ಸೈಬರ್ ವಿವಿಗೆ ಅಂಕಿತ, ಫೋರೆನ್ಸಿಕ್ ಸ್ಟಡೀಸ್​ಗೆ ಮತ್ತಷ್ಟು ಉತ್ತೇಜನ

ದೆಹಲಿ: ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಕ್ಕೆ ಕೇಂದ್ರ ಬಜೆಟ್​ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ. ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಕ್ರಮ. ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಇಂಜಿನಿಯರಿಂಗ್ ಮುಗಿಸಿದ ವಿದ್ಯಾರ್ಥಿಗಳಿಗೆ 1 ವರ್ಷ ತರಬೇತಿ ನೀಡಲಾಗುವುದು. ಸೌಲಭ್ಯ ವಂಚಿತ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಎಜ್ಯುಕೇಷನ್ ಕೋರ್ಸ್ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಸೈಬರ್ ಪೊಲೀಸ್ ಯೂನಿವರ್ಸಿಟಿಗೆ ಆದ್ಯತೆ: ನ್ಯಾಷನಲ್ ಸೈಬರ್ […]

ಸೈಬರ್ ವಿವಿಗೆ ಅಂಕಿತ, ಫೋರೆನ್ಸಿಕ್ ಸ್ಟಡೀಸ್​ಗೆ ಮತ್ತಷ್ಟು ಉತ್ತೇಜನ
ಸಾಧು ಶ್ರೀನಾಥ್​

Updated on: Feb 01, 2020 | 12:15 PM

ದೆಹಲಿ: ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಕ್ಕೆ ಕೇಂದ್ರ ಬಜೆಟ್​ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ. ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಕ್ರಮ. ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಇಂಜಿನಿಯರಿಂಗ್ ಮುಗಿಸಿದ ವಿದ್ಯಾರ್ಥಿಗಳಿಗೆ 1 ವರ್ಷ ತರಬೇತಿ ನೀಡಲಾಗುವುದು. ಸೌಲಭ್ಯ ವಂಚಿತ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಎಜ್ಯುಕೇಷನ್ ಕೋರ್ಸ್ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ.

ಸೈಬರ್ ಪೊಲೀಸ್ ಯೂನಿವರ್ಸಿಟಿಗೆ ಆದ್ಯತೆ:
ನ್ಯಾಷನಲ್ ಸೈಬರ್ ಪೊಲೀಸ್ ಯೂನಿವರ್ಸಿಟಿಗೆ ಮುಖ್ಯವಾಗಿ ಆದ್ಯತೆ ನೀಡಲಾಗುವುದು. ಉದ್ಯೋಗಾಧಾರಿತ ಕೋರ್ಸ್‌ಗಳು ಹಾಗೂ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಪ್ರಮುಖ ಉದ್ದೇಶವಾಗಿದೆ. ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಗುರಿ ಹೊಂದಿದ್ದೇವೆ. ಸ್ಟಡಿ ಇನ್ ಇಂಡಿಯಾ ಕಾರ್ಯಕ್ರಮ ಜಾರಿಗೊಳಿಸುತ್ತೇವೆ. ಒಟ್ಟು ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಸ್ಕಿಲ್ ಇಂಡಿಯಾಗೆ 3 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Published On - 12:07 pm, Sat, 1 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us