Uniform Civil Code: ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ಸಮಯ ಬಂದಿದೆ: ಜಗದೀಪ್ ಧನ್ಕರ್

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(Uniform Civil Code)ಯನ್ನು ಜಾರಿಗೆ ತರುವ ಸಮಯ ಬಂದಿದೆ ಇನ್ನೂ ತಡವಾದರೆ ನಮ್ಮ ಮೌಲ್ಯಗಳಿಗೆ ಧಕ್ಕೆ ತಂದಂತಾಗುತ್ತದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದ್ದಾರೆ.

Uniform Civil Code: ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ಸಮಯ ಬಂದಿದೆ: ಜಗದೀಪ್ ಧನ್ಕರ್
ಜಗದೀಪ್ ಧನ್ಕರ್
Follow us
ನಯನಾ ರಾಜೀವ್
|

Updated on:Jul 05, 2023 | 11:08 AM

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(Uniform Civil Code)ಯನ್ನು ಜಾರಿಗೆ ತರುವ ಸಮಯ ಬಂದಿದೆ ಇನ್ನೂ ತಡವಾದರೆ ನಮ್ಮ ಮೌಲ್ಯಗಳಿಗೆ ಧಕ್ಕೆ ತಂದಂತಾಗುತ್ತದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್(Jagdeep Dhankhar) ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆಯು ದೇಶದ ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತದೆ ಹಾಗೆಯೇ ಜನರಲ್ಲಿ ನಾವೆಲ್ಲರೂ ಒಂದೇ ಎಂಬ ಭಾವ ಮೂಡುತ್ತದೆ ಎಂದರು. ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.

ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ಕಾನೂನು ಆಯೋಗವು ಮೂಲಭೂತ ಚೌಕಟ್ಟನ್ನು ಸಿದ್ಧಪಡಿಸಿದೆ. ಇದರಲ್ಲಿ ಲಿಂಗ ಸಮಾನತೆಗೆ ಗರಿಷ್ಠ ಒತ್ತು ನೀಡಲಾಗಿದೆ. ಇದಕ್ಕಾಗಿ ಇದುವರೆಗೆ ಸುಮಾರು 9 ಲಕ್ಷ ಸಲಹೆಗಳನ್ನು ಸ್ವೀಕರಿಸಿದ್ದೇವೆ ಎಂದು ಕಾನೂನು ಆಯೋಗ ಹೇಳಿದೆ.

ಮತ್ತಷ್ಟು ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಎಂದರೇನು? ಯಾರಿಗೆಲ್ಲಾ ಅನ್ವಯಿಸುತ್ತೆ ಇಲ್ಲಿದೆ ಮಾಹಿತಿ

ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ಸೋಮವಾರ (ಜುಲೈ 3) ಕಾನೂನು ಸಚಿವಾಲಯದ ಸಂಸದೀಯ ಸಮಿತಿಯ ಮಹತ್ವದ ಸಭೆಯೂ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಬಿಜೆಪಿಯ ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ವಹಿಸಿದ್ದರು. ಈ ಸಭೆಯಲ್ಲಿ ಸಮಿತಿಯ ಸದಸ್ಯರು ಸರ್ಕಾರದ ಉದ್ದೇಶದ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದರು.

ಏಕರೂಪ ನಾಗರಿಕ ಸಂಹಿತೆ ಎಂದರೇನು? ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮವಿರುವುದು. ಏಕರೂಪ ನಾಗರಿಕ ಸಂಹಿತೆಯು ಜಾತ್ಯತೀತ ಕಾನೂನಾಗಿದ್ದು, ಅದರ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ,. ಇದೀಗ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಹಿಂದೂ ಕಾನೂನು ಬುದ್ಧ, ಜೈನ ಮತ್ತು ಸಿಖ್ ಧರ್ಮಗಳ ಅನುಯಾಯಿಗಳಿಗೂ ಅನ್ವಯಿಸುತ್ತದೆ. ವಿಲ್ ಮತ್ತು ಮದುವೆಯಂತಹ ವಿಷಯಗಳಲ್ಲಿ ಈ ಕಾನೂನುಗಳನ್ನು ಪಾಲಿಸಬೇಕು.

ಬೇರೆ ರೀತಿಯಲ್ಲಿ ಹೇಳುವುದಾದರೆ, ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶಕ್ಕೆ ಏಕರೂಪದ ಕಾನೂನಿನ ಜೊತೆಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ, ದತ್ತು ಸ್ವೀಕಾರದ ನಿಯಮಗಳು ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಒಂದೇ ಆಗಿರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:06 am, Wed, 5 July 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್