Data Protection Bill: ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿದೆ ಡಾಟಾ ಪ್ರೊಟೆಕ್ಷನ್​ ಬಿಲ್​; ಕೇಂದ್ರ ಸಂಪುಟ ಅನುಮೋದನೆ

ಮಸೂದೆಯ ಕರಡನ್ನು ಸಂಪುಟವು ಅನುಮೋದಿಸಿದೆ. ಮುಂಬರುವ ಅಧಿವೇಶನದಲ್ಲಿ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Data Protection Bill: ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿದೆ ಡಾಟಾ ಪ್ರೊಟೆಕ್ಷನ್​ ಬಿಲ್​; ಕೇಂದ್ರ ಸಂಪುಟ ಅನುಮೋದನೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Jul 05, 2023 | 9:27 PM

ನವದೆಹಲಿ: ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್ ಅಥವಾ ಡಿಜಿಟಲ್ ವೈಯಕ್ತಿಕ ದಾಖಲೆಗಳ ಸಂರಕ್ಷಣಾ ಮಸೂದೆ 2023 ರ (DPDP Bill 2023) ಕರಡು ಪ್ರತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ ಇದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಮಸೂದೆಯಲ್ಲಿನ ನಿಯಮಗಳ ಉಲ್ಲಂಘನೆಯ ಪ್ರತಿ ನಿದರ್ಶನಕ್ಕೂ 250 ಕೋಟಿ ರೂಪಾಯಿಗಳವರೆಗೆ ದಂಡ ವಿಧಿಸುವ ಬಗ್ಗೆ ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಮಸೂದೆಯ ಕರಡನ್ನು ಸಂಪುಟವು ಅನುಮೋದಿಸಿದೆ. ಮುಂಬರುವ ಅಧಿವೇಶನದಲ್ಲಿ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11 ರವರೆಗೆ ನಡೆಯಲಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಹಿಂದೆ ಮಾಹಿತಿಗಾಗಿ ಬಿಡುಗಡೆ ಮಾಡಿದ್ದ ಕೊನೆಯ ಕರಡಿನಲ್ಲಿದ್ದ ಬಹುತೇಕ ಎಲ್ಲಾ ನಿಬಂಧನೆಗಳನ್ನು ಮಸೂದೆ ಒಳಗೊಂಡಿದೆ ಎಂದು ಮೂಲಗಳು ಹೇಳಿವೆ.

ಪ್ರಸ್ತಾವಿತ ಮಸೂದೆಯಲ್ಲಿ ಸರ್ಕಾರಿ ಘಟಕಗಳಿಗೆ ಕೂಡ ವಿನಾಯಿತಿ ನೀಡಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Data Protection Bill: ಡಿಜಿಟಲ್ ಜಗತ್ತಿಗೆ ಡಿಜಿಟಲ್ ಸಂವಿಧಾನ ಬರೆದಂತೆ; ದತ್ತಾಂಶ ಸುರಕ್ಷಾ ಕಾಯ್ದೆಯ ಬಗ್ಗೆ ರಾಜೀವ್ ಚಂದ್ರಶೇಖರ್

ವಿವಾದಗಳ ಸಂದರ್ಭದಲ್ಲಿ, ಡಾಟಾ ಸಂರಕ್ಷಣಾ ಮಂಡಳಿಯು ನಿರ್ಧಾರ ಕೈಗೊಳ್ಳಲಿದೆ. ನಾಗರಿಕರು ಸಿವಿಲ್ ನ್ಯಾಯಾಲಯವನ್ನು ಸಂಪರ್ಕಿಸುವ ಮೂಲಕ ಪರಿಹಾರವನ್ನು ಪಡೆದುಕೊಳ್ಳುವ ಹಕ್ಕನ್ನೂ ಹೊಂದಿರುತ್ತಾರೆ. ಈ ಮಸೂದೆಯಲ್ಲಿ ಇನ್ನಷ್ಟು ವಿಷಯಗಳ ಸೇರ್ಪಡೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಕಾನೂನು ಜಾರಿಗೆ ಬಂದ ನಂತರ ವ್ಯಕ್ತಿಗಳು ತಮ್ಮ ಡಾಟಾ ಸಂಗ್ರಹಣೆ ಮತ್ತು ಸಂಸ್ಕರಣೆಯ ಬಗ್ಗೆ ವಿವರಗಳನ್ನು ಪಡೆಯುವ ಹಕ್ಕನ್ನು ಹೊಂದಿರುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್