AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12,000 ಕೋಟಿ ರೂ ವೆಚ್ಚದಲ್ಲಿ ಡೆಲ್ಲಿ ಮೆಟ್ರೋ ವಿಸ್ತರಣೆ; ಬರಲಿವೆ 13 ಹೊಸ ನಿಲ್ದಾಣಗಳು; ಸಂಪುಟ ಅನುಮೋದನೆ

Delhi Metro network to be expanded beyond 400km: ಡೆಲ್ಲಿ ಮೆಟ್ರೋ ಐದನೇ ಹಂತದ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ಕೊಟ್ಟಿದೆ. 12,000 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ಜಾಲ ವಿಸ್ತರಣೆಯಾಗಲಿದೆ. ಮೂರು ಕಾರಿಡಾರ್​ಗಳಲ್ಲಿ ಒಟ್ಟು 16 ಕಿಮೀಯಷ್ಟು ಜಾಲ ವಿಸ್ತರಣೆ ಆಗುತ್ತದೆ. 3 ಎಲಿವೇಟೆಡ್ ನಿಲ್ದಾಣ ಸೇರಿ 13 ಹೊಸ ಮೆಟ್ರೋ ಸ್ಟೇಷನ್​ಗಳು ಸ್ಥಾಪನೆಯಾಗಲಿವೆ.

12,000 ಕೋಟಿ ರೂ ವೆಚ್ಚದಲ್ಲಿ ಡೆಲ್ಲಿ ಮೆಟ್ರೋ ವಿಸ್ತರಣೆ; ಬರಲಿವೆ 13 ಹೊಸ ನಿಲ್ದಾಣಗಳು; ಸಂಪುಟ ಅನುಮೋದನೆ
ಡೆಲ್ಲಿ ಮೆಟ್ರೋ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 24, 2025 | 4:47 PM

Share

ನವದೆಹಲಿ, ಡಿಸೆಂಬರ್ 24: ಡೆಲ್ಲಿ ಮೆಟ್ರೋ ಜಾಲ (Delhi Metro) ಮತ್ತಷ್ಟು ವಿಸ್ತರಣೆಯಾಗಲಿದೆ. 12,015 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ವಿಸ್ತರಣೆಯ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಎ ವೈಷ್ಣವ್ ಅವರು ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಡೆಲ್ಲಿ ಮೆಟ್ರೋ ಫೇಸ್-5 (ಎ) ಪ್ರಾಜೆಕ್ಟ್ ಅಡಿಯಲ್ಲಿ ಮೂರು ಹೊಸ ಕಾರಿಡಾರ್ ಮೊದಲಾದವರು ನಿರ್ಮಾಣವಾಗಲಿವೆ. ಈ ಮೂರು ಕಾರಿಡಾರ್​ಗಳ ಒಟ್ಟು ಉದ್ದ 16.076 ಕಿಮೀ ಆಗಿರಲಿದೆ.

ಪ್ರಸ್ತಾಪವಾಗಿರುವ ಯೋಜನೆಯಲ್ಲಿ 16 ಕಿಮೀ ಜಾಲ ವಿಸ್ತರಣೆ ಆಗುವುದರ ಜೊತೆಗೆ 13 ಹೊಸ ಮೆಟ್ರೋ ಸ್ಟೇಷನ್​ಗಳು ನಿರ್ಮಾಣವಾಗಲಿವೆ. ಈ ಪೈಕಿ 10 ಸುರಂಗ ನಿಲ್ದಾಣಗಳಾದರೆ, ಉಳಿದ ಮೂರು ಎಲಿವೇಟೆಡ್ ನಿಲ್ದಾಣವಾಗಲಿವೆ. ಸದ್ಯ ಡೆಲ್ಲಿ ಮೆಟ್ರೋ ಭಾರತದಲ್ಲಿರುವ ಅತಿದೊಡ್ಡ ಮೆಟ್ರೋ ಜಾಲ ಎನಿಸಿದೆ. 395 ಕಿಮೀ ಉದ್ದದ ನೆಟ್ವರ್ಕ್ ಹೊಂದಿದೆ. ಈಗ ಐದನೇ ಹಂತದ ಮೆಟ್ರೋ ಕಾಮಗಾರಿ ಪೂರ್ಣಗೊಂಡರೆ, ಇದರ ಒಟ್ಟು ಜಾಲ 400 ಕಿಮೀ ದಾಟುತ್ತದೆ.

ಇದನ್ನೂ ಓದಿ: ದೆಹಲಿ ಮಾಲಿನ್ಯದ ಭೀಕರತೆಯನ್ನು ತೆರೆದಿಟ್ಟ ಸಚಿವ ನಿತಿನ್ ಗಡ್ಕರಿ

ಡೆಲ್ಲಿ ಮೆಟ್ರೋದ ಹೊಸ ಪ್ರಸ್ತಾವಿತ ಮೂರು ಕಾರಿಡಾರ್​ಗಳಿವು…

  • ಆರ್.ಕೆ. ಆಶ್ರಮ್ ಮಾರ್ಗ್​ನಿಂದ ಇಂದ್ರಪ್ರಸ್ಥವರೆಗೆ 9.913 ಕಿಮೀ.
  • ಏರೋಸಿಟಿಯಿಂದ ಇಂದಿರಾಗಾಂಧಿ ಏರ್​ಪೋರ್ಟ್ ಟರ್ಮಿನಲ್ 1ರವರೆಗೆ 2.263 ಕಿಮೀ
  • ತುಘಲಕಾಬಾದ್​ನಿಂದ ಕಾಲಿಂದಿ ಕುಂಜ್​ವರೆಗೆ 3.9 ಕಿಮೀ.

ಭಾರತದ ಮೆಟ್ರೋ ಜಾಲ, ಡಿಲ್ಲಿ ನಂ. 1

ಭಾರತದ ಕೆಲವು ನಗರಗಳಲ್ಲಿ ಮೆಟ್ರೋ ರೈಲು ಸೇವೆ ಇದೆ. ಡೆಲ್ಲಿ ಮೆಟ್ರೋ 400 ಕಿಮೀಯೊಂದಿಗೆ ಅತಿದೊಡ್ಡ ಜಾಲ ಹೊಂದಿದೆ. ಬೆಂಗಳೂರಿನ ನಮ್ಮ ಮೆಟ್ರೋ ಎರಡನೇ ಸ್ಥಾನ ಪಡೆಯುತ್ತದೆ. ಇದು ಸುಮಾರು 100 ಕಿಮೀ ಜಾಲ ಹೊಂದಿದೆ. ಹೈದರಬಾದ್, ಮುಂಬೈ ಮತ್ತು ಕೋಲ್ಕತಾದ ಮೆಟ್ರೋಗಳ ಜಾಲ 50ರಿಂದ 80 ಕಿಮೀ ಇದೆ.

ಇದನ್ನೂ ಓದಿ: ಇಸ್ರೋದಿಂದ ಐತಿಹಾಸಿಕ ಸಾಧನೆ, ಬ್ಲೂಬರ್ಡ್​ ಬ್ಲಾಕ್-2 ಇಂಟರ್ನೆಟ್ ಉಪಗ್ರಹ ಯಶಸ್ವಿ ಉಡಾವಣೆ

ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಸಿಸ್ಟಂ ಭಾರತದ್ದು…

ಭಾರತದ ಮೆಟ್ರೋ ಜಾಲವು ವಿಶ್ವದಲ್ಲೇ ಮೂರನೇ ಗರಿಷ್ಠ ಮಟ್ಟದ್ದೆನಿಸಿದೆ. ಡೆಲ್ಲಿ ಮೆಟ್ರೋ, ಬೆಂಗಳೂರು ಮೆಟ್ರೋ ಸೇರಿ ಒಟ್ಟು ಮೆಟ್ರೋಗಳ ಒಟ್ಟೂ ಜಾಲ ಸುಮಾರು 1,000ದಿಂದ 1,100 ಕಿಮೀಯಷ್ಟಾಗುತ್ತದೆ.

ಮೆಟ್ರೋ ಮತ್ತು ಹೈಸ್ಪೀಡ್ ನೆಟ್ವರ್ಕ್​ನಲ್ಲಿ ಬಹಳ ಮುಂದಿರುವ ಚೀನಾದಲ್ಲಿ ಬರೋಬ್ಬರಿ 11,000ಕ್ಕೂ ಅಧಿಕ ಕಿಮೀಗಳಷ್ಟು ಮೆಟ್ರೋ ಜಾಲ ಇದೆ. ಅಮೆರಿಕ ತನ್ನ ವಿವಿಧ ನಗರಗಳನ್ನು ಸೇರಿಸಿದರೆ ಸುಮಾರು 1,400 ಕಿಮೀ ಮೆಟ್ರೋ ಜಾಲ ಹೊಂದಿದೆ. ನಂತರದ ಸ್ಥಾನ ಭಾರತದ್ದು. ಆದರೆ, ವಿವಿಧ ನಗರಗಳಲ್ಲಿ ಮೆಟ್ರೋ ಜಾಲ ಕ್ಷಿಪ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲ ವರ್ಷಗಳಲ್ಲಿ ಭಾರತದ ಮೆಟ್ರೋ ಜಾಲ ಅಮೆರಿಕದ್ದನ್ನೂ ಮೀರಿಸುವ ಸಂಭವ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್