ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ; ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಸಮಾಧಾನ

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಇಂದು ಸುಪ್ರೀಂ ಕೋರ್ಟ್‌ನಲ್ಲಿ ತೀಕ್ಷ್ಣವಾದ ಹೇಳಿಕೆಗಳನ್ನು ನೀಡಿದ್ದಾರೆ. ಇದು ತೀವ್ರ ಚರ್ಚೆಗೆ ಕಾರಣವಾಗಿದೆ. ಕೆಲವು ನಿರುದ್ಯೋಗಿ ಯುವಕರು ಸಾಮಾಜಿಕ ಮಾಧ್ಯಮ ಬಳಕೆದಾರರು, ಆರ್‌ಟಿಐ ಕಾರ್ಯಕರ್ತರು ಮತ್ತು ಇತರ ಕಾರ್ಯಕರ್ತರು ಜಿರಳೆಗಳಂತೆ ಪರಾವಲಂಬಿ ಆಗುತ್ತಾರೆ. ಇದಾದ ನಂತರ ವ್ಯವಸ್ಥೆಯ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತಾರೆ ಎಂದು ಹೇಳಿದ್ದಾರೆ.

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ; ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಸಮಾಧಾನ
Cji Surya Kant

Updated on: May 15, 2026 | 8:54 PM

ನವದೆಹಲಿ, ಮೇ 15: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ (Justice Surya Kant) ಇಂದು ನಿರುದ್ಯೋಗಿ ಯುವಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿರುದ್ಯೋಗಿ ಯುವಕರು ಸಾಮಾಜಿಕ ಮಾಧ್ಯಮದ ಮೂಲಕ ಎಲ್ಲರ ಮೇಲೆ ದಾಳಿ ಮಾಡುತ್ತಾರೆ ಎಂದು ಅವರು ಟೀಕಿಸಿದ್ದಾರೆ. ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಹಿರಿಯ ವಕೀಲ ಹುದ್ದೆಯನ್ನು ಬಯಸುತ್ತಿರುವ ವಕೀಲರನ್ನು ತರಾಟೆಗೆ ತೆಗೆದುಕೊಂಡಾಗ ಈ ಹೇಳಿಕೆಗಳು ಬಂದವು.

ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠದ ಮುಂದೆ ವಕೀಲರನ್ನು ಹಿರಿಯ ವಕೀಲರನ್ನಾಗಿ ನೇಮಿಸುವುದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಹೇಳಿಕೆಗಳು ಬಂದವು. ಹಿರಿಯ ವಕೀಲ ಹುದ್ದೆಗಾಗಿ ಆಕ್ರಮಣಕಾರಿಯಾಗಿ ವರ್ತಿಸಿದ್ದಕ್ಕಾಗಿ ನ್ಯಾಯಾಲಯವು ಅರ್ಜಿದಾರರ ವಕೀಲರನ್ನು ಖಂಡಿಸಿತು. ಅವರು ಫೇಸ್‌ಬುಕ್‌ನಲ್ಲಿ ಬಳಸಿದ್ದಾರೆ ಎನ್ನಲಾದ ಭಾಷೆ ಸೇರಿದಂತೆ ಅವರ ನಡವಳಿಕೆಯನ್ನು ಪ್ರಶ್ನಿಸಿತು.

ಇದನ್ನೂ ಓದಿ: ಸನಾತನ ಧರ್ಮದ ವಿಷಯಕ್ಕೆ ಬಂದರೆ ಸುಮ್ಮನಿರುವುದಿಲ್ಲ; ಸಿಜೆಐ ಮೇಲಿನ ಶೂ ದಾಳಿ ಬಳಿಕ ಅಮಾನತುಗೊಂಡ ವಕೀಲ ಹೇಳಿದ್ದೇನು?

“ದೇಶದಲ್ಲಿ ಜಿರಳೆಗಳಂತೆ ಯುವಕರು ಇದ್ದಾರೆ. ಅವರಲ್ಲಿ ಬಹುತೇಕರು ನಿರುದ್ಯೋಗಿಗಳು. ಅವರಿಗೆ ಇಂಥದ್ದೇ ಅಂತ ಒಂದು ವೃತ್ತಿ ಇರುವುದಿಲ್ಲ. ಅವರಿಗೆ ವೃತ್ತಿಯಲ್ಲಿ ಯಾವುದೇ ಸ್ಥಾನವಿರುವುದಿಲ್ಲ. ಅವರಲ್ಲಿ ಕೆಲವರು ಮಾಧ್ಯಮಗಳಲ್ಲಿ ತೊಡಗಿಸಿಕೊಳ್ಳುತ್ತಾರೆ, ಕೆಲವರು ಸಾಮಾಜಿಕ ಮಾಧ್ಯಮ, ಆರ್‌ಟಿಐ ಕಾರ್ಯಕರ್ತರು ಮತ್ತು ಇತರ ಕಾರ್ಯಕರ್ತರಾಗುತ್ತಾರೆ. ಆ ಪ್ಲಾಟ್​ಫಾರ್ಮ್​ಗಳ ಮೂಲಕ ಅವರು ಎಲ್ಲರ ಮೇಲೂ ದಾಳಿ ಮಾಡಲು ಪ್ರಾರಂಭಿಸುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us