Uniform Civil Code: ಏಕರೂಪ ನಾಗರಿಕ ಸಂಹಿತೆ ಕುರಿತು ಪ್ರಧಾನಿ ಮೋದಿ ಹೇಳಿಕೆ ಹಿನ್ನೆಲೆ ಮುಸ್ಲಿಂ ಕಾನೂನು ಮಂಡಳಿ ಸಭೆ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಹೇಳಿಕೆಗೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಮತ್ತು ಜಮೀಯತ್ ಉಲೇಮಾ-ಎ-ಹಿಂದ್ ಆಕ್ಷೇಪ ವ್ಯಕ್ತಪಡಿಸಿದೆ.

Uniform Civil Code: ಏಕರೂಪ ನಾಗರಿಕ ಸಂಹಿತೆ ಕುರಿತು ಪ್ರಧಾನಿ ಮೋದಿ ಹೇಳಿಕೆ ಹಿನ್ನೆಲೆ ಮುಸ್ಲಿಂ ಕಾನೂನು ಮಂಡಳಿ ಸಭೆ
ನರೇಂದ್ರ ಮೋದಿImage Credit source: NDTV
Follow us
ನಯನಾ ರಾಜೀವ್
|

Updated on: Jun 28, 2023 | 9:17 AM

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಹೇಳಿಕೆಗೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಮತ್ತು ಜಮೀಯತ್ ಉಲೇಮಾ-ಎ-ಹಿಂದ್ ಆಕ್ಷೇಪ ವ್ಯಕ್ತಪಡಿಸಿದೆ. ಜೂನ್ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೋಪಾಲ್‌ನಲ್ಲಿ, ಏಕರೂಪ ನಾಗರಿಕ ಸಂಹಿತೆಯ ಮೇಲೆ ಜನರನ್ನು ಪ್ರಚೋದಿಸಲಾಗುತ್ತಿದೆ ಎಂದು ಹೇಳಿದ್ದರು. ಈ ಭ್ರಮೆಯನ್ನು ಬಿಜೆಪಿ ತೊಲಗಿಸುತ್ತದೆ. ಒಂದು ಮನೆಯನ್ನು ಎರಡು ಕಾನೂನುಗಳಿಂದ ನಡೆಸಲಾಗುವುದಿಲ್ಲ.

ಇಡೀ ದೇಶಕ್ಕೆ ಏಕರೂಪದ ಕಾನೂನು ರೂಪಿಸುವುದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಮುಸ್ಲಿಂ ಮಂಡಳಿ ಹೇಳಿದೆ. ಪ್ರತಿಯೊಬ್ಬರಿಗೂ ಅವರವರ ಧರ್ಮ ಮತ್ತು ಸಂಸ್ಕೃತಿಯನ್ನು ಅನುಸರಿಸುವ ಹಕ್ಕಿದೆ ಎಂದಿದೆ. ಏತನ್ಮಧ್ಯೆ, ಮಂಗಳವಾರ ಸಂಜೆ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಯುಸಿಸಿಗೆ ಸಂಬಂಧಿಸಿದಂತೆ ಸಭೆ ನಡೆಸಿತು. ಈ ಸಮಯದಲ್ಲಿ, ಅವರು ಷರಿಯತ್ ಕಾನೂನುಗಳನ್ನು ಉಲ್ಲೇಖಿಸುವ ಕರಡನ್ನು ಸಿದ್ಧಪಡಿಸಿದರು. ಶೀಘ್ರದಲ್ಲೇ ಕಾನೂನು ಆಯೋಗಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ತ್ರಿವಳಿ ತಲಾಖ್ ಅನ್ನು ಬೆಂಬಲಿಸುವವರು ಮುಸ್ಲಿಂ ಹೆಣ್ಣು ಮಕ್ಕಳಿಗೆ ಅನ್ಯಾಯ ಮಾಡುತ್ತಿದ್ದಾರೆ: ಮೋದಿ

ಆಯೋಗವು ಯುಸಿಸಿ ಬಗ್ಗೆ ಸಾಮಾನ್ಯ ಜನರ ಅಭಿಪ್ರಾಯವನ್ನೂ ಕೇಳಿದೆ. ಮುಸ್ಲಿಂ ಧರ್ಮಗುರುಗಳ ಸಂಘಟನೆಯಾದ JUH ನ ಕಾರ್ಯದರ್ಶಿ ನಿಯಾಜ್ ಅಹ್ಮದ್ ಫಾರೂಕಿ, ಯುಸಿಸಿ ಕುರಿತು ಪ್ರಧಾನಿ ಹೇಳಿಕೆಗಳು ಕಾನೂನು ಆಯೋಗದ ಮೇಲೆ ಪ್ರಭಾವ ಬೀರಬಹುದು ಎಂದು ಹೇಳಿದ್ದಾರೆ.

ದೇಶದ ಪ್ರಧಾನಿಯಾಗಿರುವುದು ಅವರ ಸ್ಥಾನಮಾನಕ್ಕೆ ತಕ್ಕುದಲ್ಲ ಮತ್ತು ಯುಸಿಸಿ ಕುರಿತು ಇಂತಹ ಬಹಿರಂಗ ಹೇಳಿಕೆ ನೀಡುವ ಮುನ್ನ ಕಾನೂನು ಆಯೋಗದ ಸಲಹೆ ಪಡೆಯಬೇಕಿತ್ತು ಎಂದಿದ್ದಾರೆ.

ಯುಸಿಸಿ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಪ್ರತಿಕ್ರಿಯಿಸಿದ್ದಾರೆ. ಭಾರತದ ಪ್ರಧಾನಿಗೆ ಆರ್ಟಿಕಲ್ 29 ಅರ್ಥವಾಗುತ್ತಿಲ್ಲ ಎಂದು ಓವೈಸಿ ಹೇಳಿದ್ದಾರೆ. ಯುಸಿಸಿ ಹೆಸರಿನಲ್ಲಿ ದೇಶದ ವೈವಿಧ್ಯತೆಯನ್ನು ಕಿತ್ತುಕೊಳ್ಳಬಾರದು. ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಧರ್ಮವನ್ನು ಪ್ರಚಾರ ಮಾಡುವ ಹಕ್ಕನ್ನು ನೀಡಿದೆ ಎಂದು ಎಸ್‌ಪಿ ಸಂಸದ ಎಸ್‌ಟಿ ಹಸನ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು? ಒಂದು ದೇಶದಲ್ಲಿ ಎರಡೆರಡು ಕಾನೂನುಗಳು ಇರಲು ಹೇಗೆ ಸಾಧ್ಯ? ಎಂದು ಹೇಳುವ ಮೂಲಕ ಏಕರೂಪ ನಾಗರಿಕ ಸಂಹಿತೆ ಪರ ಪ್ರಧಾನಿ ಮೋದಿ ಮಾತನಾಡಿದ್ದರು. ಮಧ್ಯಪ್ರದೇಶದಲ್ಲಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮೇರಾ ಬೂತ್ ಸಬ್ಸೆ ಮಜ್‌ಬೂತ್” ಅಭಿಯಾನದ ಅಡಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಮಾತನಾಡಿದ್ದರು.

ಒಂದು ಕುಟುಂಬದ ವಿವಿಧ ಸದಸ್ಯರಿಗೆ ವಿಭಿನ್ನ ನಿಯಮಗಳು ಇರುವುದಿಲ್ಲ ಮತ್ತು ದೇಶವು ಎರಡು ಕಾನೂನುಗಳ ಮೇಲೆ ನಡೆಯಲು ಸಾಧ್ಯವಿಲ್ಲ. ಶೇ. 90ರಷ್ಟು ಸುನ್ನಿ ಮುಸ್ಲಿಮರಿರುವ ಈಜಿಪ್ಟ್​ನಲ್ಲಿ 80 ರಿಂದ 90 ವರ್ಷಗಳ ಹಿಂದೆ ತ್ರಿವಳಿ ತಲಾಖ್ ಅನ್ನು ರದ್ದುಗೊಳಿಸಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ