜನೆಯ ವೆಚ್ಚದ ಆರಂಭಿಕ ಮೌಲ್ಯಮಾಪನ 1710.77 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಈ ಸೇತುವೆಯ ನಿರ್ಮಾಣದಿಂದ ಉತ್ತರ ಮತ್ತು ದಕ್ಷಿಣ ಬಿಹಾರ ನಡುವಿನ ಅಂತರ ಗಣನೀಯವಾಗಿ ಕಡಿಮೆಯಾಗಲಿದೆ.

ಇದನ್ನೂ ಓದಿ: ರೈಲು ದುರಂತಕ್ಕೆ ಮಸೀದಿ ಕಾರಣವೆಂದು ಫೋಟೋ ಶೇರ್: ತುಮಕೂರಿನ ಮಹಿಳೆ ಮಾಹಿತಿ ಸಂಗ್ರಹಿಸಿದ ಒಡಿಶಾ ಪೊಲೀಸರು

ಈ ಸೇತುವೆ ಉದ್ದ ಸುಮಾರು 3.160 ಕಿ.ಮೀ. ರಸ್ತೆಯ ಒಟ್ಟು ಉದ್ದ ಸುಮಾರು 25 ಕಿ.ಮೀ ಆಗಿದ್ದು, ಮಾರ್ಚ್ 2020 ರೊಳಗೆ ಸಂಚಾರ ಆರಂಭಿಸುವುದಾಗಿ ಇಲಾಖೆ ಸೂಚನೆ ನೀಡಿತ್ತು. ಈ ಸೇತುವೆ NH 31 ಮತ್ತು NH 80 ಸಂಪರ್ಕಗೊಳ್ಳಲಿದೆ.

ಇದನ್ನೂ ಓದಿ: Restoration: ರೈಲುದುರಂತ ಸ್ಥಳದಲ್ಲಿ ತ್ವರಿತವಾಗಿ ನಡೆಯುತ್ತಿರುವ ದುರಸ್ತಿ; ರಾತ್ರಿ 8ರಷ್ಟರಲ್ಲಿ 2 ರೈಲ್ವೆ ಲೈನ್ ಸಿದ್ಧಗೊಳ್ಳುವ ಸಾಧ್ಯತೆ

ರಾಷ್ಟ್ರೀಯ ಹೆದ್ದಾರಿ 31, ಪಸ್ರಾಹಾ ಮತ್ತು ಮುಂಗೇರ್ ಭಾಗಲ್ಪುರ್ ರಾಷ್ಟ್ರೀಯ ಹೆದ್ದಾರಿ 80 ರಲ್ಲಿರುವ ಸುಲ್ತಂಗಂಜ್ ಬಳಿ ನಾಲ್ಕು-ಪಥದ ರಸ್ತೆಗೆ ಈ ಸೇತುವೆಯನ್ನು ಸಂಪರ್ಕಿಸಲಾಗುತ್ತಿದೆ.

ಘಟನೆ ಕುರಿತಾಗಿ ಎಎನ್​ಐ ಜೊತೆ ಎಲ್​ಒಪಿ ವಿಜಯ್​ ಕುಮಾರ್​ ಸಿನ್ಹಾ ಮಾತನಾಡಿದ್ದು, ಬಿಹಾರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:52 pm, Sun, 4 June 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್