ಆತ್ಮನಿರ್ಭರ ಭಾರತ್: ಉದ್ಯೋಗ ಅವಕಾಶ ಹೆಚ್ಚಳಕ್ಕೆ ಕೇಂದ್ರದ ಯೋಜನೆ

| Updated By: ganapathi bhat

Updated on: Apr 07, 2022 | 5:45 PM

ಈ ಯೋಜನೆಯ ಮೂಲಕ ಹೊಸ ಉದ್ಯೋಗ ಸೃಷ್ಟಿ ಮತ್ತು ಮತ್ತು ಉದ್ಯೋಗ ಅವಕಾಶ ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯಿಂದ 58.5 ಲಕ್ಷ ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ.

ಆತ್ಮನಿರ್ಭರ ಭಾರತ್: ಉದ್ಯೋಗ ಅವಕಾಶ ಹೆಚ್ಚಳಕ್ಕೆ ಕೇಂದ್ರದ ಯೋಜನೆ
ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್
Follow us on

ದೆಹಲಿ: ಆತ್ಮನಿರ್ಭರ ಭಾರತ್ ರೋಜಗಾರ್ ಯೋಜನೆಯ(ABRY) ಮೂಲಕ ಪ್ರಸಕ್ತ ಹಣಕಾಸು ವರ್ಷದಲ್ಲಿ  ₹1,584 ಕೋಟಿ ವೆಚ್ಚ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ಮೂಲಕ, ಕೊವಿಡ್ ಕಡಿಮೆಯಾಗುತ್ತಿರುವ ಹಂತದಲ್ಲಿ ಹೊಸ ಉದ್ಯೋಗ ಸೃಷ್ಟಿ ಮತ್ತು ಮತ್ತು ಉದ್ಯೋಗ ಅವಕಾಶ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ. ಈ ಯೋಜನೆಯಿಂದ 58.5 ಲಕ್ಷ ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು, 2020-23ನೇ ವರ್ಷದವರೆಗೆ 22,810 ಕೋಟಿ ರೂಪಾಯಿ ವೆಚ್ಚ ಮಾಡಲು ಒಪ್ಪಿಗೆ ಸೂಚಿಸಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ 1,584 ಕೋಟಿ ರೂಪಾಯಿ ವೆಚ್ಚಕ್ಕೆ ಅನುಮತಿ ನೀಡಿದೆ.

ಲಕ್ಷದ್ವೀಪದಲ್ಲಿ ನೆಲದಡಿ ಕೇಬಲ್ ಸಂಪರ್ಕ ನೀಡಲು ₹ 1,072 ಕೋಟಿ ರೂಪಾಯಿ ವೆಚ್ಚಕ್ಕೆ ಅನುಮತಿ ನೀಡಿರುವ ಸರ್ಕಾರ, ಕೊಚ್ಚಿ- ಲಕ್ಷದ್ವೀಪದ ನಡುವೆ ಸಮುದ್ರದಡಿ ಫೈಬರ್ ಕೇಬಲ್ ಸಂಪರ್ಕ ನೀಡಲು ಒಪ್ಪಿಗೆ ಸೂಚಿಸಿದೆ. ಅಸ್ಸಾಂ- ಅರುಣಾಚಲ ಪ್ರದೇಶದಲ್ಲಿ 1,533 ಮೊಬೈಲ್ ಟವರ್ ಹಾಕಲು ಯೋಜನೆ ಹಾಕಿಕೊಂಡಿದೆ. ಈ ಮೂಲಕ ಡಿಜಿಟಲ್ ಇಂಡಿಯಾಕ್ಕೆ ಒತ್ತು ನೀಡಲು ತೀರ್ಮಾನಿಸಲಾಗಿದೆ.

ಹೊಸ ಸಂಸತ್ ಭವನವು ಆತ್ಮನಿರ್ಭರ ಭಾರತದ ಗುಡಿಯಾಗಲಿದೆ: ಓಮ್ ಬಿರ್ಲಾ

 

Published On - 7:43 pm, Wed, 9 December 20