ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಖಾಸಗಿ ಒಳಾಂಗಣ ಕ್ರೀಡಾಂಗಣ ಸೋಮವಾರ ಕುಸಿದು ಬಿದ್ದಿದೆ. ಈ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ರಾಜೇಂದ್ರನಗರ ಡಿಸಿಪಿ ಜಗದೇಶ್ವರ್ ರೆಡ್ಡಿ ಅವರು ಒಂದು ಮೃತ ದೇಹವನ್ನು ಹೊರತೆಗೆಯಲಾಗಿದ್ದು, ಇನ್ನೊಂದು ಮೃತದೇಹವನ್ನು ಅವಶೇಷಗಳಿಂದ ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿ ಸಂಸ್ಥೆ ANI ನಿರ್ಮಾಣ ಹಂತದಲ್ಲಿರುವ ಒಳಾಂಗಣ ಕ್ರೀಡಾಂಗಣದ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆ ‘X’ (ಹಿಂದೆ ಟ್ವಿಟರ್) ನಲ್ಲಿ ಹಂಚಿಕೊಂಡಿದೆ. ಈ ವೀಡಿಯೊದಲ್ಲಿ, ಬುಲ್ಡೋಜರ್‌ನಿಂದ ಅವಶೇಷಗಳನ್ನು ತೆಗೆದುಹಾಕುವುದನ್ನು ಕಾಣಬಹುದು.
#WATCH | Rangareddy, Telangana: Visuals from the spot where an under-construction private indoor stadium collapsed killing two people and injuring around 10, earlier today (20/11) pic.twitter.com/r6ErVsXXK6
— ANI (@ANI) November 20, 2023
ಮತ್ತಷ್ಟು ಓದಿ: ಮಹಾರಾಷ್ಟ್ರ: ಎರಡು ಅಂತಸ್ತಿನ ಕಟ್ಟಡ ಕುಸಿತ, ನವಜಾತ ಶಿಶು ಸೇರಿ ಇಬ್ಬರು ಸಾವು
ಘಟನೆಯಲ್ಲಿ 3 ಜನರು ಸಾವನ್ನಪ್ಪಿದ್ದಾರೆ ಎಂದು ಹಲವಾರು ವರದಿಗಳು ಹೇಳುತ್ತಿದ್ದರೂ, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ರಂಗಾ ರೆಡ್ಡಿ ಜಿಲ್ಲೆಯ ಮೊಯಿನಾಬಾದ್ ಗ್ರಾಮದ ಕ್ರೀಡಾಂಗಣದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ