ಉಜ್ವಲ ಯೋಜನೆಯಡಿಯಲ್ಲಿ 75 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕ, ಇ-ಕೋರ್ಟ್ ಹಂತ 3 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಯೋಜನೆಯಡಿ ಇಂದಿನವರೆಗೆ 9.60 ಕೋಟಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸಲಾಗಿದೆ. ಇನ್ನೂ 75 ಲಕ್ಷ ಉಚಿತ ಎಲ್‌ಪಿಜಿ ಸಂಪರ್ಕಗಳನ್ನು ನೀಡಲಾಗುವುದು ಎಂದು ಘೋಷಿಸಲು ನಾನು ಸಂತೋಷಪಡುತ್ತೇನೆ, ಇದರಿಂದಾಗಿ ಹೆಚ್ಚಿನ ಬಡ ಮತ್ತು ಅಗತ್ಯವಿರುವ ಮಹಿಳೆಯರು ಯೋಜನೆಯ ಪ್ರಯೋಜನ ಪಡೆಯುತ್ತಾರೆ ಎಂದ ಸಂಪುಟ ಸಭೆಯ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಉಜ್ವಲ ಯೋಜನೆಯಡಿಯಲ್ಲಿ 75 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕ, ಇ-ಕೋರ್ಟ್ ಹಂತ 3 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಅನುರಾಗ್ ಠಾಕೂರ್
Follow us
ರಶ್ಮಿ ಕಲ್ಲಕಟ್ಟ
|

Updated on: Sep 13, 2023 | 4:36 PM

ದೆಹಲಿ ಸೆಪ್ಟೆಂಬರ್ 13 : ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (Pradhan Mantri Ujjwala Yojana) ಮಹಿಳೆಯರಿಗೆ ಎಲ್‌ಪಿಜಿ (LPG) ಸಂಪರ್ಕಗಳನ್ನು ಬೆಂಬಲಿಸಲು ಅನುದಾನ ಬಿಡುಗಡೆ ಮಾಡುವ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಈ ಯೋಜನೆಯಡಿಯಲ್ಲಿ, ಮೂರು ವರ್ಷಗಳಲ್ಲಿ, ಒಟ್ಟು 1,650 ಕೋಟಿ ವೆಚ್ಚದಲ್ಲಿ 75 ಲಕ್ಷ ಸಂಪರ್ಕಗಳನ್ನು ನೀಡಲಾಗುವುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಉಜ್ವಲ ಯೋಜನೆಯಡಿ ಇಂದಿನವರೆಗೆ 9.60 ಕೋಟಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸಲಾಗಿದೆ. ಇನ್ನೂ 75 ಲಕ್ಷ ಉಚಿತ ಎಲ್‌ಪಿಜಿ ಸಂಪರ್ಕಗಳನ್ನು ನೀಡಲಾಗುವುದು ಎಂದು ಘೋಷಿಸಲು ನಾನು ಸಂತೋಷಪಡುತ್ತೇನೆ, ಇದರಿಂದಾಗಿ ಹೆಚ್ಚಿನ ಬಡ ಮತ್ತು ಅಗತ್ಯವಿರುವ ಮಹಿಳೆಯರು ಯೋಜನೆಯ ಪ್ರಯೋಜನ ಪಡೆಯುತ್ತಾರೆ ಎಂದ ಸಂಪುಟ ಸಭೆಯ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಉಜ್ವಲ ಯೋಜನೆಯಡಿ ಹೆಚ್ಚುವರಿ 75 ಲಕ್ಷ ಎಲ್‌ಪಿಜಿ ಸಂಪರ್ಕಗಳನ್ನು ನೀಡುವುದರೊಂದಿಗೆ ಕೇಂದ್ರ ಯೋಜನೆಯಡಿಯಲ್ಲಿ ಒಟ್ಟು ಫಲಾನುಭವಿಗಳ ಸಂಖ್ಯೆ 10.35 ಕೋಟಿಗೆ ಏರಲಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರಿಗೆ ಎಲ್‌ಪಿಜಿ ಸಂಪರ್ಕಗಳನ್ನು ಒದಗಿಸಲು ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯನ್ನು ಮೇ 2016 ರಲ್ಲಿ ಪ್ರಧಾನಿ ಮೋದಿ ಅವರು ಪ್ರಾರಂಭಿಸಿದರು.

7,210 ಕೋಟಿ ರೂಪಾಯಿಗಳ ಹಣಕಾಸು ವೆಚ್ಚದೊಂದಿಗೆ ನಾಲ್ಕು ವರ್ಷಗಳಲ್ಲಿ ಜಾರಿಗೆ ತರಲು ಕೇಂದ್ರ ಯೋಜನೆಯಾಗಿ ಇ-ಕೋರ್ಟ್‌ಗಳ ಯೋಜನೆ ಹಂತ-III ಅನ್ನು ಸರ್ಕಾರ ಅನುಮೋದಿಸಿದೆ.

ರಾಷ್ಟ್ರೀಯ ಇ-ಆಡಳಿತ ಯೋಜನೆಯ ಭಾಗವಾಗಿ, ಇ-ನ್ಯಾಯಾಲಯಗಳ ಯೋಜನೆಯು 2007 ರಿಂದ ಜಾರಿಯಲ್ಲಿದೆ. ಯೋಜನೆಯ II ಹಂತವು 2023 ರಲ್ಲಿ ಮುಕ್ತಾಯವಾಯಿತು. ಭಾರತದಲ್ಲಿ 2023 ರಿಂದ ಪ್ರಾರಂಭವಾಗುವ ಇ-ಕೋರ್ಟ್ಸ್ ಪ್ರಾಜೆಕ್ಟ್‌ನ ಹಂತ III ಪ್ರವೇಶ ಸೇರ್ಪಡೆ ಮತ್ತು ಒಳಗೊಳ್ಳುವಿಕೆಯ ಉದ್ದೇಶ ಹೊಂದಿದೆ ಎಂದು ಸಚಿವರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿG20 Summit: G20 ಶೃಂಗಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಔತಣಕೂಟ

ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಅನುರಾಗ್ ಠಾಕೂರ್ ಹೇಳಿದರು. ಸೈಪ್ರಸ್ ಮೂಲದ ಬೆರ್ಹ್ಯಾಂಡಾ ಲಿಮಿಟೆಡ್‌ನಿಂದ ಸುವೆನ್ ಫಾರ್ಮಾಸ್ಯುಟಿಕಲ್ಸ್‌ನಲ್ಲಿ 9,589 ಕೋಟಿ ರೂ.ವರೆಗಿನ ವಿದೇಶಿ ಹೂಡಿಕೆಗಗೂ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ