ವೈಬ್ರೆಂಟ್ ವಿಲೇಜ್ ಕಾರ್ಯಕ್ರಮಕ್ಕೆ ಕೇಂದ್ರ ಸಂಪುಟ ಅನುಮೋದನೆ: ಅನುರಾಗ್ ಠಾಕೂರ್

|

Updated on: Feb 15, 2023 | 4:43 PM

2022-23 ರಿಂದ 2025-26 ರ ಆರ್ಥಿಕ ವರ್ಷಗಳಿಗೆ 4800 ಕೋಟಿ ರೂ.ಗಳ ಹಣಕಾಸು ಹಂಚಿಕೆಯೊಂದಿಗೆ ಕೇಂದ್ರ ಪ್ರಾಯೋಜಿತ ಯೋಜನೆ- ವೈಬ್ರೆಂಟ್ ವಿಲೇಜ್ ಕಾರ್ಯಕ್ರಮಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಲಾಗಿದೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ವೈಬ್ರೆಂಟ್ ವಿಲೇಜ್ ಕಾರ್ಯಕ್ರಮಕ್ಕೆ ಕೇಂದ್ರ ಸಂಪುಟ ಅನುಮೋದನೆ: ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
Follow us on

ಸಹಕಾರಿ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ಮುಂದಿನ ಐದು ವರ್ಷಗಳಲ್ಲಿ ಎರಡು ಲಕ್ಷ ಪಂಚಾಯತ್‌ಗಳಲ್ಲಿ ಹೊಸ ಪ್ರಾಥಮಿಕ ಕೃಷಿ ಸಾಲ ಸೊಸೈಟಿ (PACS) ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ(Cabinet) ಬುಧವಾರ ಅನುಮೋದನೆ ನೀಡಿದೆ. ಪ್ರಾಥಮಿಕ ಕೃಷಿ ಸಾಲ ಸೊಸೈಟಿ ಮೂಲಕ 25 ವಿವಿಧ ಸೌಲಭ್ಯಗಳನ್ನು ಒದಗಿಸಲಾಗುವುದು. ಡೈರಿ ಮತ್ತು ಮೀನುಗಾರಿಕೆಯನ್ನು ಸಹ ಕೃಷಿ ಸಹಕಾರಿ ಸಂಘಗಳಿಗೆ ಲಿಂಕ್ ಮಾಡಲಾಗುವುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.  ದೇಶದಲ್ಲಿ ಸಹಕಾರ ಆಂದೋಲನವನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ಆಳಗೊಳಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಮುಂದಿನ 5 ವರ್ಷಗಳಲ್ಲಿ 2 ಲಕ್ಷ ವಿವಿಧೋದ್ದೇಶ ಪಿಎಸಿಎಸ್/ ಡೈರಿ/ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಅವರು ಹೇಳಿದ್ದಾರೆ.

2022-23 ರಿಂದ 2025-26 ರ ಆರ್ಥಿಕ ವರ್ಷಗಳಿಗೆ 4800 ಕೋಟಿ ರೂ.ಗಳ ಹಣಕಾಸು ಹಂಚಿಕೆಯೊಂದಿಗೆ ಕೇಂದ್ರ ಪ್ರಾಯೋಜಿತ ಯೋಜನೆ- ವೈಬ್ರೆಂಟ್ ವಿಲೇಜ್ ಕಾರ್ಯಕ್ರಮಕ್ಕೆ(Vibrant Villages Programme) ಕೇಂದ್ರ ಸಂಪುಟ ಅನುಮೋದನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇದು ಉತ್ತರದ ಗಡಿಯಲ್ಲಿನ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಜೀವನೋಪಾಯದ ಅವಕಾಶಕ್ಕೆ ಕಾರಣವಾಗುತ್ತದೆ ಎಂದು ಅವರು ಹೇಳಿದ್ದಾರೆ.

‘ಇಡೀ ಸರ್ಕಾರದ’ ವಿಧಾನವನ್ನು ಸದುಪಯೋಗಪಡಿಸಿಕೊಂಡು ವಿವಿಧ ಯೋಜನೆಗಳ ಜತೆಯಾಗಿಯೇ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: LIFE Mission Case: ಕೇರಳ ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರ್ ಬಂಧನ

“ಪ್ರತಿ ವ್ಯಾಪ್ತಿಗೆ ಒಳಪಡದ ಪಂಚಾಯತ್‌ಗಳಲ್ಲಿ ಪ್ರಾಥಮಿಕ ಕೃಷಿ ಸಾಲ ಸಂಘಗಳ ಸ್ಥಾಪನೆ, ಪ್ರತಿ ವ್ಯಾಪ್ತಿಗೆ ಒಳಪಡದ ಪಂಚಾಯತ್‌ಗಳಲ್ಲಿ ಕಾರ್ಯಸಾಧ್ಯವಾದ ಡೈರಿ ಸಹಕಾರ ಸಂಘಗಳು, ಗ್ರಾಮಗಳು ಮತ್ತು ಪ್ರತಿ ಕರಾವಳಿ ಪಂಚಾಯತ್‌ನಲ್ಲಿ ಮತ್ತು ದೊಡ್ಡ ಜಲಮೂಲಗಳನ್ನು ಹೊಂದಿರುವ  ಗ್ರಾಮ ಮತ್ತು ಪಂಚಾಯತ್ ಗಳಲ್ಲಿ ಮೀನುಗಾರಿಕೆ ಸಹಕಾರ ಸಂಘಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.

ವೈಬ್ರೆಂಟ್ ವಿಲೇಜ್ ಪ್ರೋಗ್ರಾಂ ಬಗ್ಗೆ ಮಾತನಾಡಿದ ಠಾಕೂರ್, ಇದು ಹಿಮಾಚಲ ಪ್ರದೇಶ, ಉತ್ತರಾಖಂಡ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ಈ ನಾಲ್ಕು ರಾಜ್ಯಗಳಲ್ಲಿ ಮತ್ತು  ಉತ್ತರ ಭೂ ಗಡಿಯುದ್ದಕ್ಕೂ ಇರುವ ಜಮ್ಮು ಮತ್ತು ಕಾಶ್ಮೀರದ ಮತ್ತು ಲಡಾಖ್ ನ  ಮೂಲಸೌಕರ್ಯ ಅಭಿವೃದ್ಧಿ ಮತ್ತು ಜೀವನೋಪಾಯದ ಅವಕಾಶಗಳಿಗೆ ಕಾರಣವಾಗುತ್ತದೆ.ಈ ಯೋಜನೆಯು ಒಳಗೊಳ್ಳುವಿಕೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ. ಉತ್ತರದ ಗಡಿಯಲ್ಲಿನ ಹಳ್ಳಿಗಳ ಬೆಳವಣಿಗೆ ಜನರ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ವಲಸೆಯನ್ನು ಹಿಮ್ಮೆಟ್ಟಿಸಲು ಸಹಾಯ ಮಾಡುತ್ತದೆ ಎಂದು  ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 4:22 pm, Wed, 15 February 23