ನವದೆಹಲಿ: ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Delhi International Airport) ಟರ್ಮಿನಲ್ 3ರಲ್ಲಿ ಸಾಕಷ್ಟು ನೂಕುನುಗ್ಗಲು ಉಂಟಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದು (ಸೋಮವಾರ) ಬೆಳಗ್ಗೆ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆಯ ಬಗ್ಗೆ ದೂರುಗಳು ಬಂದಿದ್ದರಿಂದ ಹಾಗೂ ದೆಹಲಿ ಇಂಟರ್‌ನ್ಯಾಷನಲ್ ಏರ್‌ಪೋರ್ಟ್‌ನಲ್ಲಿ ತಮ್ಮ ಕೆಟ್ಟ ಅನುಭವದ ಬಗ್ಗೆ ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ದೂರುಗಳನ್ನು ನೀಡಿದ್ದರಿಂದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಏರ್ಪೋರ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದಕ್ಕೂ ಮುನ್ನ ಜ್ಯೋತಿರಾದಿತ್ಯ ಸಿಂಧಿಯಾ ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಅಧಿಕಾರಿಗಳು ಮತ್ತು ಆಡಳಿತ ಮಂಡಳಿಗಳೊಂದಿಗೆ ಸಭೆ ನಡೆಸಿದರು. ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ದೆಹಲಿ ಇಂಟರ್‌ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (DIAL) 4 ಅಂಶಗಳ ಕ್ರಿಯಾ ಯೋಜನೆಯನ್ನು ತಕ್ಷಣದ ಪರಿಹಾರ ಕ್ರಮಗಳಾಗಿ ಜಾರಿಗೆ ತರಲು ಮುಂದಾಗಿದೆ.
ಇದನ್ನೂ ಓದಿ: ವಿಶೇಷ ಚೇತನ ಮಗುವಿಗೆ ವಿಮಾನ ಹತ್ತಲು ಬಿಡದ ಇಂಡಿಗೋ ಸಿಬ್ಬಂದಿ: ತನಿಖೆಗೆ ಆದೇಶಿಸಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
ವಿಮಾನ ನಿಲ್ದಾಣದಲ್ಲಿ ಎಕ್ಸ್-ರೇ ಸ್ಕ್ರೀನಿಂಗ್ ಸಿಸ್ಟಮ್‌ಗಳ ಸಂಖ್ಯೆಯನ್ನು 14ರಿಂದ 16ಕ್ಕೆ ಹೆಚ್ಚಿಸುವುದು. ಒಂದು ಆಟೋಮ್ಯಾಟಿಕ್ ಟ್ರೇ ರಿಟ್ರೀವಲ್ ಸಿಸ್ಟಮ್ (ATRS) ಯಂತ್ರ ಮತ್ತು ಎರಡು ಗುಣಮಟ್ಟದ X-ರೇ ಯಂತ್ರಗಳ ಸೇರ್ಪಡೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಪ್ರಸ್ತುತ 19 ರಿಂದ 14 ವಿಮಾನಗಳ ಪೀಕ್-ಅವರ್ ನಿರ್ಗಮನಗಳ ಸಂಖ್ಯೆಯನ್ನು ಹಂತಹಂತವಾಗಿ ಕಡಿಮೆ ಮಾಡಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.
#WATCH | Union Civil Aviation Minister Jyotiraditya M. Scindia makes a surprise visit to Terminal 3 of Delhi International Airport amid complaints of congestion by passengers pic.twitter.com/5XBrNNDhDD
— ANI (@ANI) December 12, 2022
ದೆಹಲಿ ವಿಮಾನ ನಿಲ್ದಾಣದಲ್ಲಿ ತಮ್ಮ ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ಪ್ರತಿ ಹಂತದಲ್ಲೂ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ದೇಶೀಯ ವಿಮಾನ ದಟ್ಟಣೆಯ ಹೆಚ್ಚಳವು ಪ್ರಯಾಣಿಕರ ದೂರುಗಳ ಹೆಚ್ಚಳಕ್ಕೆ ಕಾರಣವಾಗಿದೆ. ದೆಹಲಿ ವಿಮಾನ ನಿಲ್ದಾಣವು ನಮ್ಮ ದೇಶದ ಅತ್ಯುತ್ತಮ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ ಎಂಬುದು ಇಲ್ಲಿ ಗಮನಾರ್ಹವಾಗಿದೆ.
ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹುಬ್ಬಳ್ಳಿ ಮಹಿಳೆ, ಇದು ನಮ್ಮ ಕಿರಿಯ ಪ್ರಯಾಣಿಕ!
Union Civil Aviation Minister Jyotiraditya M. Scindia makes a surprise visit to Terminal 3 of Delhi International Airport amid complaints of congestion by passengers at the airport pic.twitter.com/KSygAVwcB3
— ANI (@ANI) December 12, 2022
ದೆಹಲಿ ವಿಮಾನ ನಿಲ್ದಾಣದಲ್ಲಿ ಈ ಜನದಟ್ಟಣೆಗೆ ಮುಖ್ಯ ಕಾರಣವೆಂದರೆ DIAL ನ ವಿಸ್ತರಣೆಯಾಗಿದ್ದು, ಹೆಚ್ಚುವರಿ ಪ್ರಯಾಣಿಕರನ್ನು T3 ಮೂಲಕ ಸಾಗಿಸಲು ಕಾರಣವಾಗಿದೆ. ಟರ್ಮಿನಲ್ 2 ಮತ್ತು ಟರ್ಮಿನಲ್ 1 ಇನ್ನೂ ಸಂಪೂರ್ಣವಾಗಿ ಕಾರ್ಯನಿರ್ವಹಿಸದ ಕಾರಣ ವಿಮಾನ ನಿಲ್ದಾಣವು ವಿಸ್ತರಣೆ ಪ್ರಕ್ರಿಯೆಯ ಮೂಲಕ ಸಾಗುತ್ತಿದೆ. ಇತ್ತೀಚೆಗೆ, ವಿಮಾನ ನಿಲ್ದಾಣವು ಟರ್ಮಿನಲ್ 1ರಲ್ಲಿ ಆಗಮನದ ಸೌಲಭ್ಯವನ್ನು ತೆರೆಯಲಾಯಿತು. ಆದರೂ ಸಮಸ್ಯೆ ಬಗೆಹರಿದಿಲ್ಲ.