ಲಕ್ನೋ: ನಿರ್ಮಾಣ ಹಂತದ ಕಟ್ಟಡ ಕುಸಿತ, ಇಬ್ಬರು ಸಾವು, 14 ಮಂದಿಗೆ ಗಾಯ
ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿರುವ ಘಟನೆ ಲಕ್ನೋನಲ್ಲಿ ನಡೆದಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೆಲಮಾಳಿಗೆಯ ಮಹಡಿ ಕುಸಿದು 14 ಕಾರ್ಮಿಕರು ಗಾಯಗೊಂಡಿದ್ದು, ಎರಡು ತಿಂಗಳ ಹೆಣ್ಣು ಮಗು ಮತ್ತು ಒಬ್ಬ ಪುರುಷ ನಿದ್ರೆಯಲ್ಲಿದ್ದಾಗ ಸಾವನ್ನಪ್ಪಿದ್ದಾರೆ.

ಗುರುವಾರ ಮಧ್ಯರಾತ್ರಿ ಕಾಳಿಂದಿ ಪಾರ್ಕ್ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ ಕಟ್ಟಡ ನಿರ್ಮಾಣ ಮಾಡುವ ಕಾರ್ಮಿಕರು ಅಲ್ಲೇ ನೆಲಪಾಳಿಗೆಯಲ್ಲಿ ವಾಸಿಸುತ್ತಿದ್ದರು, ಮಹಡಿ ಕುಸಿದಿದ್ದರಿಂದ ಕಾರ್ಮಿಕರು ನಿದ್ರೆಯಲ್ಲಿ ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ ಹೆಚ್ಚುವರಿ ಪೊಲೀಸ್ ಉಪ ಕಮಿಷನರ್ ಸೈಯದ್ ಅಲಿ ಅಬ್ಬಾಸ್ ಹೇಳಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ಬದುಕುಳಿದವರಿಗಾಗಿ ಹುಡುಕಾಟ ಆರಂಭಿಸಿದೆ.
ಮತ್ತಷ್ಟು ಓದಿ: ಗ್ರೇಟರ್ ನೋಯ್ಡಾದಲ್ಲಿ ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು 4 ಮಂದಿ ಸಾವು
ಘಟನೆಯಲ್ಲಿ ಕಾರ್ಮಿಕ ಮುಕದಮ್ (30) ಮತ್ತು ಎರಡು ತಿಂಗಳ ಹೆಣ್ಣು ಮಗು ಐಶ್ಯಾ ಸಾವನ್ನಪ್ಪಿದ್ದು, ಗಾಯಗೊಂಡ ಇತರ 14 ಕಾರ್ಮಿಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ