ಭೂಗತ ಪಾತಕಿ ರಾಜೇಂದ್ರ ನಿಖಾಲ್ಜೆ ಅಲಿಯಾಸ್ ಛೋಟಾ ರಾಜನ್ (Chhota Rajan) ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜು.27ರಂದೇ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ ಎಂದು ತಿಹಾರ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 61ವರ್ಷದ ಅವರಿಗೆ ಸದ್ಯ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಏಮ್ಸ್ಗೆ ದಾಖಲಿಸಲಾಗಿದೆ. ಈ ಮೊದಲು ಕೊವಿಡ್ 19 ಪಾಸಿಟಿವ್ ಆಗಿ ಅಡ್ಮಿಟ್ ಆಗಿದ್ದರು.
ಭೂಗತ ಪಾತಕಿ ಛೋಟಾ ರಾಜನ್ ಇಂಡೋನೇಷಿಯಾದ ಬಾಲಿಯಲ್ಲಿ 2015ರಲ್ಲಿ ಬಂಧಿಸಲಾಗಿತ್ತು. ಅದಾದ ಬಳಿಕ ಭಾರತಕ್ಕೆ ವಾಪಸ್ ಕರೆತಂದು ತಿಹಾರ್ ಜೈಲಿನಲ್ಲಿ ಇಡಲಾಗಿತ್ತು. 2011ರಲ್ಲಿ ನಡೆದಿದ್ದ ಪತ್ರಕರ್ತ ಜೆ.ಡೇ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2018ರಲ್ಲಿ ಛೋಟಾ ರಾಜನ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಇನ್ನು ಛೋಟಾ ರಾಜನ್ ಸಾಮಾನ್ಯ ಕ್ರಿಮಿನಲ್ ಅಲ್ಲ. ಅವನ ಕೇಸ್ಗಳನ್ನು ಉಳಿದವರ ಕೇಸ್ಗಳಂತೆ ಪರಿಗಣಿಸಬಾರದು ಆತನಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸಿಬಿಐ (CBI) ಬಾಂಬೆ ಹೈಕೋರ್ಟ್ಗೆ ಬುಧವಾರ ಅರ್ಜಿ ಸಲ್ಲಿಸಿದೆ. ಛೋಟಾ ರಾಜನ್ ವಿರುದ್ಧ ವಿಚಾರಣೆ ಮಾಡಬೇಕಾದ ಹಲವು ಪ್ರಕರಣಗಳು ಬಾಕಿ ಇವೆ. ಅವನು ರಾಷ್ಟ್ರದ ಪಾಲಿಗೆ ಝಡ್ ಪ್ಲಸ್ ಸೆಕ್ಯೂರಿಟಿ ಬೆದರಿಕೆ ಎಂದು ವಿಶೇಷ ಸಾರ್ವಜನಿಕ ಪ್ರಾಸಿಕ್ಯೂಟರ್ ಪರ್ದೀಪ್ ಘಾರಟ್, ಬಾಂಬೆ ಹೈಕೋರ್ಟ್ನ ಅನುಜಾ ಪ್ರಭುದೇಸಾಯ್ ನೇತೃತ್ವದ ಪೀಠಕ್ಕೆ ತಿಳಿಸಿದ್ದಾರೆ. ಒಟ್ಟು ಮೂರು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಜಾಮೀನು ನೀಡುವಂತೆ ಛೋಟಾ ರಾಜನ್ ಬಾಂಬೆ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Viral Video: ಯಮಹಾ ಬೈಕ್ ಓಡಿಸಿ ಕ್ಯಾಮರಾಕ್ಕೆ ಪೋಸ್ ಕೊಟ್ಟ ವೃದ್ದೆ! ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು
Underworld don Chhota Rajan Suffering from stomach ache and admitted to Delhi AIIMS