ಸ್ವಚ್ಛ, ಸುಂದರ, ಉತ್ತಮ ಭಾರತಕ್ಕಾಗಿ ಒಟ್ಟಿಗೆ ಒಂದು ಪ್ರಯತ್ನ: ದೆಹಲಿಯಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್
ಕೇಂದ್ರ ಸಚಿವ ಧಮೇಂದ್ರ ಪ್ರಧಾನ್(Dharmendra Pradhan) ದೆಹಲಿ ವಿಶ್ವವಿದ್ಯಾಲಯದಲ್ಲಿ 'ಸ್ವಚ್ಛತಾ ಹಿ ಸೇವಾ' ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದರು. ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಹ ಸಚಿವರೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಸ್ವಚ್ಛ ಭಾರತಕ್ಕಾಗಿ ಪ್ರಧಾನಿ ಮೋದಿಯವರ ಸಂಕಲ್ಪವು ವಿಶ್ವದ ಅತಿ ದೊಡ್ಡ ಆಂದೋಲನವಾಗಿ ಮಾರ್ಪಟ್ಟಿದೆ ಎಂದು ಹೇಳಿದರು. ಪ್ರಧಾನ್ ಅವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಬೀದಿಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವ ಧಮೇಂದ್ರ ಪ್ರಧಾನ್(Dharmendra Pradhan) ದೆಹಲಿ ವಿಶ್ವವಿದ್ಯಾಲಯದಲ್ಲಿ ‘ಸ್ವಚ್ಛತಾ ಹಿ ಸೇವಾ‘ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದರು. ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಹ ಸಚಿವರೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಸ್ವಚ್ಛ ಭಾರತಕ್ಕಾಗಿ ಪ್ರಧಾನಿ ಮೋದಿಯವರ ಸಂಕಲ್ಪವು ವಿಶ್ವದ ಅತಿ ದೊಡ್ಡ ಆಂದೋಲನವಾಗಿ ಮಾರ್ಪಟ್ಟಿದೆ ಎಂದು ಹೇಳಿದರು. ಪ್ರಧಾನ್ ಅವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಬೀದಿಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಸ್ವಚ್ಛ, ಸುಂದರ ಹಾಗೂ ಉತ್ತಮ ಭಾರತಕ್ಕಾಗಿ ಒಟ್ಟಿಗೆ ಒಂದು ಪ್ರಯತ್ನ ಎಂದು ಬರೆದುಕೊಂಡಿದ್ದಾರೆ. ನಾವು ಒಟ್ಟಾಗಿ ನಮ್ಮ ಹಳ್ಳಿಗಳು, ನಗರಗಳು ಮತ್ತು ಹತ್ತಿರದ ಸಾರ್ವಜನಿಕ ಸ್ಥಳಗಳ ಚಿತ್ರವನ್ನು ಬದಲಾಯಿಸೋಣ. ಸ್ವಚ್ಛ ಭಾರತವೇ ಪೂಜ್ಯ ಬಾಪು ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.
ಪ್ರಧಾನ್ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಹಮದಾಬಾದ್‌ನಲ್ಲಿ ನಡೆದ ‘ಶ್ರಮದಾನ್’ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೆಹಲಿಯ ಸಫ್ದರ್‌ಜಂಗ್ ರೈಲು ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ದೇಶದ ವಿವಿಧ ಭಾಗಗಳಲ್ಲಿ ಹಲವಾರು ಬಿಜೆಪಿ ನಾಯಕರು ಮತ್ತು ಸಚಿವರು ಕೂಡ ಅಭಿಯಾನದಲ್ಲಿ ಭಾಗವಹಿಸಿದ್ದರು.
ಮತ್ತಷ್ಟು ಓದಿ: Swachhata Hi Seva: ಬನ್ನಿ ದೇಶವನ್ನು ಸ್ವಚ್ಛ ಹಾಗೂ ಸುಂದರವಾಗಿಸೋಣ: ಹಮೀಪುರದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಶ್ರಮದಾನ
ಗಾಂಧಿ ಜಯಂತಿಯ ಪೂರ್ವಭಾವಿಯಾಗಿ ಅಕ್ಟೋಬರ್ 1 ರಂದು ರಾಷ್ಟ್ರವ್ಯಾಪಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕಳೆದ ವಾರ ಮನ್ ಕಿ ಬಾತ್ನಲ್ಲಿ ದೇಶದ ಜನತೆಯಲ್ಲಿ ಮನವಿ ಮಾಡಿದ್ದರು. ಸ್ವಚ್ಛತಾ ಅಭಿಯಾನವು ಮಾರುಕಟ್ಟೆ ಸ್ಥಳಗಳು, ರೈಲ್ವೆ ಹಳಿಗಳು, ಜಲಮೂಲಗಳು, ಪ್ರವಾಸಿ ತಾಣಗಳು ಮತ್ತು ಧಾರ್ಮಿಕ ಸ್ಥಳಗಳು ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ನಾಗರಿಕರನ್ನು ಉತ್ತೇಜಿಸಿದೆ.
Led the #SwacchtaHiSeva ‘Shramdaan’ for a garbage-free India at Patel Chest. My dear students and teachers of @UnivofDelhi as well as citizens joined the cleanliness drive to pay #Swacchanjali to Pujya Bapu.
PM @narendramodi ji’s resolve for a #SwachhBharat has transformed… pic.twitter.com/g41A0lceTx
— Dharmendra Pradhan (@dpradhanbjp) October 1, 2023
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ‘ಸ್ವಚ್ಛತಾ ಅಭಿಯಾನ’ದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಾಲ್ಗೊಂಡರು. ಸ್ವಚ್ಛತಾ ಅಭಿಯಾನದ ಅಡಿಯಲ್ಲಿ ಅನುರಾಗ್ ಠಾಕೂರ್ ಅವರು ಹಿಮಾಚಲ ಪ್ರದೇಶದ ತಮ್ಮ ಸಂಸದೀಯ ಕ್ಷೇತ್ರವಾದ ಹಮೀರ್‌ಪುರವನ್ನು ಸ್ವಚ್ಛಗೊಳಿಸಿದರು. ಸಾರ್ವಜನಿಕರು ಅದರಲ್ಲೂ ಯುವಕರು ಸ್ವಚ್ಛತಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಪ್ರಧಾನಿ ಮೋದಿಯವರ ಕರೆಯ ಮೇರೆಗೆ ಇಂದು ಸ್ವಚ್ಛತಾ ಅಭಿಯಾನವು ಸಾಮೂಹಿಕ ಆಂದೋಲನವಾಗಿದೆ ಎಂದು ಅನುರಾಗ್ ಠಾಕೂರ್ ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ