ಆಯುಷ್ಮಾನ್ ಭಾರತ್: 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆಗಳ ನಿರ್ಮಾಣ ಗುರಿ

ದೆಹಲಿ: ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೀನು ಉತ್ಪಾದಕರಿಗೆ ಮತ್ತು ರೋಗಿಗಳಿಗೆ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 500 ಮೀನು ಉತ್ಪಾದಕರ ಸಂಘ ಸ್ಥಾಪನೆ ಮಾಡುವುದಾಗಿ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಅಲ್ಲದೆ 2023ರವರೆಗೆ 2 ಲಕ್ಷ ಟನ್ ಮೀನು ಉತ್ಪಾದನೆ ಗುರಿ ಹೊಂದಿದ್ದಾರೆ. ಕೃಷಿ, ಗ್ರಾಮೀಣಾಭಿವೃದ್ಧಿಗೆ 2.83 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಹೇಳಿದರು. ಆರೋಗ್ಯ, ನೀರು, ಶೌಚಾಲಯ, ಮಿಷನ್ ಇಂದ್ರಧನುಷ್, ಜಲಜೀವನ್ ಮಿಷನ್ ಯೋಜನೆಗಳನ್ನು ವಿಸ್ತರಣೆ ಮಾಡಲಾಗುವುದು. […]

ಆಯುಷ್ಮಾನ್ ಭಾರತ್: 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆಗಳ ನಿರ್ಮಾಣ ಗುರಿ
Follow us
ಸಾಧು ಶ್ರೀನಾಥ್​
|

Updated on: Feb 01, 2020 | 12:24 PM

ದೆಹಲಿ: ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೀನು ಉತ್ಪಾದಕರಿಗೆ ಮತ್ತು ರೋಗಿಗಳಿಗೆ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 500 ಮೀನು ಉತ್ಪಾದಕರ ಸಂಘ ಸ್ಥಾಪನೆ ಮಾಡುವುದಾಗಿ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಅಲ್ಲದೆ 2023ರವರೆಗೆ 2 ಲಕ್ಷ ಟನ್ ಮೀನು ಉತ್ಪಾದನೆ ಗುರಿ ಹೊಂದಿದ್ದಾರೆ. ಕೃಷಿ, ಗ್ರಾಮೀಣಾಭಿವೃದ್ಧಿಗೆ 2.83 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಹೇಳಿದರು.

ಆರೋಗ್ಯ, ನೀರು, ಶೌಚಾಲಯ, ಮಿಷನ್ ಇಂದ್ರಧನುಷ್, ಜಲಜೀವನ್ ಮಿಷನ್ ಯೋಜನೆಗಳನ್ನು ವಿಸ್ತರಣೆ ಮಾಡಲಾಗುವುದು. 12 ರೋಗಗಳಿಗಾಗಿ ಮಿಷನ್ ಇಂದ್ರಧನುಷ್ ಯೋಜನೆ ಕೈಗೊಂಡಿದ್ದು ಆಯುಷ್ಮಾನ್ ಭಾರತ್ ಯೋಜನೆಯಡಿ 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆ ನಿರ್ಮಾಣದ ಗುರಿ ಹೊಂದಿದೆ. 2025ರೊಳಗೆ ಭಾರತದಲ್ಲಿ ಕ್ಷಯ ರೋಗ ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು. ಆರೋಗ್ಯ ಕ್ಷೇತ್ರಕ್ಕೆ 69 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ. ಸ್ವಚ್ಛ ಭಾರತ ಯೋಜನೆಗೆ 12,300 ಕೋಟಿ ರೂಪಾಯಿ ಅನುದಾನ ಹಾಗೂ ಜಲಜೀವನ ಯೋಜನೆಗೆ 3.6 ಲಕ್ಷ ಕೋಟಿ ರೂಪಾಯಿ ಅನುದಾನ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಮಂಡಿಸಿದ್ದಾರೆ.