ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(Uniform Civil Code)ಯನ್ನು ಜಾರಿಗೆ ತರುವ ಸಮಯ ಬಂದಿದೆ ಇನ್ನೂ ತಡವಾದರೆ ನಮ್ಮ ಮೌಲ್ಯಗಳಿಗೆ ಧಕ್ಕೆ ತಂದಂತಾಗುತ್ತದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್(Jagdeep Dhankhar) ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆಯು ದೇಶದ ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತದೆ ಹಾಗೆಯೇ ಜನರಲ್ಲಿ ನಾವೆಲ್ಲರೂ ಒಂದೇ ಎಂಬ ಭಾವ ಮೂಡುತ್ತದೆ ಎಂದರು. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.
ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ಕಾನೂನು ಆಯೋಗವು ಮೂಲಭೂತ ಚೌಕಟ್ಟನ್ನು ಸಿದ್ಧಪಡಿಸಿದೆ. ಇದರಲ್ಲಿ ಲಿಂಗ ಸಮಾನತೆಗೆ ಗರಿಷ್ಠ ಒತ್ತು ನೀಡಲಾಗಿದೆ. ಇದಕ್ಕಾಗಿ ಇದುವರೆಗೆ ಸುಮಾರು 9 ಲಕ್ಷ ಸಲಹೆಗಳನ್ನು ಸ್ವೀಕರಿಸಿದ್ದೇವೆ ಎಂದು ಕಾನೂನು ಆಯೋಗ ಹೇಳಿದೆ.
ಮತ್ತಷ್ಟು ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಎಂದರೇನು? ಯಾರಿಗೆಲ್ಲಾ ಅನ್ವಯಿಸುತ್ತೆ ಇಲ್ಲಿದೆ ಮಾಹಿತಿ
ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ಸೋಮವಾರ (ಜುಲೈ 3) ಕಾನೂನು ಸಚಿವಾಲಯದ ಸಂಸದೀಯ ಸಮಿತಿಯ ಮಹತ್ವದ ಸಭೆಯೂ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಬಿಜೆಪಿಯ ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ವಹಿಸಿದ್ದರು. ಈ ಸಭೆಯಲ್ಲಿ ಸಮಿತಿಯ ಸದಸ್ಯರು ಸರ್ಕಾರದ ಉದ್ದೇಶದ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದರು.
#WATCH | ” …any further delay in implementation of Uniform Civil Code will be corrosive of our values. The underlying sublimity of it has to be appreciated and understood…”: Jagdeep Dhankhar, Vice President, on UCC pic.twitter.com/5GXx8GxvgN
— ANI (@ANI) July 4, 2023
ಏಕರೂಪ ನಾಗರಿಕ ಸಂಹಿತೆ ಎಂದರೇನು?
ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮವಿರುವುದು. ಏಕರೂಪ ನಾಗರಿಕ ಸಂಹಿತೆಯು ಜಾತ್ಯತೀತ ಕಾನೂನಾಗಿದ್ದು, ಅದರ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ,. ಇದೀಗ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಹಿಂದೂ ಕಾನೂನು ಬುದ್ಧ, ಜೈನ ಮತ್ತು ಸಿಖ್ ಧರ್ಮಗಳ ಅನುಯಾಯಿಗಳಿಗೂ ಅನ್ವಯಿಸುತ್ತದೆ. ವಿಲ್ ಮತ್ತು ಮದುವೆಯಂತಹ ವಿಷಯಗಳಲ್ಲಿ ಈ ಕಾನೂನುಗಳನ್ನು ಪಾಲಿಸಬೇಕು.
ಬೇರೆ ರೀತಿಯಲ್ಲಿ ಹೇಳುವುದಾದರೆ, ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶಕ್ಕೆ ಏಕರೂಪದ ಕಾನೂನಿನ ಜೊತೆಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ, ದತ್ತು ಸ್ವೀಕಾರದ ನಿಯಮಗಳು ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಒಂದೇ ಆಗಿರುತ್ತದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:06 am, Wed, 5 July 23