Union Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್​ಟಿ ಕೌನ್ಸಿಲ್ ಸಭೆ

|

Updated on: Jun 22, 2024 | 5:23 PM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಇಂದು (ಜೂನ್ 22) ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಕೌನ್ಸಿಲ್ ಸಭೆ ನಡೆಸಲಾಗಿದೆ. ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಕೌನ್ಸಿಲ್ ಸಭೆಯು ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸಿಂಗ್‌ಗಳ ಮೇಲೆ 28% ಜಿಎಸ್‌ಟಿಯನ್ನು ವಿಧಿಸುವುದು ಸೇರಿದಂತೆ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿತು.

Union Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್​ಟಿ ಕೌನ್ಸಿಲ್ ಸಭೆ
ನಿರ್ಮಲಾ ಸೀತಾರಾಮನ್
Follow us on

ನವದೆಹಲಿ: ಕೇಂದ್ರ ಬಜೆಟ್ (Union Budget) ಪೂರ್ವ ಸಮಾಲೋಚನೆಯ ಭಾಗವಾಗಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಮಂತ್ರಿಗಳೊಂದಿಗೆ ಮತ್ತೊಂದು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ನಿರ್ಣಾಯಕ ಸಭೆಯು ಮುಂಬರುವ ಪೂರ್ಣ ಬಜೆಟ್ ರಚನೆಗೆ ವೇದಿಕೆಯನ್ನು ಸಿದ್ಧಪಡಿಸಿತು. ಈ ಸಭೆಯಲ್ಲಿ ಸಚಿವಾಲಯದ ಹಿರಿಯ ಅಧಿಕಾರಿಗಳು ಕೂಡ ಭಾಗವಹಿಸಿದ್ದರು.

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ನವದೆಹಲಿಯಲ್ಲಿ ಮುಂಬರುವ ಕೇಂದ್ರ ಬಜೆಟ್ 2024-25ರ ಸಿದ್ಧತೆಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಮಂತ್ರಿಗಳೊಂದಿಗೆ ಪೂರ್ವ ಬಜೆಟ್ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿದ್ದರು ಎಂದು ಹಣಕಾಸು ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

ಈ ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವರು ಮತ್ತು ಗೋವಾ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದಾರೆ. ಬಿಹಾರ, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ಉಪ ಮುಖ್ಯಮಂತ್ರಿಗಳೂ ಈ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ರಾಜ್ಯಗಳ ಹಣಕಾಸು ಮಂತ್ರಿಗಳು ಮತ್ತು ಇತರ ಸಚಿವರು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಕೂಡ ಪಾಲ್ಗೊಂಡಿದ್ದರು.

ಇದನ್ನೂ ಓದಿ: PM Modi: ಜಮ್ಮು ಕಾಶ್ಮೀರದ ಶತ್ರುಗಳಿಗೆ ಪಾಠ ಕಲಿಸಲು ಸರ್ಕಾರ ಹಿಂಜರಿಯುವುದಿಲ್ಲ; ಪ್ರಧಾನಿ ಮೋದಿ ಭರವಸೆ

ತಮ್ಮ ಟೀಕೆಗಳಲ್ಲಿ, ಹಣಕಾಸು ಸಚಿವೆ ಸೀತಾರಾಮನ್ ಅವರು ಸಕಾಲಿಕ ತೆರಿಗೆ ಹಂಚಿಕೆ, ಹಣಕಾಸು ಆಯೋಗದ ಅನುದಾನಗಳು ಮತ್ತು ಬೆಳವಣಿಗೆಗೆ ಉತ್ತೇಜನ ನೀಡಲು ಒದಗಿಸುವ GST ಪರಿಹಾರದ ಬಾಕಿಗಳ ಮೂಲಕ ರಾಜ್ಯಗಳಿಗೆ ಸರ್ಕಾರದ ಬೆಂಬಲವನ್ನು ಒತ್ತಿ ಹೇಳಿದ್ದಾರೆ.

ಸತತ 6 ಬಜೆಟ್ ಮಂಡಿಸಿದ್ದ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಹಿಂದಿಕ್ಕುವ ಮೂಲಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿ ಕೇಂದ್ರ ಬಜೆಟ್ ಮಂಡಿಸುವ ಮೊದಲ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

18ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ 24ರಂದು ಪ್ರಾರಂಭವಾಗಲಿದ್ದು, ಈ ಸಮಯದಲ್ಲಿ ಕೆಳಮನೆಯ ಹೊಸ ಸದಸ್ಯರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸ್ಪೀಕರ್ ಆಯ್ಕೆಯಾಗುತ್ತಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಮುಂದಿನ 5 ವರ್ಷಗಳ ಹೊಸ ಸರ್ಕಾರದ ಮಾರ್ಗಸೂಚಿಯನ್ನು ರೂಪಿಸುವ ಸಾಧ್ಯತೆಯಿದೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ.

ಇದನ್ನೂ ಓದಿ: Lok Sabha Session 2024: ಜೂನ್​ 24ರಿಂದ ಜುಲೈ 3ರವರೆಗೆ 18ನೇ ಲೋಕಸಭೆಯ ಮೊದಲ ಅಧಿವೇಶನ

ಮೊದಲ ಅಧಿವೇಶನದ ಮೊದಲ 3 ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ನಾಯಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸದನದ ಸ್ಪೀಕರ್ ಅವರನ್ನು ಆಯ್ಕೆ ಮಾಡುತ್ತಾರೆ. 2024-25ರ ಪೂರ್ಣ ಪ್ರಮಾಣದ ಬಜೆಟ್ ಅನ್ನು ಜುಲೈ ತಿಂಗಳ ದ್ವಿತೀಯಾರ್ಧದಲ್ಲಿ ಸಂಸತ್ತಿನಲ್ಲಿ ಮಂಡಿಸುವ ನಿರೀಕ್ಷೆಯಿದೆ. ಕೇಂದ್ರ ಬಜೆಟ್ ಮಂಡನೆಗಾಗಿ ಸಂಸತ್ತಿನ ಎರಡೂ ಸದನಗಳು ಜುಲೈ ಮೂರನೇ ವಾರದಲ್ಲಿ ಮತ್ತೆ ಸಭೆ ನಡೆಸುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ